ಬ್ರೇಕಿಂಗ್ ನ್ಯೂಸ್

ಬೆಂಗಳೂರು ವಿವಿ: ದಲಿತರಿಗಾಗುತ್ತಿರುವ ಅನ್ಯಾಯ ಖಂಡಿಸಿ 10 ಪ್ರಾಧ್ಯಾಪಕರು ರಾಜೀನಾಮೆ

ಬೆಂಗಳೂರು ವಿಶ್ವವಿದ್ಯಾಲಯದ ಶಾಸನಬದ್ಧ ಹುದ್ದೆಗಳ ನೇಮಕಾತಿ ವಿಷಯದಲ್ಲಿ ವಿಶ್ವವಿದ್ಯಾಲಯದ ಬಹುಸಂಖ್ಯಾತ ದಲಿತರಿಗೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆಕ್ಷೇಪಿಸಿರುವ ಹತ್ತು ಮಂದಿ ದಲಿತ ಪ್ರಾಧ್ಯಾಪಕರು ತಮ್ಮ ಆಡಳಿತಾತ್ಮಕ ಜವಾಬ್ದಾರಿಗಳಿಗೆ ರಾಜೀನಾಮೆ ಘೋಷಿಸಿದ್ದಾರೆ. ಈ ಕುರಿತು...

ಸಿಎಸ್‌ ವಿರುದ್ಧ ಮಾನಹಾನಿ ಹೇಳಿಕೆ: ರವಿಕುಮಾರ್ ವಿರುದ್ಧ ಪ್ರಕರಣ ದಾಖಲಿಸಲು ಡಿಜಿಪಿಗೆ ‘ಒಡನಾಡಿ’ ಪತ್ರ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್‌ಸಿ ಎನ್‌ ರವಿಕುಮಾರ್‌ ವಿರುದ್ಧ ಎಪ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮೈಸೂರಿನ 'ಒಡನಾಡಿ' ಸಂಸ್ಥೆಯ...

ಹೆಚ್ಚುತ್ತಿರುವ ಹೃದಯಾಘಾತ | ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು...

ಉಡುಪಿ | ರಸ್ತೆಯಲ್ಲಿ ದನದ ರುಂಡ ಪತ್ತೆಯಾದ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಕುಂಜಾಲು ಜಂಕ್ಷನ್ ಆಟೋ ನಿಲ್ದಾಣದ ಮುಂಭಾಗದ ರಸ್ತೆ ಬದಿಯಲ್ಲಿ ಶನಿವಾರ ತಡರಾತ್ರಿ ಗೋವಿನ ರುಂಡ ಹಾಗೂ ಚರ್ಮ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿಂತೆ ಉಡುಪಿ ಪೊಲೀಸರು...

ತೆಲಂಗಾಣ | ಫಾರ್ಮಾ ಪ್ಲಾಂಟ್‌ನಲ್ಲಿ ಸ್ಪೋಟ: 12 ಮಂದಿ ಸಾವು, ಹಲವರಿಗೆ ಗಾಯ

ತೆಲಂಗಾಣದ ನೆರೆಯ ಸಂಗರೆಡ್ಡಿ ಜಿಲ್ಲೆಯ ಫಾರ್ಮಾ ಪ್ಲಾಂಟ್‌ನಲ್ಲಿ ಸೋಮವಾರ ಸ್ಪೋಟ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ 14 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ...

BREAKING NEWS | ತ್ರಿಭಾಷಾ ನೀತಿ ಕುರಿತ ನಿರ್ಣಯ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಮಹಾರಾಷ್ಟ್ರ ಸರ್ಕಾರ ತ್ರಿಭಾಷಾ ನೀತಿಯ ಕುರಿತ ನಿರ್ಣಯವನ್ನು ರದ್ದುಗೊಳಿಸಿದ್ದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಭಾಷಾ ಸೂತ್ರ ಅನುಷ್ಠಾನದ ಕುರಿತು ಸಮಿತಿ ರಚನೆಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, "ಡಾ....

ಬೂಕರ್ ವಿಜೇತೆ ಬಾನು ಮುಷ್ತಾಕ್‌ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ

ಡಿಸೆಂಬರ್‌ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರ ಹೆಸರನ್ನು ಘೋಷಿಸಲಾಗಿದೆ. ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್...

ಒಡಿಶಾ | ಪುರಿಯ ದೇವಸ್ಥಾನದಲ್ಲಿ ಕಾಲ್ತುಳಿತ: ಮೂವರ ಸಾವು, 50 ಕ್ಕೂ ಹೆಚ್ಚು ಜನರಿಗೆ ಗಾಯ

ಒಡಿಶಾದ ಪುರಿಯ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಭಾನುವಾರ ಬೆಳಿಗ್ಗೆ ಕಾಲ್ತುಳಿತ ಸಂಭವಿಸಿ ಮೂವರು ಭಕ್ತರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ 4.30 ರ ಸುಮಾರಿಗೆ ಶ್ರೀ...

ದೇವನಹಳ್ಳಿ ಚಲೋ | ಕಾಯಿಸಿ ಕಾಯಿಸಿ ಕೊನೆಗೆ ಹೋರಾಟಗಾರರಿಗೆ ಸಿಎಂ ಭೇಟಿ ಮಾಡಲು ಅವಕಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹದಿಮೂರು ಹಳ್ಳಿಗಳ ರೈತರ 1,777 ಎಕರೆ ಭೂಮಿಯನ್ನು ವಶಪಡಿಸಿಕೊಂಡು ಕಾರ್ಪೊರೇಟ್ ಕಂಪನಿಗಳಿಗೆ ನೀಡಲು ರಾಜ್ಯ ಸರ್ಕಾರ ವಿರುದ್ಧ ರೈತರು ಪ್ರತಿಭಟಿಸುತ್ತಿರುವ ಹೋರಾಟವನ್ನು ಹತ್ತಿಕ್ಕಲು...

ಆಕ್ಸಿಯಮ್​ ಮಿಷನ್-4 | ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ನೇತೃತ್ವದ ತಂಡ ಹೊತ್ತ ‘ಫಾಲ್ಕನ್-9’ ರಾಕೆಟ್ ನಭಕ್ಕೆ

ಬಾಹ್ಯಾಕಾಶ ಯೋಜನೆ 'ಆಕ್ಸಿಯಮ್​ ಮಿಷನ್-4'​ ಅನ್ನು ಪದೇ ಪದೆ ಮುಂದೂಡಿದ ನಂತರ ಭಾರತೀಯರು ಕುತೂಹಲದಿಂದ ಕಾಯುತ್ತಿದ್ದ ಐತಿಹಾಸಿಕ ಕ್ಷಣ ಈಡೇರಿದೆ. 'ಆ್ಯಕ್ಷಿಯಂ-4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು (ಜೂ.25)...

ಇರಾನ್-ಇಸ್ರೇಲ್ ಸಂಘರ್ಷ | ಇಸ್ರೇಲ್‌ಗೆ ಅವಾಚ್ಯ ಶಬ್ದಗಳಿಂದ ಬೈದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!

ಇಸ್ರೇಲ್ ಹಾಗೂ ಇರಾನ್ ನಡುವೆ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಕದನಕ್ಕೆ ವಿರಾಮ ಘೋಷಣೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಘೋಷಿಸಿದ್ದರೂ ದಾಳಿ ನಿಂತಿರಲಿಲ್ಲ. ಈ ಸಂಘರ್ಷದ ನಡುವೆಯೇ ಅಮೆರಿಕ ಅಧ್ಯಕ್ಷ...

ಕತಾರ್‌ನಲ್ಲಿರುವ ಅಮೆರಿಕ ವಾಯುನೆಲೆ ಮೇಲೆ 6 ಕ್ಷಿಪಣಿ ಉಡಾಯಿಸಿದ ಇರಾನ್; ಪರಿಸ್ಥಿತಿ ಉದ್ವಿಗ್ನ

ಇರಾನ್‌ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ಮಾಡಿದ್ದ ಬೆನ್ನಲ್ಲೇ, ಇರಾನ್ ಪ್ರತಿದಾಳಿ ಮಾಡಿದೆ. ಕತಾರ್‌ನ ದೋಹಾದಲ್ಲಿರುವ ಅಮೆರಿಕದ ಅಲ್ ಉದೈದ್ ವಾಯುನೆಲೆ ಮೇಲೆ ಇರಾನ್ ಆರು ಕ್ಷಿಪಣಿಗಳನ್ನು ಉಡಾಯಿಸಿದೆ. ಇರಾನ್ ದಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X