ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮವಾಗಿ ಮರವನ್ನು ಕಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವ್ಯಾಪ್ತಿಯ ಗುಡ್ಡಟ್ಟಿ ಗ್ರಾಮದ ನಡೆದಿದೆ.
ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ,...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಆಡಳಿತ ವೈಫಲ್ಯಕ್ಕೆ ಮತ್ತೊಂದು ಉದಾಹರಣೆ ಸೇರ್ಪಡೆಯಾಗಿದೆ. ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.
ತಾಲೂಕು ಕಚೇರಿಯಲ್ಲಿ ಸರಳ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು...
ಕಾರ್ ಮತ್ತು ಬೊಲೆರೋ ವಾಹನ ಓವರ್ ಟೇಕ್ ಮಾಡುವ ವೇಳೆ ವಾಹನ ಅಪಘಾತವಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಅಪಘಾತ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಮೂಡಿಗೆರೆ...
ಕಾಡಾನೆ ಮನೆಯೊಳಗೆ ನುಗ್ಗಲು ಯತ್ನಿಸಿದ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾರದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಂದಿನಂತೆ ಮನೆಯ ಕೆಲಸ ಮಾಡಿಕೊಂಡು ಇದ್ದ ಕುಟುಂಬಸ್ಥರು, ಕಾಡಾನೆ ಬರುತ್ತಿರುವುದನ್ನು ಮನೆಯ ಮಾಲೀಕ ನೋಡಿ ಕುಟುಂಬದವರಿಗೆ ಕೂಗಿ...
ವಾಹನದ ಬಾಡಿಗೆ ಹಣ ಕೇಳುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ಅಜಾದ್ ನಗರದಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದೆ.
ರಾಮನಗರ...
ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಹಾಗೂ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಕಲ್ಮನೆ ಗ್ರಾಮದಲ್ಲಿ ಬುಧವಾರ ನಡೆದಿದೆ. ನಿಂದನೆಗೆ ಒಗೊಳಗಾದ ಮಹಿಳೆ ಸುಮಿತ್ರ...
ರಸ್ತೆ ಅಗಲೀಕರಣದಿಂದ ಮನೆ ಹಾಗೂ ಜಮೀನು ಕಳೆದುಕೊಳ್ಳುವ ಆತಂಕದಲ್ಲಿ ರೈತರೊಬ್ಬರು ದಯಾಮರಣ ನೀಡುವಂತೆ ಹಗ್ಗ, ಕತ್ತಿ, ವಿಷದ ಬಾಟಲಿಯನ್ನು ಇಟ್ಟುಕೊಂಡು ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತಿರುವ ಘಟನೆಯೊಂದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಹಶೀಲ್ದಾರ್...
ಶೂನ್ಯ ದಾಖಲಾತಿ ಕಾರಣದಿಂದ ಸುಮಾರು ಪ್ರಾಥಮಿಕ ಹಾಗೂ ಮಾಧ್ಯಮಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವ ಸುದ್ದಿ ಸಾಕಷ್ಟು ಸದ್ದು ಮಾಡುತ್ತಿರುವುದು ಗೊತ್ತೇ ಇದೆ. ಇಂತಹ ಪರಿಸ್ಥಿತಿಯಲ್ಲಿ ದಾನಿಗಳ ಉದಾರತೆಯಿಂದ ಸರ್ಕಾರಿ...
ಕುಡಿದ ಮತ್ತಿನಲ್ಲಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದಲ್ಲಿ ನಡೆದಿದೆ. ಶಶಿಧರ್ ಮೃತ ವ್ಯಕ್ತಿ.
ಕುಡಿದ ಅಮಲಿನಲ್ಲಿದ್ದ ಶಶಿಧರ್ ಬುದ್ದಿ ಹೇಳಿದಕ್ಕೆ...
ಮೂಡಿಗೆರೆ ಸರ್ವೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಗುರುವಾರ ನಡೆದಿದೆ.
ಶಿವಕುಮಾರ್ ಅವರು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ...
ʼಕಳ್ಳತನ ಮಾಡಿರುವ ಉತ್ಪನ್ನ ಕೊಳ್ಳಬೇಡಿ' ಎಂಬ ವಿನೂತನ ಜನಜಾಗೃತಿ ಕಾಲ್ನಡಿಗೆ ಜಾಥಾ ಸೋಮವಾರ ಮೂಡಿಗೆರೆ ತಾಲೂಕು ಬಣಕಲ್ ಪಟ್ಟಣದಲ್ಲಿ ದಿ ಪ್ಲಾಂಟರ್ಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಬಣಕಲ್ ಪೊಲೀಸ್ ಠಾಣೆಯ ಸಹಯೋಗದಲ್ಲಿ ನಡೆಯಿತು.
ಅಪರಿಚಿತರು...
ಸಿಲಿಂಡರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ.
ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡರ್...