ಕರ್ನಾಟಕ

ವಾಲ್ಮೀಕಿ ಸಮುದಾಯದ ನಿಯೋಗ ದೆಹಲಿಗೆ ಹೋಗಲು ತೀರ್ಮಾನ: ಸಚಿವ ಸತೀಶ್‌ ಜಾರಕಿಹೊಳಿ

ಇಬ್ಬರು ವಾಲ್ಮೀಕಿ ಸಮುದಾಯದವರನ್ನೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಹೀಗಾಗಿ, ವಾಲ್ಮೀಕಿ ಸಮುದಾಯದ ನಾಯಕರಿಗೆ ಮರಳಿ ಸಚಿವ ಸ್ಥಾನ ನೀಡಬೇಕು ಎಂದು ಕೇಳಲು ನಾವು ದೆಹಲಿಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್‌...

ಅಧಿವೇಶನ | ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಸಚಿವ ಚಲುವರಾಯಸ್ವಾಮಿ

ಕೇಂದ್ರದಿಂದ ರಸಗೊಬ್ಬರ ಪೂರೈಕೆಯಲ್ಲಿ ಆಗಿರುವ ಕೊರತೆಯಿಂದಾಗಿ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಉಂಟಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಮಾಡದೇ ಒಂದಾಗಿ ರೈತರ ಹಿತ ಕಾಯಬೇಕಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ವಿಧಾನಸಭೆಯಲ್ಲಿ ಬುಧವಾರ ರಸಗೊಬ್ಬರ...

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವುದನ್ನು ವಿರೋಧಿಸಿ ಎಐಡಿಎಸ್‍ಒ-ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಕರ್ನಾಟಕ ರಾಜ್ಯ ಸಮಿತಿಯು ಹಮ್ಮಿಕೊಂಡಿದ್ದ ಐತಿಹಾಸಿಕ 50 ಲಕ್ಷ...

ಸ್ಮಾರ್ಟ್ ಮೀಟರ್ ವಿರುದ್ಧದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ

ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು...

ರಾಜ್ಯಾದ್ಯಂತ ಹಲವು ರೋಗಗಳಿಗೆ ತುತ್ತಾಗುತ್ತಿರುವ ಬೆಳೆಗಳು: ರೈತರ ಅನ್ನ ಕಸಿದ ಅಕಾಲಿಕ ಮಳೆ

ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹೈರಾಣಾಗುತ್ತಿದ್ದರೆ, ಇನ್ನೊಂದೆಡೆ ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆಗಳಿಲ್ಲದೆ ಆತಂಕದಲ್ಲಿ ದಿನದೂಡುತ್ತಿದ್ದಾರೆ. ರಾಜ್ಯಾದ್ಯಂತ 2025ರಲ್ಲಿ ಭಾರೀ ಮಳೆಯಿಂದಾಗಿ ರೈತರ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ವಿಜಯಪುರ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು,...

ಆ.17ರಂದು ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ, ಎಸ್‍ಐಟಿ ತನಿಖೆ ಶೀಘ್ರ ಮುಗಿಯಲಿ: ಬಿ ವೈ ವಿಜಯೇಂದ್ರ

ಆ.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಡಲಿದ್ದೇವೆ. ಮಂಜುನಾಥೇಶ್ವರನ ದರ್ಶನ ಪಡೆದು ಬರಲಿದ್ದೇವೆ ಎಂದು ತಿಳಿಸಿದರು. ನಾವು ಬಿಜೆಪಿ ಕಾರ್ಯಕರ್ತರು ಎಂಬುದಕ್ಕಿಂತ ಹೆಚ್ಚಾಗಿ ಧರ್ಮಸ್ಥಳ ಮಂಜುನಾಥೇಶ್ವರನ ಭಕ್ತರಾಗಿ ಅಲ್ಲಿಗೆ...

ಅಧಿವೇಶನ | 2 ಎಕರೆ ವರೆಗೆ ಕೃಷಿ ಭೂಮಿಯನ್ನು ಕೈಗಾರಿಕೆಗೆ ಪರಿವರ್ತಿಸಲು ವಿನಾಯಿತಿ

ವಿಧಾನಸಭೆಯಲ್ಲಿ ಬುಧವಾರ ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ ದೊರೆಯಿತು. ಈ ವಿಧೇಯಕದಲ್ಲಿ ಕೃಷಿ ಭೂಮಿ ಖರೀದಿ ಸಂಬಂಧ ಕೆಲವು ಕಾನೂನುಗಳನ್ನು ಸರಳೀಕರಣ ಮಾಡಲಾಗಿದೆ. ಕರ್ನಾಟಕದಲ್ಲಿ...

ಮಂಗಳೂರು | ಅಶ್ರಫ್ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ರವೀಂದ್ರನೇ ಕಿಂಗ್‌ಪಿನ್‌; ಚಾರ್ಜ್‌ಶೀಟ್‌ನಲ್ಲಿ ಗಂಭೀರ ವಿಚಾರಗಳು ಬಯಲು

ಕೇರಳ ಮೂಲದ ಅಶ್ರಫ್‌ ಗುಂಪು ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿರುವ ಪೊಲೀಸರು ನ್ಯಾಯಾಲಯಕ್ಕೆ ಜಾರ್ಟ್‌ಶೀಟ್‌ ಸಲ್ಲಿಸಿದ್ದಾರೆ. ಹತ್ಯೆಯಲ್ಲಿ ಬಿಜೆಪಿ ನಾಯಕ ರವೀಂದ್ರ ನಾಯಕ್ ಪಾತ್ರವಿದೆ ಎಂಬುದು ಖಚಿತವಾಗಿದೆ. ಮಾತ್ರವಲ್ಲದೆ, ಪ್ರಕರಣದಲ್ಲಿ ರವೀಂದ್ರ ಅವರ...

2030ಕ್ಕೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದು, 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ...

ಧರ್ಮಸ್ಥಳ ಪ್ರಕರಣ | 13 ಉತ್ಖನನ ಮಾಡಿದ ಜಾಗದಲ್ಲಿ ಈವರೆಗೆ ಏನೂ ಸಿಕ್ಕಿಲ್ಲ: ಪ್ರಲ್ಹಾದ ಜೋಶಿ

ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ...

ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ ಇಲ್ಲ. ಆದ್ರೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆಗಳು ಸಿಗುವುದು ಕಡಿಮೆ. ಉತ್ತಮ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ ಮಾಡಲು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X