ಧಾರವಾಡ 

ಧಾರವಾಡಕ್ಕೆ ಪ್ರವೇಶ ಪಡೆಯಲು ಕಾಂಗ್ರೆಸ್‌ ಶಾಸಕ ಹರಸಾಹಸ

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಎದುರಿಸುತ್ತಿರುವ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ, ಧಾರವಾಡಕ್ಕೆ ಪ್ರವೇಶ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಜಿಲ್ಲೆಗೆ ಪ್ರವೇಶಿಸಲು ಅನುಮತಿ ಕೋರಿ ಜನಪ್ರತಿನಿಧಿಗಳ...

ಧಾರವಾಡ | ಟಾಟಾ ಮಾರ್ಕೊಪೊಲೊ ಅಧಿಕಾರಿಗಳಿಗೆ ಕಾರ್ಮಿಕ ಸಚಿವ ಎಚ್ಚರಿಕೆ

ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಟಾಟಾ ಮಾರ್ಕೊಪೊಲೊ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾರ್ಕೊಪೊಲೊ...

ಸೇವೆ ಒದಗಿಸಲು ವಿಮಾ ಕಂಪನಿ ವಿಫಲ; ಪರಿಹಾರ ನೀಡುವಂತೆ ಆದೇಶ

ಎಸ್‌ಬಿಐ ವಿಮಾ ಕಂಪನಿಯು ಗ್ರಾಹಕರಿಗೆ ಸೇವೆ ಒದಗಿಸುವಲ್ಲಿ ವಿಫಲವಾಗಿದ್ದು, ಸಂತ್ರಸ್ತ ಗ್ರಾಹಕರಿಗೆ 25,000 ರೂಪಾಯಿ ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆ ಆದೇಶಿಸಿದೆ. ಹುಬ್ಬಳ್ಳಿಯ ನಿವಾಸಿ ರಾಜೇಂದ್ರ ಪತ್ತಾರ್ ಎಂಬುವರು...

ಎಬಿವಿಪಿ ಒತ್ತಡಕ್ಕೆ ಮಣಿದು ನಟ ಚೇತನ್‌ ಆಹ್ವಾನ ಹಿಂಪಡೆದ ಕಾನೂನು ವಿವಿ ಕುಲಪತಿ

ಯುವ ಜನೋತ್ಸವವನ್ನು ಉದ್ಘಾಟಿಸಲು ನಟ ಚೇತನ್ ಅವರನ್ನು ಆಹ್ವಾನಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ, ಎಬಿವಿಪಿ ಒತ್ತಡಕ್ಕೆ ಮಣಿದಿದ್ದು, ಆಹ್ವಾನವನ್ನು ಹಿಂಪಡೆದಿದ್ದಾರೆ. ಹುಬ್ಬಳ್ಳಿಯಲ್ಲಿರುವ ನವನಗರದ ಕ್ಯಾಂಪಸ್‌ನಲ್ಲಿ ಜೂನ್ 16 ಮತ್ತು 17ರಂದು...

ಧಾರವಾಡ | ಮಟ್ಕಾ ದಂಧೆ ನಿಯಂತ್ರಿಸಲು ಕರವೇ ಒತ್ತಾಯ

ಮಟ್ಕಾ ದಂಧೆಯನ್ನು ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ತಹಶೀಲ್ದಾರರಿಗೆ ಮನಿವಿ ಪತ್ರ ಸಲ್ಲಿಸಿದರು. "ತಾಲೂಕಿನಲ್ಲಿ ಮಟ್ಕಾ ದಂಧೆಯು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ...

ನಮ್ಮ ಸಚಿವರು | ಸಂತೋಷ್ ಲಾಡ್: ಅಕ್ರಮ ಗಣಿಗಾರಿಕೆಯ ನೆರಳಿನ ರಾಜಕಾರಣ

ಬಿಜೆಪಿ ಸರ್ಕಾರದ ಕೆ.ಸುಧಾಕರ್, ಮುನಿರತ್ನ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಕೆಂಪಣ್ಣ ವಿರುದ್ಧ ಕೇಸ್ ಹಾಕಿ ಅವರನ್ನು ಜೈಲಿಗೆ ಕಳಿಸಿದ್ದರು. ಸಂತೋಷ್ ಲಾಡ್ 2013ರ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದಾಗ ತಮ್ಮ ವಿರುದ್ಧ ಅಕ್ರಮ ಗಣಿಗಾರಿಕೆ...

ಧಾರವಾಡ | ಶಕ್ತಿ ಯೋಜನೆಗೆ ಆಟೋ ಚಾಲಕರ ಸಂಘ ವಿರೋಧ

ಶಕ್ತಿ ಯೋಜನೆಯ ಅಡಿಯಲ್ಲಿ‌ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟ ಸರ್ಕಾರದ ನಡೆಯನ್ನು‌ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘವು ವಿರೋಧಿಸಿದೆ. ಸಂಘದ ಸದಸ್ಯರು ಸೋಮವಾರ ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ...

ಧಾರವಾಡ | ಲಾರಿ-ಕಾರು ನಡುವೆ ಅಪಘಾತ; ಮೂವರು ದುರ್ಮರಣ

ಧಾರವಾಡ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ. ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಸಮೀಪ...

ಧಾರವಾಡ | ರೈಲು ಡಿಕ್ಕಿ ಹೊಡೆದು ವೃದ್ಧ ಸಾವು

ರೈಲು ಡಿಕ್ಕಿ ಹೊಡೆದು ವೃದ್ಧರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಕೋಳ ರೈಲು ನಿಲ್ದಾಣದ ಸಮೀಪ ನಡೆದಿದೆ. ಜಿಲ್ಲೆಯ ಕುಂದಗೋಳದ ರೈಲು‌ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ಹಳಿ ದಾಟುವಾಗ ಯಲ್ಲಪ್ಪ ಶಿಗ್ಗಾಂವಿ (63)...

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು ಧಾರವಾಡದ ಕುಂದಗೋಳ ಠಾಣೆ ಪೋಲಿಸರು ಬಂಧಿಸಿದ್ದಾರೆ. ಕುಂದಗೋಳ ಕಾಳಿದಾಸ ನಗರದ ಶಿವು ಅರಳಿಕಟ್ಟಿ ಎಂಬಾತ ಬಂಧಿತ ಯುವಕ. ಈತ ಫೇಸ್‌ಬುಕ್‌ನಲ್ಲಿ ಶಿವಾಜಿಯ...

ಧಾರವಾಡ | ವಿದ್ಯುತ್ ದರ ಹೆಚ್ಚಳ; ಕೈಗಾರಿಕಾ ಉದ್ಯಮಿಗಳ ಸಂಘ ಖಂಡನೆ

ವಿದ್ಯುತ್ ಶುಲ್ಕ ಗಣನೀಯ ಹೆಚ್ಚಳವನ್ನು ವಿರೋಧಿಸಿ ಧಾರವಾಡ ಬೆಳವಣಿಗೆ ಕೇಂದ್ರ ಮತ್ತು ಕೈಗಾರಿಕೋದ್ಯಮಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಉದ್ಯಮಿ ಕೇಂದ್ರದ ಸದಸ್ಯ ಸಿ ಎಸ್ ಸಿದ್ಧರಾಮಗೌಡ ಪಾಟೀಲ್ ಮಾತನಾಡಿ, ಸರ್ಕಾರ ರಚನೆಯಾಗಿ...

ಧಾರವಾಡ | ಚಿಗರಿ ಬಸ್‌ಗಳಲ್ಲಿ ಮಹಿಳೆಯರಿಗಿಲ್ಲ ಉಚಿತ ಪ್ರಯಾಣ

ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರ ಸಂಪರ್ಕಕ್ಕಾಗಿ ಬಿಆರ್‌ಟಿಎಸ್‌ ನಿಂದ 'ಚಿಗರಿ' ಹೆಸರಿನ ಐಷಾರಾಮಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಈ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X