ಈ ದಿನ ಫ್ಲ್ಯಾಶ್‌‌‌

SIR | ಸಿಜೆಪಿ ಪ್ರತಿಭಟನೆಗೂ ಮುನ್ನವೇ ದೆಹಲಿಯಲ್ಲಿ 1,000 ಮಂದಿ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಇಂದು (ಅ.10) 'ಕಾಕ್ರೋಚ್ ಜನತಾ ಪಾರ್ಟಿ' (CJP) ಮತ್ತು 'ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್' (AISA) ಪ್ರತಿಭಟನೆ ನಡೆಸುತ್ತಿವೆ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು ರಾಷ್ಟ್ರಪತಿಗಳು ಗಂಭೀರವಾಗಿ ಆಲಿಸಿದ್ದಾರೆ. ಮತ ಕಳ್ಳತನ ಮತ್ತು ಅಕ್ರಮಗಳ ಕುರಿತು ಸಾಕ್ಷ್ಯ ನೀಡುವಂತೆ ರಾಷ್ಟ್ರಪತಿಗಳು ಸೂಚಿಸಿದ್ದು, ಇದಕ್ಕೆ ಅಗತ್ಯವಿರುವ ಎಲ್ಲಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟದ 10 ಸದಸ್ಯರ ಉನ್ನತ ಮಟ್ಟದ ನಿಯೋಗವು ಶುಕ್ರವಾರ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದೆ. ದೇಶದ...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ "ಬಾಗಿಲು ಮುಚ್ಚಿಲ್ಲ" ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಈಗಲೂ ಹುಂಬತನದಿಂದ ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ ವಾಸ್ತವವೇನೆಂದರೆ, ಈ ಕೌನ್ಸಿಲ್‌ನ ಬಹುತೇಕ ಶಿಫಾರಸುಗಳು...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವಾಲಯದ ಅಂಡರ್ ಸೆಕ್ರೆಟರಿ ದೀಪಕಕುಮಾರ್ ಹಾಗೂ ಪ್ರಾಜೆಕ್ಟ್ ಡೈರೆಕ್ಟರ್ ಸಾಹು ಅವರನ್ನೊಳಗೊಂಡ ತಂಡ ಶುಕ್ರವಾರ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಅಂತಿಮವಾಗಿ 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 97,398 ಪದವೀಧರ ಮತದಾರರಿದ್ದು, 137 ಮತಗಟ್ಟೆಗಳನ್ನು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲಾ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಅ.12ರಂದು ಮಾಹಿತಿ...

‘ಜಂತರ್ ಮಂತರ್ ಪ್ರತಿಭಟನೆಗೆ ನನ್ನ ಕುಟುಂಬದೊಂದಿಗೆ ತೆರಳುವೆ, ನೀವೂ ಬನ್ನಿ’: ಜನತೆಗೆ ಕೇಜ್ರಿವಾಲ್ ಕರೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಕ್ಟೋಬರ್ 10 ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು ಅಕ್ಟೋಬರ್ 30, 31 ಹಾಗೂ ನವೆಂಬರ್ 1ರಂದು ಕಲಬುರಗಿ ನಗರದ ಕರುಣೇಶ್ವರ ನಗರದಲ್ಲಿರುವ ಕೆಪಿಟಿಸಿಎಲ್ ಭವನದಲ್ಲಿ ನಡೆಯಲಿದೆ ಎಂದು ಸಂಘಟನೆಯ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ ಪತ್ರದಲ್ಲಿ ‘ಚೌಕಸಿ ಮಾಡಿ’ ಎಂಬ ಉಲ್ಲೇಖವೇ ಇಲ್ಲ. ಆದರೂ ಶಾಸಕರ ಬೆಂಬಲಿಗರು ಪತ್ರವನ್ನು ಸಮರ್ಥಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ. ಇನ್ನೊಂದೆಡೆ, ವಿಜಯಪುರ ನಗರ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು ನೀಡಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಸಂಸದ ಹಾಗೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕ ಅಂಗೋಮ್ಚಾ ಬಿಮೋಲ್ ಅಕೋಯಿಜಾಮ್‌ ಅವರನ್ನು ಸೇವೆಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ