ಬಳ್ಳಾರಿ 

ಬಳ್ಳಾರಿ | ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಟಿಕೆಟ್‌ ಜಿದ್ದಾಜಿದ್ದಿ ಜೋರು

ಲೋಕಸಭಾ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ ಇದೆ. ಬಿಜೆಪಿ-ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಟಿಕೆಟ್‌ಗಾಗಿ ತೀವ್ರ ಕಸರತ್ತು ನಡೆಸಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಗಣಿನಾಡು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ಜಿದ್ದಾಜಿದ್ದಿ...

ಬಳ್ಳಾರಿ | ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ ನೌಕರರ ಬಳಕೆ; ಅಸಮಾಧಾನ

ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ನಿಯೋಜಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆ...

ಬಳ್ಳಾರಿ | ಅಭಿಮಾನಿ ಕಾಲಿನ ಮೇಲೆ ಹರಿದ ಯಶ್‌ ಬೆಂಗಾವಲು ವಾಹನ

ನಟ ಯಶ್‌ ಅವರು ಬಳ್ಳಾರಿಗೆ ಭೇಟಿ ನೀಡಿದ್ದ ವೇಳೆ, ಅವರನ್ನು ನೋಡಲು ಬಂದಿದ್ದ ಅಭಿಮಾನಿಯೊಬ್ಬರ ಕಾಲಿನ ಮೇಲೆ ಅವರ ಬೆಂಗಾವಲು ವಾಹನ ಹರಿದಿದೆ. ಅಭಿಯಾನಯ ಕಾಲಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಗುರುವಾರ, ಬಳ್ಳಾರಿಯ...

ಬಳ್ಳಾರಿ | ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.ಬಳ್ಳಾರಿ ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ರೈತ,ಕಾರ್ಮಿಕರ ಜನವಿರೋಧಿ ನೀತಿಗಳ...

ಬಳ್ಳಾರಿ | ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ, ಅಧಿಕಾರಿಗಳೂ ಗೂಂಡಾಗಳೇ: ರವಿಕೃಷ್ಣಾ ರೆಡ್ಡಿ ಕಿಡಿ

ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ ಕರ್ನಾಟಕದ ಪರಂಪರೆ ತಿಳಿದಂತಿಲ್ಲ. ಪಕ್ಷದ ಸಭೆಗೆ ಅನುಮತಿ ಪಡೆಯಲು ಹೋದರೆ 'ಗೆಟ್‌ ಲಾಸ್ಟ್‌' ಎಂದಿದ್ದಾರೆ ಎಂದು ಕೆಆರ್‌ಎಸ್‌ ಪಕ್ಷದ ಅಧ್ಯಕ್ಷ...

ಬಳ್ಳಾರಿಯಲ್ಲಿ ಎಸ್‌ಸಿ/ಎಸ್‌ಟಿ, ಅಲೆಮಾರಿಗಳ ಜಾಗೃತಿ ಸಮಾವೇಶ

ಅಲೆಮಾರಿಗಳ ಅಭಿವೃದ್ಧಿಗಾಗಿ ಬಳ್ಳಾರಿ ಜಿಲ್ಲಾ ಗುಡಿಸಲು ಮುಕ್ತ, ಟೆಂಟ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸುತ್ತೇನೆ. ಬಳ್ಳಾರಿಯಲ್ಲಿ ಅಲೆಮಾರಿಗಳ ಸಮುದಾಯ ಭವನಕ್ಕೆ ಒಂದು ಎಕರೆ ಸರ್ಕಾರಿ ಜಮೀನು, 5 ಕೋಟಿ ರೂ. ಹಣ ಮೀಸಲಿಡುತ್ತೇವೆ...

ಮಾಜಿ ಸಚಿವ ಶ್ರೀರಾಮುಲುಗೆ ಹೈಕೋರ್ಟ್‌ ತರಾಟೆ; ಬಂಧನ ವಾರಂಟ್ ನೀಡುವ ಎಚ್ಚರಿಕೆ

ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಇಲ್ಲದಿದ್ದಲ್ಲಿ ಬಂಧನ...

ಬಳ್ಳಾರಿ | 2022-23 ಸಾಲಿನಲ್ಲಿ 615 ಶಿಶುಗಳ ಸಾವು; ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

2022-23ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ. ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಠಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಹಲವು ಕಾರಣಗಳಿಂದ ಶಿಶುಗಳು ಮೃತಪಟ್ಟಿವೆ ಎಂದು...

ಬಳ್ಳಾರಿ | ಸೌಲಭ್ಯವಿಲ್ಲದ ವಸತಿ ನಿಲಯ; ವಿದ್ಯಾರ್ಥಿಗಳ ಗೋಳು ಕೇಳೋರಿಲ್ಲ

ಬಳ್ಳಾರಿ ಜಿಲ್ಲೆ ಸಿರಗುಪ್ಪದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯಿಂದ ಕೂಡಿದೆ. ಸಂಬಂಧಪಟ್ಟ ಅಧಿಕಾರಿಗಳಾರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.ವಿದ್ಯಾರ್ಥಿ ನಿಲಯದಲ್ಲಿ...

ಬಳ್ಳಾರಿ | 8 ಇಂದಿರಾ ಕ್ಯಾಂಟೀನ್‌ಗಳು ಬಂದ್‌

ಇಂದಿರಾ ಕ್ಯಾಂಟೀನ್ ನಡೆಸುತ್ತಿರುವ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಮಾಡಿಲ್ಲವೆಂಬ ಕಾರಣಕ್ಕೆ ಬಳ್ಳಾರಿ ಜಿಲ್ಲೆಯ 8 ಇಂದಿರಾ ಕ್ಯಾಟೀನ್‌ಗಳು ಸ್ಥಗಿತಗೊಂಡಿವೆ. ಈ ಎಲ್ಲ ಇಂದಿರಾ ಕ್ಯಾಟೀನ್‌ಗಳ ಸುಮಾರು 3.38 ಕೋಟಿ ರೂ. ಬಿಲ್‌...

ಬಳ್ಳಾರಿ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಟಿಕೆಟ್‌ಗೆ ಪೈಪೋಟಿ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬ ಚರ್ಚೆ ಇದೀಗ ಪಕ್ಷದ ವಲಯದಲ್ಲಿ ಶುರುವಾಗಿದೆ.ಬಳ್ಳಾರಿ ಜಿಲ್ಲೆ 1952ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, 1999ರಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ,...

ಬಳ್ಳಾರಿ | ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಮಾಡುವೆ: ಸಚಿವ ನಾಗೇಂದ್ರ

ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿಗೆ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಹೇಳಿದರು.ಬಳ್ಳಾರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು...

ಜನಪ್ರಿಯ