ಬ್ರೇಕಿಂಗ್ ನ್ಯೂಸ್

Breaking News | ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ನಿಧನ

ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ಅವರು ವಯೋಸಹಜವಾಗಿ ಬುಧವಾರ ಸಾವನ್ನಪ್ಪಿದ್ದಾರೆ. ಅವರಿಗೆ 94 ವಯಸ್ಸಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು...

ಏಕರೂಪ ಸಿನೆಮಾ ದರ ನಿಯಮಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ ₹200 ಮೊತ್ತದ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್...

BREAKING | ಆಳಂದ ಮತದಾರರ ಹೆಸರು ಕೈಬಿಟ್ಟ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿ ಬಿ ಕೆ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ತಂಡ ರಚನೆ

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 6670 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಈ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿಯಲ್ಲಿ...

ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಮಲಯಾಳಂ ಸಿನಿಮಾದ ಹಿರಿಯ ನಟ ಮೋಹನ್‌ಲಾಲ್ ಅವರಿಗೆ 2023ರ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಭಾರತದ ಚಿತ್ರರಂಗದಲ್ಲಿ ಅತ್ಯುನ್ನತ ಗೌರವವೆನಿಸಿದ ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 23, 2025ರಂದು ನಡೆಯಲಿರುವ 71ನೇ ರಾಷ್ಟ್ರೀಯ...

ಕೆಎಂಎಫ್‌ ಉತ್ಪನ್ನಗಳ ಮೇಲಿನ ದರ ಇಳಿಕೆ, ಹಾಲು & ಮೊಸರಿನ ದರ ಯಥಾಸ್ಥಿತಿ: ಬಿ. ಶಿವಸ್ವಾಮಿ

ಕೇಂದ್ರ ಸರ್ಕಾರ ಶೇ.12ರಿಂದ 5ಕ್ಕೆ ಜಿಎಸ್​​ಟಿ ಕಡಿತ ಮಾಡಿದ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಕೆಎಂಎಫ್​​ ತನ್ನ ನಂದಿನಿ ಹಾಲಿನ ಕೆಲವು ಉತ್ಪನ್ನಗಳ ಮೇಲಿನ ದರ ಇಳಿಕೆ ಮಾಡಿದೆ. ಸೆ.22ರಿಂದ ಹೊಸ ದರ ಜಾರಿಗೆ...

ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಮುಂದೂಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವಿಳಂಬವಾಗಲಿದೆ ಎಂದು...

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸದಂತೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ, ನಾಳೆ ವಿಚಾರಣೆ

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್‌ ಅಂಗಳಕ್ಕೂ ತಲುಪಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹೆಚ್‌ ಎಸ್‌ ಗೌರವ್‌...

ಅಕ್ರಮ ಗಣಿ ಗುತ್ತಿಗೆ ಪರವಾನಗಿ ಆರೋಪ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಕೋರಿದ್ದ ಅರ್ಜಿ ವಜಾ

ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಗಿ ನೀಡಿದ್ದಾರೆ ಎನ್ನುವ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ‌ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಕರ್ನಾಟಕ...

ಕರ್ನಾಟಕದ ಆಳಂದದಲ್ಲಿ 6,000 ಮತಗಳ ‘ಡಿಲೀಟ್’ ಯತ್ನ: ಪುರಾವೆ ಸಹಿತ ವಿವರಿಸಿದ ರಾಹುಲ್ ಗಾಂಧಿ

ಕರ್ನಾಟಕದ ಕಲಬುರಗಿಯ ಆಳಂದದಲ್ಲಿ ಆರು ಸಾವಿರ ಮತಗಳನ್ನು ಅಳಿಸುವ ಯತ್ನ ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪುರಾವೆ ಸಹಿತ ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ವಿವರ ನೀಡಿರುವ ರಾಹುಲ್...

ಧರ್ಮಸ್ಥಳ | ಬಂಗ್ಲೆಗುಡ್ಡೆ ಸ್ಥಳದಲ್ಲಿ ಎಸ್‌ಐಟಿ ಶೋಧ, 9 ಕಡೆ ಮಾನವನ ಮೂಳೆಗಳು ಪತ್ತೆ!

ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಮತ್ತಷ್ಟು ಜೀವ ಬಂದಿದೆ. ಎಸ್‌ಐಟಿಯಿಂದ ಬುಧವಾರ ನಡೆದ ಬಂಗ್ಲೆಗುಡ್ಡೆ ಕಾಡಿನೊಳಗಿನ ಸ್ಥಳ ಮಹಜರು ವೇಳೆ ಒಂಬತ್ತು ಕಡೆ ಮಾನವನ...

ಧರ್ಮಸ್ಥಳ | ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆ ಪತ್ತೆ, ವ್ಯಾಪಕ ಶೋಧಕ್ಕೆ ಮುಂದಾದ ಎಸ್‌ಐಟಿ

ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೆ ವ್ಯಾಪಕ ಶೋಧ ಕಾರ್ಯಕ್ಕೆ ಮುಂದಾಗಿದೆ. ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ...

ಕೃಷ್ಣಾ ಮೇಲ್ದಂಡೆ ಯೋಜನೆ | ಭೂಮಿ ಖರೀದಿಗೆ ದರ ನಿಗದಿ, ಸರ್ಕಾರದಿಂದ ರೈತರಿಗೆ ಎಷ್ಟು ಪರಿಹಾರ?

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ ಅವಶ್ಯವಿರುವ ಜಮೀನು ಸ್ವಾಧೀನಕ್ಕಾಗಿ ಮತ್ತು ಪರಿಹಾರ ನಿಗದಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಳುಗಡೆಯಾಗುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X