ಬೀದರ್ 

ಬೀದರ್‌ | ನಾಳೆ ವೀರಶೈವ-ಲಿಂಗಾಯತ ಮಹಾಸಭೆ ವಿರುದ್ಧ ಪ್ರತಿಭಟನೆ

ಬಸವ ಜಯಂತಿ ದಿನದಂದು ಪಂಚಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಕ್ರಮವನ್ನು ಖಂಡಿಸಿ ಬಸವ ಪರ ಸಂಘಟನೆಗಳಿಂದ ಬೀದರ್‌ನಲ್ಲಿ ನಾಳೆ (ಏ.26) ಬೃಹತ್ ಪ್ರತಿಭಟನೆ ನಡೆಯಲಿದೆ. ನಗರದ ಗಾಂಧಿಗಂಜ್‍ ಬಸವೇಶ್ವರ ದೇವಸ್ಥಾನದಲ್ಲಿ...

ಬೀದರ್‌ | ಅಕ್ಕ ಮಹಾದೇವಿ ಧೈರ್ಯ, ಸಮಯ ಪ್ರಜ್ಞೆ ಮಹಿಳಾ ಕುಲಕ್ಕೆ ಸ್ಫೂರ್ತಿ : ಪ್ರಭುದೇವ ಸ್ವಾಮೀಜಿ

ಅಕ್ಕ ಮಹಾದೇವಿ ವಚನಗಳಲ್ಲಿ ಬದುಕಿನ ಕೌಶಲ ಹಾಗೂ ಆಧ್ಯಾತ್ಮ ಸಾಧನೆಯ ಮಾರ್ಗ ಇದೆ ಎಂದು ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಹೇಳಿದರು. ಲಿಂಗಾಯತ ಮಹಾ ಮಠದ ವತಿಯಿಂದ ಬೀದರ್ ನಗರದ ಬಸವಗಿರಿಯಲ್ಲಿ ಗುರುವಾರ ನಡೆದ...

ಬೀದರ್‌ | ಮೇ ತಿಂಗಳಲ್ಲಿ 1 ಲಕ್ಷ ಕೂಲಿ ಕಾರ್ಮಿಕರಿಗೆ ʼಉದ್ಯೋಗ ಖಾತ್ರಿʼ : ಸಿಇಒ ಗಿರೀಶ ಬದೋಲೆ

ಜಿಲ್ಲೆಯಲ್ಲಿ ಬೇಸಿಗೆ ಕಾಲ ಆರಂಭವಾಗಿದ್ದು, ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರೀಕ್ಷಿಸುವ ತಿಂಗಳುಗಳಾಗಿದ್ದು, ಮೇ ತಿಂಗಳಿನಲ್ಲಿ ಜಿಲ್ಲೆಯ ಎಂಟು ತಾಲೂಕುಗಳಲ್ಲಿ 1 ಲಕ್ಷ ದುಡಿಯುವ...

ಬೀದರ್‌ | ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಂಡ ಯುವಕ : ವರ್ಷಪೂರ್ತಿ ಬೆಳೆ; ಲಕ್ಷ ಲಕ್ಷ ಆದಾಯದ ಹೊಳೆ!

ʼಮಣ್ಣು ನಂಬಿದರೆ ಹೊನ್ನುʼ ಎಂಬಂತೆ ಜಮೀನಿನಲ್ಲಿ ಬೆವರು ಸುರಿಸಿ ದುಡಿದರೆ ಕಷ್ಟ ಹತ್ತಿರ ಸುಳಿಯುವುದಿಲ್ಲ, ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಾಣಬಹುದು ಎಂಬುವುದಕ್ಕೆ ಯುವ ರೈತ ಬಕ್ಕಾರೆಡ್ಡಿ ನಾಗನಕೇರಾ ಸಾಕ್ಷಿಯಾಗಿದ್ದಾರೆ. ಚಿಟಗುಪ್ಪ ತಾಲ್ಲೂಕಿನ ನಾಗನಕೇರಾ ಗ್ರಾಮದ...

ಬೀದರ್‌ | ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ಪ್ರತಿಷ್ಠಿತ ವಸತಿ ಶಾಲೆ (ಕನ್ನಡ ಮಾಧ್ಯಮ) ಯಲ್ಲಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು 2025-26ನೇ ಸಾಲಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಸಮಾಜ ಕಲ್ಯಾಣ ಇಲಾಖೆಯು...

ಬೀದರ್‌ | ಪಹಲ್ಗಾಮ್ ದಾಳಿ : ಭಾರತ ಕಮ್ಯೂನಿಸ್ಟ್ ಪಕ್ಷ ಖಂಡನೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ ತೀವ್ರವಾಗಿ ಖಂಡಿಸಿದೆ. ಈ ಕುರಿತು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿಯ ತುರ್ತು ಸಭೆಯನ್ನು ಕರೆದು ಚರ್ಚಿಸಿದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ...

ಬೀದರ್‌ | ಏ.26ಕ್ಕೆ ಸಂವಿಧಾನ ಸಂರಕ್ಷಕರ ಸಮಾವೇಶ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯಕಾರಿ ಹಂತಕ್ಕೆ ತಲುಪಿದೆ. ಆದ್ದರಿಂದ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನದ ಭಾಗವಾಗಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ಏ.26ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ‘ಎದ್ದೇಳು ಕರ್ನಾಟಕ’ ಜಿಲ್ಲಾ ಸಂಯೋಜಕ...

ಬೀದರ್‌ | ವ್ಯಕ್ತಿಯ ಕುತ್ತಿಗೆ ಕಡಿದು ಬರ್ಬರ ಹತ್ಯೆ

ವ್ಯಕ್ತಿಯೊಬ್ಬರನ್ನು ಕುತ್ತಿಗೆ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಹುಮನಾಬಾದ್‌ ತಾಲ್ಲೂಕಿನ ಶಕ್ಕರಗಂಜವಾಡಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಶಕ್ಕರಗಂಜವಾಡಿ ಗ್ರಾಮದ ಸಿದ್ಧರೂಡ ಬಾವಗಿ (35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ, ತಾಯಿ,...

ಬೀದರ್‌ | ಸಾಮಾಜಿಕ ನ್ಯಾಯದ ಹರಿಕಾರ ಬಾಬಾ ಸಾಹೇಬ್‌ ಅಂಬೇಡ್ಕರ್‌ : ಅಪ್ಪಗೆರೆ ಸೋಮಶೇಖರ್

ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನವನ್ನು ಮರೆತರೆ ಭಾರತ ದೇಶಕ್ಕೆ ಭವಿಷ್ಯವಿಲ್ಲ ಎಂದು ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ್ ಹೇಳಿದರು. ಔರಾದ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ...

ಬೀದರ್ | ಆಧುನಿಕ ಆಹಾರ ಪದ್ಧತಿ ಆರೋಗ್ಯಕ್ಕೆ ಒಳ್ಳೆಯದಲ್ಲ

ಆಧುನಿಕ ಆಹಾರ ಪದ್ಧತಿಯಿಂದ ಆರೋಗ್ಯ ಹದಗೆಡುತ್ತಿದ್ದು, ಮತ್ತೆ ನಾವು ಹಳೆಯ ಪರಂಪರೆಗೆ ಮಾರು ಹೋಗುವ ಅವಶ್ಯಕತೆ ಇದೆ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ದೈವತಾ ಪಲಂಪಲ್ಲೆ ಹೇಳಿದರು. ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್...

ಬೀದರ್ | ಪುಸ್ತಕ ಓದು ಹವ್ಯಾಸದಿಂದ ವ್ಯಕ್ತಿತ್ವ ವಿಕಸನ: ಮನ್ಮತ ಡೋಳೆ

ಪುಸ್ತಕ ಓದುವ ಹವ್ಯಾಸದಿಂದ ಧನಾತ್ಮಕ ಚಿಂತನೆ ಬೆಳೆಯಲು ಸಾಧ್ಯ ಎಂದು ನಾಲಂದಾ ಪಿಯು ಕಾಲೇಜು ಪ್ರಾಚಾರ್ಯ ಡಾ.ಮನ್ಮತ ಡೋಳೆ ಹೇಳಿದರು. ಔರಾದ್ ಪಟ್ಟಣದ ಪತ್ರಿಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು...

ಬೀದರ್ | ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರುದ್ಧದ ಪ್ರತಿಭಟನೆ ಮುಂದೂಡಿಕೆ

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆ 2025 ಜಾರಿಗೊಳಿಸಿರುವುದನ್ನು ವಿರೋಧಿಸಿ ವಕ್ಫ್ ತಿದ್ದುಪಡಿ ಕಾಯ್ದೆ 2025 ವಿರೋಧಿ ಜಂಟಿ ಕ್ರಿಯಾ ಸಮಿತಿ ನಗರದಲ್ಲಿ ಏಪ್ರಿಲ್ 24 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಮುಂದೂಡಿದೆ. ಕಾಶ್ಮೀರದ ಪಹಲ್ಗಾಮ್‍ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ