ಬ್ರೇಕಿಂಗ್ ನ್ಯೂಸ್

ಆಪರೇಷನ್ ಸಿಂಧೂರ | ಪುಲ್ವಾಮಾ ದಾಳಿಕೋರರು ಸೇರಿ 100ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ: ಎ ಕೆ ಭಾರ್ತಿ

ಮೇ 7 ರಂದು ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಪುಲ್ವಾಮಾ ದಾಳಿಕೋರರು ಸೇರಿದಂತೆ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಏರ್ ಮಾರ್ಷಲ್ ಎ ಕೆ ಭಾರ್ತಿ ಮಾಹಿತಿ ನೀಡಿದರು. ಭಾನುವಾರ...

ಆಪರೇಷನ್ ಸಿಂಧೂರ್ ಮುಂದುವರೆಯಲಿದೆ: ಭಾರತೀಯ ವಾಯುಪಡೆ ಮಾಹಿತಿ

ಆಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್​) ಮಾಹಿತಿ ನೀಡಿದೆ. ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ ಕಾರ್ಯಗಳನ್ನು ಅತ್ಯಂತ ನಿಖರತೆ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ...

BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ "ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಕೂಡಾ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ...

ಭವಿಷ್ಯದ ಯಾವುದೇ ಭಯೋತ್ಪಾದಕ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲು ಭಾರತ ನಿರ್ಧಾರ: ವರದಿ

ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧ ಪಾಕಿಸ್ತಾನ ನಡೆಸುವ ಯುದ್ಧವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ನಿರ್ಧರಿಸಿದೆ ಎಂದು ವರದಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ...

ಪಾಕಿಸ್ತಾನದಿಂದ ಶೆಲ್ ದಾಳಿ: ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಮೃತ್ಯು

ದೇಶ ಗಡಿಭಾಗದಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದ್ದು, ಪಾಕಿಸ್ತಾನ ಸೇನೆಯು ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ರಾತ್ರಿಯ ಸಮಯದಲ್ಲಿ ಶೆಲ್ ದಾಳಿ ನಡೆಸುವುದನ್ನು ಮುಂದುವರಿಸಿದೆ. ಪಾಕಿಸ್ತಾನವು ಶುಕ್ರವಾರ ರಾತ್ರಿ...

300-400 ಟರ್ಕಿ ನಿರ್ಮಿತ ಡ್ರೋನ್‌ ಕಳುಹಿಸಿದ ಪಾಕ್, ಬಹುತೇಕ ಹೊಡೆದುರುಳಿಸಿದ್ದೇವೆ: ಕರ್ನಲ್ ಖುರೇಷಿ

ಸುಮಾರು 36 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ 300-400 ಟರ್ಕಿ ನಿರ್ಮಿತ ಡ್ರೋನ್‌ಗಳನ್ನು ಕಳುಹಿಸಿದೆ. ನಾವು ಬಹುತೇಕ ಡ್ರೋನ್‌ಗಳನ್ನು ಹೊಡೆದುರುಳಿಸಿದ್ದೇವೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಆಪರೇಷನ್‌ ಸಿಂಧೂರ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ...

BREAKING NEWS | ಭಾರತ-ಪಾಕ್ ಸಂಘರ್ಷ ಹಿನ್ನೆಲೆ ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) - 2025 ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿರುವುದಾಗಿ ಬಿಸಿಸಿಐ ಘೋಷಿಸಿದೆ. ಶುಕ್ರವಾರ ನಡೆದ ಬಿಸಿಸಿಐ ತುರ್ತು ಸಭೆಯಲ್ಲಿ ಐಪಿಎಲ್...

ನೂತನ ಪೋಪ್ ಆಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್ ಆಯ್ಕೆ

132 ಕಾರ್ಡಿನಲ್ಸ್ ಭಾಗವಹಿಸಿದ್ದ ಕಾಂಕ್ಲೇವ್ ನಲ್ಲಿ ಕ್ರೈಸ್ತರ ನೂತನ ವಿಶ್ವ ಗುರು(ಪೋಪ್) ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ವ್ಯಾಟಿಕನ್ ಸಿಟಿಯಲ್ಲಿರುವ ಸಿಸ್ಟೀನ್ ಚಾಪೆಲ್ ಚಿಮಣಿಯಿಂದ ಶ್ವೇತ ವರ್ಣದ ಹೊಗೆ ಹೊರಹೊಮ್ಮುತ್ತಿದ್ದಂತೆ ಸೈಂಟ್...

ಗಡಿ ದಾಟಲು ಪ್ರಯತ್ನಿಸುತ್ತಿದ್ದ ಪಾಕ್ ಪ್ರಜೆ ಭಾರತೀಯ ಸೇನೆಯ ಗುಂಡಿಗೆ ಬಲಿ

ಪಂಜಾಬ್‌ನ ಗಡಿಯ ಬಳಿ ಗಡಿ ನುಸುಳಲು ಪ್ರಯತ್ನಿಸುತ್ತಿದ್ದ ಪಾಕ್‌ ಪ್ರಜೆಯೊಬ್ಬ ಗಡಿ ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾನೆ. ಸೇನೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಗಡಿ ದಾಟುತ್ತಿದ್ದಾಗ ಯೋಧರು ಗುಂಡು ಹಾರಿಸಿದ್ದಾರೆ. ಆಪರೇಷನ್‌ ಸಿಂಧೂರ್‌...

ಉತ್ತರಾಖಂಡ | ಖಾಸಗಿ ಹೆಲಿಕಾಪ್ಟರ್ ಪತನ; ಐವರು ಸಾವು

ಉತ್ತರಾಖಂಡ್‌ನ ಉತ್ತರಕಾಶಿ ಜಿಲ್ಲೆಯಲ್ಲಿ ಗಂಗೋತ್ರಿಗೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್‌ ಪತನವಾಗಿ ಐವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೂಲಗಳ ಪ್ರಕಾರ 7 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ಪತನವಾದ...

ಲಾಹೋರ್‌ ಮಿಲಿಟರಿ ವಿಮಾನ ನಿಲ್ದಾಣದ ಬಳಿ ಸ್ಫೋಟ

ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ. ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ....

ಜಮ್ಮು- ಕಾಶ್ಮೀರ | ಪೂಂಚ್‌ನಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: 15 ಮಂದಿ ನಾಗರಿಕರು ಮೃತ್ಯು; 43 ಮಂದಿಗೆ ಗಾಯ

ಪಹಲ್ಗಾಮ್‌ ಉಗ್ರದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಅಕ್ರಮಿತ ಕಾಶ್ಮೀರದ ಸುಮಾರು ಒಂಭತ್ತು ಕಡೆಗಳಲ್ಲಿ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಉಗ್ರರು ಮತ್ತು ಅವರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X