ದಕ್ಷಿಣ ಕನ್ನಡ

ದಕ್ಷಿಣ ಕನ್ನಡ | ಆಯುಷ್ಮಾನ್ ಭಾರತ್ ಸೌಲಭ್ಯವಿದ್ದರೂ ಅಧಿಕ ಶುಲ್ಕ ವಸೂಲಿ; 16 ದೂರು ದಾಖಲು

'ಆಯುಷ್ಮಾನ್ ಭಾರತ್' ಮತ್ತು 'ಆರೋಗ್ಯ ಕರ್ನಾಟಕ' ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ನಿಗದಿತ ಸೌಲಭ್ಯ ಕೊಡುತ್ತಿಲ್ಲ. ಯೋಜನೆಯ ಸೌಲಭ್ಯ ಪಡೆಯಲು ಅರ್ಹವಾಗಿದ್ದರೂ ಹೆಚ್ಚುವರಿ ಮೊತ್ತವನ್ನು ರೋಗಿಗಳಿಂದಲೇ ಪಡೆಯಲಾಗುತ್ತಿದೆ ಎಂಬ ಆರೋಪ ದಕ್ಷಿಣ ಕನ್ನಡ...

ದಕ್ಷಿಣ ಕನ್ನಡ | ಕಾಲೇಜ್ ಕ್ಯಾಂಪಸ್‌ನಲ್ಲಿ ಮೋದಿ ಸೆಲ್ಫಿ ಪಾಯಿಂಟ್; ಎನ್‌ಎಸ್‌ಯುಐ ವಿರೋಧ

ದೇಶದ ಎಲ್ಲ ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ಸೂಚನೆ ನೀಡಿದೆ. ಯುಜಿಸಿ ನಡೆ ಖಂಡನೀತ ಎಂದು ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ...

ದಕ್ಷಿಣ ಕನ್ನಡ | ವಕೀಲನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಎಂಬುವವರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಸೋಮವಾರ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ನಗರದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು,...

ಭಾರತದಲ್ಲಿ ವೇದಗಳ ಕಾಲದಿಂದಲೂ ‘ಗಂಡು-ಹೆಣ್ಣು’ ಎಂಬ ಭೇದ ಇರಲಿಲ್ಲ: ಮಾಳವಿಕಾ

ವೇದಗಳ ಕಾಲದಿಂದಲೂ ಭಾರತೀಯ ಚಿಂತನೆಯಲ್ಲಿ ಗಂಡು-ಹೆಣ್ಣು ಎಂಬ ಭೇದ ಭಾವ ಇರಲಿಲ್ಲ. ವಿದೇಶಿಯರ ಆಕ್ರಮಣ ಮತ್ತು ಶೋಷಣೆಯ ಭಯದಿಂದ ಮಹಿಳೆ ಹಿಂದಕ್ಕೆ ಸರಿದಿದ್ದಾಳೆ ಎಂದು ನಟಿ, ಬಿಜೆಪಿ ಮುಖಂಡೆ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ದಕ್ಷಿಣ...

ಸೌಜನ್ಯ ನ್ಯಾಯಕ್ಕಾಗಿ ಮುಂಬೈಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾ ವ್ರತಾಧಾರಣೆ

ಸೌಜನ್ಯಳ ನ್ಯಾಯಾಕ್ಕಾಗಿ ಅನುಗ್ರಹ ಬಯಸಿ ಮುಂಬೈನ ಮಣಿಕಂಠ ಭಕ್ತವೃಂದ ಸಾಕಿನಾಕಾ ಕೇಂದ್ರದಲ್ಲಿ ಸಾಮಾಜಿಕ ಕಾರ್ಯಕರ್ತ ಶ್ರೀನಾಥ್ ಶೆಟ್ಟಿ ಇವರು ಮುಂಬೈಯಲ್ಲಿ ಅಯ್ಯಪ್ಪ ಸ್ವಾಮಿಯ ವ್ರತಾಧಾರಿಯಾಗಿ ಮಾಲೆ ಧರಿಸಿದ್ದಾರೆ. ಸೌಜನ್ಯಳನ್ನು ಅತ್ಯಾಚಾರ ಮಾಡಿದವರಿಗೆ ಶಿಕ್ಷೆ ಆಗುವುದರ...

ದಕ್ಷಿಣ ಕನ್ನಡ | ಉಸ್ತುವಾರಿ ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್‌ವರೆಗಿನ ಚತುಷ್ಫಥ ರಸ್ತೆ ಕಾಮಗಾರಿ ಪರಿಶೀಲಿಸಿ ಅಭಿವೃದ್ಧಿಯಿಂದ ದಕ್ಷಿಣ ಭಾಗದಿಂದ ನಗರ ಪ್ರವೇಶಕ್ಕೆ ಸಂಚಾರ ಸುಗಮವಾಗಲಿದೆ ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌...

ದಕ್ಷಿಣ ಕನ್ನಡ | ಗ್ರಾಮ ಪಂಚಾಯತಿ ಮುಖ್ಯ ಪುಸ್ತಕ ಬರಹಗಾರರ ಪ್ರತಿಭಟನೆ

ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ...

ದಕ್ಷಿಣ ಕನ್ನಡ | ಸುರತ್ಕಲ್‌ ಟೋಲ್‌ ಮುಕ್ತ ಹಾಗೂ ಹೆದ್ದಾರಿಯ ಹಲವು ಸಮಸ್ಯೆ ಪರಿಹಾರಕ್ಕೆ ಆಗ್ರಹ; ಡಿ.1ರಂದು ಸಭೆ

ಒಂದು ವರ್ಷದಿಂದ ಪಾಳು ಬಿದ್ದಿದ್ದು, ಮತ್ತೆ ಸುಂಕ ಸಂಗ್ರಹ ಆರಂಭದ ಕುರಿತು ಜನಸಾಮಾನ್ಯರಲ್ಲಿ ವದಂತಿ ಆತಂಕಕ್ಕೆ ಕಾರಣವಾಗಿದ್ದ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್‌ನ ಕೆಲವು ಟೋಲ್ ಸಂಗ್ರಹ ಬೂತ್‌ಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ ಏಳು ಗಂಟೆಗಳ ಕಾಲ ತಮ್ಮ ಮನೆ ಬಳಿ ಬಂದ ರಾಜ್ಯದ ಸಾವಿರಾರು ಜನರ ದೂರನ್ನು ಮುಖ್ಯಮಂತ್ರಿಗಳು ಖುದ್ದಾಗಿ ಆಲಿಸಿದ್ದರು. ಈ ವೇಳೆ...

ದಕ್ಷಿಣ ಕನ್ನಡ | ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ; ಆರೋಪಿ ಬಂಧನ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ...

ದಕ್ಷಿಣ ಕನ್ನಡ | ಖಾಸಗಿ ಕ್ಲಿನಿಕ್, ಆಸ್ಪತ್ರೆಗಳ ನೋಂದಣಿ ಕಡ್ಡಾಯ; ‘ಅನರ್ಹರು ಲೈಂಗಿಕ ಸಮಸ್ಯೆಗಳಿಗೆ ಪರಿಹಾರ ನೀಡುವಂತಿಲ್ಲ’  

ವೈದ್ಯಕೀಯ ವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಸೇವೆಗಳನ್ನು ನೀಡುವ ವ್ಯಕ್ತಿ ಮತ್ತು ಸಂಸ್ಥೆಗಳು ಆರೋಗ್ಯ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ. ಜಿಲ್ಲಾ...

ದಕ್ಷಿಣ ಕನ್ನಡ | ಛಾಯಾಚಿತ್ರಗಳ ಮೂಲಕ ಇತಿಹಾಸ ಕಟ್ಟಲು ಸಾಧ್ಯ: ಡಾ.ತುಕಾರಾಮ ಪೂಜಾರಿ

ಛಾಯಚಿತ್ರಗಳ ಮೂಲಕ ಇತಿಹಾಸವನ್ನು ಕಟ್ಟಿಕೊಡುವ ಅಪೂರ್ವ ಕೆಲಸವನ್ನು ಮಾಡಲು ಸಾಧ್ಯವಿದೆ. ಇಂತಹ ಪರಿಶ್ರಮ ಸಾರ್ವಕಾಲಿಕ ದಾಖಲೆಯಾಗಿ ಉಳಿಯಲಿದೆ ಎಂದು ರಾಣಿ ಅಬ್ಬಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ಹೇಳಿದರು. ದಕ್ಷಿಣ ಕನ್ನಡ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X