ಬೆಳಗಾವಿ

ಬೆಳಗಾವಿ | ನ.1ರಂದು ಕರಾಳ ದಿನಾಚರಣೆಗೆ ಎಂಇಎಸ್ ನಿರ್ಣಯ; ಕನ್ನಡಪರ ಹೋರಾಟಗಾರರು ತೀವ್ರ ಹೋರಾಟದ ಎಚ್ಚರಿಕೆ

ನವೆಂಬರ್ 1ರಂದು ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯ ಕಾರ್ಯಕರ್ತರು ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯ ಕೈಗೊಂಡಿದ್ದಾರೆ. ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಎಂಇಎಸ್...

ಬೆಳಗಾವಿ | ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ

ಬೆಳಗಾವಿ-ಮನುಗೂರು ನಡುವೆ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಬೆಳಗಾವಿ ಮತ್ತು ಮನುಗೂರು ನಿಲ್ದಾಣಗಳ ನಡುವೆ ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ 07336 ಮನುಗೂರು-ಬೆಳಗಾವಿ ವಿಶೇಷ...

ಬೆಳಗಾವಿ | ಚಳಿಗಾಲ ಅಧಿವೇಶನದ ವೇಳೆಗೆ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ: ಬಿ ವೈ ವಿಜಯೇಂದ್ರ

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಗಳ ಪಟ್ಟಿ ದೊಡ್ಡದಿದ್ದು ಮುಂದಿನ ಚಳಿಗಾಲದ ಅಧಿವೇಶನದ ವೇಳೆಗೆ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ, ಬರಮಾಡಿಕೊಳ್ಳಲು ಸಿದ್ಧರಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಳಗಾವಿ ನಗರದಲ್ಲಿ ನಡೆದ...

ಬೆಳಗಾವಿ | ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಬೆಳಗಾವಿ ನಗರದಲ್ಲಿ ನಡೆದ ಸಭೆಯಲ್ಲಿ ಕರಾಳ ದಿನಾಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ದೀಪಾವಳಿ ಹಬ್ಬ ಮತ್ತು ಕರ್ನಾಟಕ ರಾಜ್ಯೋತ್ಸವ ನವೆಂಬರ್ 1ರಂದೇ ಬಂದಿರುವುದರಿಂದ...

ಬೆಳಗಾವಿ | ನಾನೂ ಸಿಎಂ ಕುರ್ಚಿ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂಬುದು ಸುಳ್ಳು: ಕೃಷ್ಣ ಭೈರೇಗೌಡ

ಒಳ್ಳೆಯ ಕೆಲಸ ಮಾಡಿದ ಮಾತ್ರಕ್ಕೆ ನಾನೂ ಮುಖ್ಯಮಂತ್ರಿ ಕುರ್ಚಿ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೆನೆ ಎಂಬುದು ಸುಳ್ಳು ಎಂದು ಬೆಳಗಾವಿಯ ಕಿತ್ತೂರಿನಲ್ಲಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ,...

ಬೆಳಗಾವಿ | ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲು ಆಗ್ರಹ

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಬೇಕು ಹಾಗೂ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು...

ಬೆಳಗಾವಿ | ನಷ್ಟದ ಆತಂಕ ಎದುರಿಸುತ್ತಿರುವ ಸೋಯಾಬೀನ್ ಬೆಳೆದ ಬೆಳೆಗಾರರು!

ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬೈಲಹೊಂಗಲ, ಗೋಕಾಕ, ಕಿತ್ತೂರು, ಬೆಳಗಾವಿ ತಾಲೂಕುಗಳಲ್ಲಿ ರೈತರು ಸೋಯಾಬೀನ್ ಬೆಳೆ ಬೆಳೆದಿದ್ದು, ಸರಿಯಾದ ಇಳುವರಿ ಮತ್ತು ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಈ ದಿನ.ಕಾಮ್ ಜೊತೆ ಸೊಯಾಬೀನ್...

ಬೆಳಗಾವಿ | ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತೇನೆ ಎಂದು ನಂಬಿಸಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ...

ಬೆಳಗಾವಿ | ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ: ಸಂಘ-ಸಂಸ್ಥೆಗಳಿಗೆ ಜಿಲ್ಲಾಡಳಿತ ಆಹ್ವಾನ

ನವೆಂಬರ್ 1ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವವು ಆಚರಿಸುವ ಬಗ್ಗೆ ಜಿಲ್ಲಾಡಳಿತವು ಪೂರ್ವಭಾವಿ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಭಾಗವಹಿಸಲು ಸಂಘ-ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಆಹ್ವಾನ ನೀಡಿದ್ದಾರೆ. ಅಕ್ಟೋಬರ್ 8ರ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ...

ಬೆಳಗಾವಿ | ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ: ವಾಲ್ಮೀಕಿ ಸಮ್ಮೇಳನದಲ್ಲಿ ನಿರ್ಣಯ

ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ‌ ಜಿಲ್ಲಾ ವಾಲ್ಮೀಕಿ ಸಮಾಜವು ಜಿಲ್ಲಾಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನವನ್ನು ಹಮ್ಮಿಕೊಂಡಿತ್ತು. ಈ ಸಮ್ಮೇಳನದಲ್ಲಿ 'ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿ' ಎಂದು ನಿರ್ಣಯ...

ಬೆಳಗಾವಿ | ಕಳಸಾ-ಬಂಡೂರಿ ನಾಲಾ ಯೋಜನೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನವು ಪರಿಸರಕ್ಕೆ ಮಾರಕವಾಗಲಿದೆ ಎಂದು ಪರಿಸರವಾದಿಗಳು ತಿಳಿಸಿದ್ದು, ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪರ್ಯಾವರಣಿ, ಪರಿಸರಕ್ಕಾಗಿ ನಾವು, ಪರಿವರ್ತನಾ, ಗ್ರಾಕೂಸ್ ಹಾಗೂ ಜಾಗೃತ ಮಹಿಳಾ ಒಕ್ಕೂಟದ ಸಂಘಟನೆಗಳ ಪದಾಧಿಕಾರಿಗಳು ಸುದ್ದಿಗೋಷ್ಠಿ...

ಬೆಳಗಾವಿ | ಕಣಬರ್ಗಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ: ಅಪಾರ ನಷ್ಟ

ಬೆಳಗಾವಿಯ ಆಟೋ ನಗರದ ಕಣಬರ್ಗಿ ಕೈಗಾರಿಕಾ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಸೊತ್ತು ಬೆಂಕಿಗಾಹುತಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಪ್ರದೀಪ್ ಇಂಡಸ್ಟ್ರಿಯಲ್ ಪ್ಯಾಕರ್ಸ್ ಎಂಬ ಸಂಸ್ಥೆಯಲ್ಲಿ ಶನಿವಾರ ರಾತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ