ಈ ದಿನ ಫ್ಲ್ಯಾಶ್‌‌‌

ರಾಮನಗರ ಪಿಡಬ್ಲ್ಯೂಡಿ ಇಲಾಖೆಯಲ್ಲಿ ʼಜಿಎಸ್‌ಟಿ ಹಗರಣʼ: 12 ಕೋಟಿ ರೂ. ಗೋಲ್‌ಮಾಲ್ ಶಂಕೆ, ಆರ್‌ಟಿಐನಲ್ಲಿ ಬಯಲು

​ರಾಮನಗರ ವಿಶೇಷ ವಿಭಾಗದ ಲೋಕೋಪಯೋಗಿ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಕೋಟ್ಯಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿರುವ ಗಂಭೀರ ಆರೋಪವೊಂದು ಮಾಹಿತಿ ಹಕ್ಕು ಕಾಯಿದೆಯಡಿ ಪಡೆದ ದಾಖಲೆಗಳಿಂದ ಬಯಲಾಗಿದೆ....

ಭಾರತ-ಪಾಕ್ ಉದ್ವಿಗ್ನತೆ | ‘ದಯವಿಟ್ಟು ಹಾಗೆ ಮಾಡಬೇಡಿ’ ಎಂದು ಬೇಡಿಕೊಂಡರು: 80ನೇ ಬಾರಿ ಸುಂಕ ಬೆದರಿಕೆ ಕತೆ ಹೇಳಿದ ಟ್ರಂಪ್

2025ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸಂಘರ್ಷವನ್ನು ಸುಂಕ ಹೆಚ್ಚಿಸುವ ಬೆದರಿಕೆ ಹಾಕಿ ತಾವೇ ನಿಲ್ಲಿಸಿದ್ದು ಎಂಬ ತಮ್ಮ ಹಳೆಯ ಕತೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಗುರುವಾರ ಪುನರುಚ್ಚರಿಸಿದ್ದಾರೆ....

ಕಲ್ಯಾಣ ಕರ್ನಾಟಕದಲ್ಲಿ ಹೊಸ 6 ಜಿಲ್ಲೆ, 12 ತಾಲೂಕು ರಚನೆಗೆ ಒತ್ತಾಯ

ಭವಿಷ್ಯದ ಅಭಿವೃದ್ಧಿ ಮತ್ತು ಕ್ಷೇತ್ರ ವಿಂಗಡಣೆ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂ 6 ಹೊಸ ಜಿಲ್ಲೆಗಳು ಹಾಗೂ 12 ತಾಲೂಕುಗಳನ್ನು ರಚಿಸಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಒತ್ತಾಯಿಸಿದೆ. ಕೇಂದ್ರ ಸರಕಾರ...

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 993 ರೂ. ಏರಿಕೆ! ಬೆಂಗಳೂರಿನಲ್ಲಿ ದರವೆಷ್ಟು?

ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಜಾಗತಿಕ ಇಂಧನ ಬೆಲೆಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸತತ ಮೂರನೇ ಬಾರಿಗೆ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಶುಕ್ರವಾರ (ಮೇ 1)...

ಬಂಗಾಳದಲ್ಲಿ ಚುನಾವಣಾ ಹೈಡ್ರಾಮಾ: ಸ್ಟ್ರಾಂಗ್ ರೂಮ್‌ನಲ್ಲಿ ನಡುರಾತ್ರಿ ನಡೆದಿದ್ದೇನು?

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಗಾಳಿ ಜೊತೆಗೆ ರಾಜಕೀಯ ಹೈಡ್ರಾಮ ನಡೆಯುತ್ತಿದೆ. ಮೇ 4ರಂದು ನಡೆಯಲಿರುವ ಮತ ಎಣಿಕೆಗೂ ಮುನ್ನವೇ ಮತಗಳ ಸುರಕ್ಷತೆಯ...

ದಾವಣಗೆರೆ | ಹವಾಮಾನ ವೈಪರೀತ್ಯ, ಭಾರೀ ಮಳೆ ಮುನ್ಸೂಚನೆ; ಮುನ್ನೆಚ್ಚರಿಕೆಗೆ ಜಿಲ್ಲಾಧಿಕಾರಿ ಸೂಚನೆ

ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ದಾವಣಗೆರೆ...

ದಾವಣಗೆರೆ | ಸುಪ್ರೀಂ ಕೋರ್ಟ್‌ ಪ್ರಕರಣಗಳ ರಾಜಿಗೆ ವಿಶೇಷ ಲೋಕ ಅದಾಲತ್; ನ್ಯಾ. ಮಹಾವೀರ ಕರೆಣ್ಣನವರ

2026, ಆಗಸ್ಟ್ 21-23 ರವರೆಗೆ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸರ್ವೋಚ್ಚ ನ್ಯಾಯಾಲಯ (ಸುಪ್ರೀಂ ಕೋರ್ಟ್) ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಮುಂದಾಗಬೇಕು ಹಾಗೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು  ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ ಕರೆಣ್ಣನವರ  ಅವರು ಸಲಹೆ ನೀಡಿದರು.  ಹಳೆಯ ನ್ಯಾಯಾಲಯ ಕಟ್ಟಡದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿಗುರುವಾರ  ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...

ಬೀದರ್‌ | ಭೀಕರ ರಸ್ತೆ ಅಪಘಾತ : ಮೂವರು ಬೈಕ್‌ ಸವಾರರು ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಸಮೀಪ ಗುರುವಾರ ತಡರಾತ್ರಿ ನಡೆದಿದೆ. ಭಾಲ್ಕಿ ತಾಲ್ಲೂಕಿನ...

ಮುಂಡಗೋಡ | NMD ಜಮೀರ್ ಹತ್ಯೆ ಪ್ರಕರಣ: ಪಿಸ್ತೂಲ್ ಪೂರೈಕೆಯಲ್ಲಿ ಸಹಕಾರ – 6ನೇ ಆರೋಪಿ ದಿಲ್‌ರಾಜ್ ದೆಹಲಿಯಲ್ಲಿ ಬಂಧನ

ಇಡೀ ಉತ್ತರ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಮುಂಡಗೋಡನ NMD ಜಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಹತ್ಯೆಗೆ ಬಳಸಲಾಗಿದ್ದ ಕಂಟ್ರಿ ಮೇಡ್ ಪಿಸ್ತೂಲ್‌ಗಳನ್ನು ಪೂರೈಸಲು ನೆರವಾಗಿದ್ದ ಆರೋಪಿ...

ಬೀದರ್‌ | ಡಾ.ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಲ್ಲ‌, ಅವರು ದೇಶದ ಆಸ್ತಿ : ಸಚಿವ ಸಂತೋಷ ಲಾಡ್

ಡಾ.ಬಿ.ಆರ್.‌ಅಂಬೇಡ್ಕರ್ ಅವರು ಸಂವಿಧಾನದ ಮುಖಾಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮಾತ್ರ ಅಲ್ಲ. ಇಡೀ ಹಿಂದೂ ಸಮಾಜಕ್ಕೆ ಹಕ್ಕುಗಳನ್ನು ನೀಡಿದ್ದಾರೆ. ಆದರೆ, ನಾವು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಎಸ್ಸಿ, ಎಸ್ಟಿ ಸಮುದಾಯಕ್ಕೆ...

ಉತ್ತರ ಕನ್ನಡ | ಸೇನೆ ಸೇರಲು ಬಯಸುವವರಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ: ಭಾರತೀಯ ಸೇನೆ ಹಾಗೂ ಇತರ ಸಮವಸ್ತ್ರಧಾರಿ ಸೇವೆಗಳಿಗೆ ಸೇರಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ...

ಪತ್ರಕರ್ತೆಯರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆರ್‌ ಪೂರ್ಣಿಮಾ ಅವಿರೋಧ ಆಯ್ಕೆ

ಕರ್ನಾಟಕ ಪತ್ರಕರ್ತೆಯರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆರ್‌ ಪೂರ್ಣಿಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಂಘದ...

ಈ ಹೊತ್ತಿನ ಪ್ರಮುಖ ಸುದ್ದಿ