ದಕ್ಷಿಣ ಕನ್ನಡ

ಉಡುಪಿ | ಕನಿಷ್ಠ ವೇತನಕ್ಕೆ ಇನ್ನೂ ನಿರ್ಲಕ್ಷ್ಯ : ಬೀದಿಗಿಳಿದ ಕಾರ್ಮಿಕ ಸಂಘಟನೆಗಳು

ಕನಿಷ್ಠ ವೇತನದ ವೈಜ್ಞಾನಿಕ ಪುನರ್ ವಿಮರ್ಶೆ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಕರಾವಳಿ ಭಾಗದಲ್ಲಿ ಸಹಿ ಸಂಗ್ರಹ ಚಳುವಳಿ ಮಂಗಳವಾರದಿಂದ ಆರಂಭಗೊಂಡಿದೆ. ಏಪ್ರಿಲ್‌ 14ರಿಂದ 30ರವರೆಗೆ ನಡೆಯಲಿರುವ ಈ ಅಭಿಯಾನಕ್ಕೆ...

ಮಂಗಳೂರು | ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿದ ಅಂಬೇಡ್ಕರ್ : ಸಂಸದ ಚೌಟ

ಬಾಲ್ಯದಿಂದಲೇ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಬಂದರೂ ಅವನ್ನು ಸವಾಲಾಗಿ ಸ್ವೀಕರಿಸಿ ಸಾಧನೆ ಮಾಡಿದ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್ ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ನಗರದ ಕುದ್ಮುಲ್ ರಂಗರಾವ್...

ಉಡುಪಿ | ಆಲಂಗಾರು–ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಮಣ್ಣು ಸುರಿದು ಗ್ರಾಮಸ್ಥರ ಪ್ರತಿಭಟನೆ

ಪದೇಪದೇ ಅಪಘಾತಗಳು ನಡೆಯುತ್ತಿರುವ ಆಲಂಗಾರು–ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯರು ಸೋಮವಾರ ಟಿಪ್ಪರ್ ಲಾರಿಯಲ್ಲಿ ಮಣ್ಣು ಸುರಿದು ರಸ್ತೆ ಮುಚ್ಚಿ ಪ್ರತಿಭಟನೆ ನಡೆಸಿದರು. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರೂ ಭದ್ರತಾ ಕ್ರಮಗಳ...

ಐಸಿಡಿಎಸ್‌ ಸುವರ್ಣ ಸಂಭ್ರಮ: ಎ.20ರಂದು ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾ ಸಮಾವೇಶ

ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್‌ 50ರ ಸುವರ್ಣ ಸಂಭ್ರಮ ಹಾಗೂ ಜಿಲ್ಲಾ ಸಮಾವೇಶವನ್ನು ಎಪ್ರಿಲ್‌ 20ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರಿನ ಕುದ್ಮುಲ್‌ ರಂಗರಾವ್‌...

ಮಂಗಳೂರು | ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ., ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು...

ಧರ್ಮಸ್ಥಳ ಪ್ರಕರಣ ಒಂದು ರೀತಿಯಲ್ಲಿ ಎಪ್‌ಸ್ಟೀನ್ ಫೈಲ್ಸ್‌ನಂತೆಯೇ: ಹಿರಿಯ ವಕೀಲ ಎಸ್‌ ಬಾಲನ್

"ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಅಸಹಜ ಸಾವು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಒಂದು ರೀತಿಯಲ್ಲಿ ಎಪ್‌ಸ್ಟೀನ್ ಫೈಲ್ಸ್‌ನಂತೆಯೇ. ಇದನ್ನು ಧರ್ಮಸ್ಥಳ ಫೈಲ್ಸ್, ಅಥವಾ ಕರ್ನಾಟಕ ಫೈಲ್ಸ್ ಎಂದು ಕರೆಯಬಹುದು. ಎಪ್‌ಸ್ಟೀನ್ ಫೈಲ್ಸ್‌ನಲ್ಲಿಯೂ...

ಮಂಗಳೂರು | ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ನಗರದ ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಹಾಗೂ ಸಹಕುಲಪತಿ ಫಾ. ಮೆಲ್ವಿನ್ ಜೆ. ಪಿಂಟೋ (63) ಶುಕ್ರವಾರ ನಿಧನರಾಗಿದ್ದಾರೆ. ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಅವರು, ಸಂಸ್ಥೆಗೆ ‘ಡೀಮ್ಡ್ ಟು ಬಿ ಯೂನಿವರ್ಸಿಟಿ’...

ಮಂಗಳೂರು | ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಬಶೀರ್ ಅಹ್ಮದ್ ಕಿನ್ಯಾ ಆಯ್ಕೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ದೇರಳಕಟ್ಟೆಯ ಮೇಲ್ತೆನೆ ಸಂಘಟನೆಯ ಸಹಯೋಗದಲ್ಲಿ ಮೇ 5ರಂದು ಉಳ್ಳಾಲ ತಾಲೂಕಿನ ಮುಡಿಪು ಬಳಿಯ ಹೂಹಾಕುವ ಕಲ್ಲು ಎಸ್.ಕೆ. ಮಲ್ಟಿಪರ್ಪಸ್ ಹಾಲ್‌ನಲ್ಲಿ ಆಯೋಜಿಸಿರುವ ಉಳ್ಳಾಲ ತಾಲೂಕು 3ನೇ ಬ್ಯಾರಿ...

ಮಂಗಳೂರು | ಕುಡಿಯುವ ನೀರಿನ ಪೂರೈಕೆಗೆ ಸ್ಪೀಕರ್ ಖಾದರ್ ಕಟ್ಟು ನಿಟ್ಟಿನ ಸೂಚನೆ, “ಜಲ್ ಜೀವನ್ ಮಿಷನ್, ಸಂಪರ್ಕ ಕೊಟ್ಟರೂ ನೀರು ಎಲ್ಲಿದೆ ?

ಸಾರ್ವಜನಿಕರಿಗೆ ಬೇಸಿಗೆ ಸಂದರ್ಭದಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ...

ಧರ್ಮಸ್ಥಳ | ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು...

ಮಂಗಳೂರು | ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ...

ಮಂಗಳೂರು | ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್ ಪೂರೈಕೆ : ಸ್ಪೀಕರ್ ಸೂಚನೆ

ಮಂಗಳೂರು ನಗರದ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್‌ಗಳಿಗೆ ಡೀಸೆಲ್ ಹಾಗೂ ಎಲ್‌ಪಿಜಿ ಸಿಲಿಂಡರ್‌ಗಳನ್ನು ನಿರಂತರವಾಗಿ ಒದಗಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದರು. ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರಿಕಾ ಸಂಘಟನೆಗಳು, ಬೋಟ್ ಮಾಲಕರು,...

ಈ ಹೊತ್ತಿನ ಪ್ರಮುಖ ಸುದ್ದಿ