ಕಲಬುರಗಿ

ಕಲಬುರಗಿ | ಡಿಡಿ ಕಟ್ಟಿ ವರ್ಷ ಕಳೆದರೂ ಸಹ ಹಕ್ಕುಪತ್ರ ನೀಡುತ್ತಿಲ್ಲ : ಸ್ಲಂ ಜನಾಂದೋಲನ ಆಕ್ರೋಶ

ಡಿ.ಡಿ. ಕಟ್ಟಿ ಒಂದು ವರ್ಷ ಕಳೆದರೂ ಸಹ ಹಕ್ಕು ಪತ್ರ ನೀಡುತ್ತಿಲ್ಲ ಎಂದು ಸ್ಲಂ ಜನಾಂದೋಲನ ಆಕ್ರೋಶ ಹೊರಹಾಕಿದೆ. ಕಲಬುರಗಿ ನಗರದಲ್ಲಿ ಹಕ್ಕು ಪತ್ರ ಮತ್ತು ಸ್ಲಂ ಘೋಷಣೆ ವಿಳಂಬ ಮಾಡುತ್ತಿದ್ದರಿಂದ ಹಾಗೂ ಸ್ಲಂ...

ಕಲಬುರಗಿ | ವಕ್ಫ್‌ ಅದಾಲತ್ ಕಾಟಾಚಾರಕ್ಕಲ್ಲ, ಗಂಭೀರವಾಗಿ ಪರಿಗಣಿಸಿ : ಸಚಿವ ಜಮೀರ್

ವಕ್ಫ್‌ ಅದಾಲತ್ ಕಾಟಾಚಾರಕ್ಕೆ ಮಾಡುತ್ತಿಲ್ಲ, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಉಡಾಫೆ ಧೋರಣೆ ತೋರಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ...

ರಾಯಚೂರು | ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣ: ತನಿಖೆಯನ್ನು ಖುದ್ದು ಪರಿಶೀಲಿಸಲು ಎಸ್‌ಪಿಗೆ ಸೂಚಿಸಿದ ಸಿಎಂ

ಕಳೆದ ಆಗಸ್ಟ್ 22 ರಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ದಲಿತ ಸಮುದಾಯದ ಸಂಜಯ್ ಕುರ್ಡೀಕರ್ ಎಂಬುವವರ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ...

ಕಲಬುರಗಿ | ಕಲ್ಯಾಣ ಕರ್ನಾಟಕದಲ್ಲಿ ಐಟಿ ಕಂಪೆನಿ ಸ್ಥಾಪಿಸಿ, ಗುಳೆ ಹೋಗುವುದನ್ನು ತಪ್ಪಿಸಿ: ಅಪ್ಪಾರಾಯ ಬಡಿಗೇರ

ಕಲ್ಯಾಣ ಕರ್ನಾಟಕದ ಜನರು ಗುಳೆ ಹೋಗುವುದನ್ನು ತಡೆಯಲು ವಿದ್ಯಾವಂತರಿಗೆ ಹಾಗೂ ಇತರರಿಗೆ ಸ್ಥಳೀಯವಾಗಿಯೇ ಕೆಲಸಗಳು ಸಿಗುವಂತಾಗಬೇಕು. ಹಾಗಾಗಿ ಐಟಿ ಕಂಪೆನಿಗಳು ಸ್ಥಾಪನೆಯಾಗಿ ತಮ್ಮ ಹುಟ್ಟೂರಿನಲ್ಲಿಯೇ ಕೆಲಸ ಸಿಗುವಂತಾಗಬೇಕು ಎಂದು ಅಪ್ಪಾರಾಯ ಬಡಿಗೇರ ಆಗ್ರಹಿಸಿದ್ದಾರೆ. ಕಲಬುರಗಿ...

₹1,685 ಕೋಟಿ ವೆಚ್ಚದಲ್ಲಿ ಕಲಬುರಗಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ: ಸಿದ್ದರಾಮಯ್ಯ ಘೋಷಣೆ

ರಾಜ್ಯ ಸರ್ಕಾರದಿಂದ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ...

ದಶಕದ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಸಚಿವ ಸಂಪುಟ ಸಭೆ : ಜನರ ನಿರೀಕ್ಷೆಗಳೇನು?

ಒಂದು ದಶಕದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೆಪ್ಟೆಂಬರ್‌ 17ರಂದು ಕಲ್ಯಾಣ ಕರ್ನಾಟಕ ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲು ಕ್ಷಣಗಣನೆ ಶುರುವಾಗಿದೆ. ಕಲ್ಯಾಣ ಭಾಗದ ಜನರಿಗೆ ಈ...

ಕಲಬುರಗಿ | ನಾಳೆ (ಸೆ.17) ಸಿಎಂ ನೇತೃತ್ವದಲ್ಲಿ‌ ಸಚಿವ ಸಂಪುಟ ಸಭೆ, ಅಭಿವೃದ್ಧಿ ಬಗ್ಗೆ ಚರ್ಚೆ: ಪ್ರಿಯಾಂಕ್ ಖರ್ಗೆ

ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ‌ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ‌ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ...

ಕಲಬುರಗಿ | ರಷ್ಯಾ ಸೇನೆಯಲ್ಲಿ ಸಿಕ್ಕಿಕೊಂಡಿದ್ದ ಯುವಕರು ತಮ್ಮೂರಿಗೆ ವಾಪಸ್

ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ ಸೇನೆಯಲ್ಲಿ ಸಿಲುಕಿಕೊಂಡಿದ್ದ ರಾಜ್ಯದ ಮೂವರು ಯುವಕರು ಕರ್ನಾಟಕಕ್ಕೆ ಮರಳಿ ಬಂದಿದ್ದಾರೆ. ತಮ್ಮನ್ನು ಸೆಕ್ಯೂರಿಟಿ ಕೆಲಕ್ಕೆಂದು ಕರೆದೊಯ್ದಿದ್ದ ಏಜೆಂಟ್‌, ಯುದ್ಧಭೂಮಿಯಲ್ಲಿ ಕೆಲಸ ಮಾಡಲು ರಷ್ಯಾ ಸೇನೆಗೆ ಒಪ್ಪಿಸಿದ್ದನೆಂದು...

‌ಕಲಬುರಗಿ | ತಲೆ ಮೇಲೆ ಶಾಲಾ ವಾಹನ ಹರಿದು 3 ವರ್ಷದ ಬಾಲಕಿ ಸಾವು

ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ...

ಕಲಬುರಗಿ | ಸಿಬ್ಬಂದಿ ಕಡಿತ ಆದೇಶ ಹಿಂಪಡೆಯುವಂತೆ ವಸತಿಶಾಲೆ ಹೊರಗುತ್ತಿಗೆ ನೌಕರರ ಸಂಘ ಆಗ್ರಹ

ವಸತಿಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಗಳ ಬಾಕಿವೇತನ ಪಾವತಿಸಲು, ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸ್‌ ಪಡೆಯಲು ಹಾಗೂ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದ ಶಾರ್ಪ್‌ ಏಜೆನ್ಸಿ ಮೇಲೆ ಶಿಸ್ತು ಕ್ರಮ ಜರುಗಿಸಲು ಒತ್ತಾಯಿಸಿ...

ಕಲಬುರಗಿ | ‘ಹೊಸ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ’ ಎಂದು ಶೋ ರೂಮ್​ಗೆ ಬೆಂಕಿ ಇಟ್ಟ ಯುವಕ: ಬಂಧನ

'ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ' ಎಂದು ಶೋ ರೂಮ್​ಗೆ ಬೆಂಕಿ ಇಟ್ಟ ಆರೋಪದ ಮೇಲೆ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಓಲಾ ಎಲೆಕ್ಟ್ರಿಕ್ ಬೈಕ್...

ಕಲಬುರಗಿ | ಹನಿಟ್ರ್ಯಾಪ್ ಪ್ರಕರಣ: ದಲಿತ ಸೇನೆಯ ರಾಜ್ಯಾಧ್ಯಕ್ಷ ಯಳಸಂಗಿ ಸೇರಿ 6 ಮಂದಿ ಪೊಲೀಸರಿಗೆ ಶರಣು

ಯುವತಿಯರನ್ನು ಬಳಸಿಕೊಂಡು ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸಹಿತ ಒಟ್ಟು ಆರು ಜನರು ಸೋಮವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳಾದ ದಲಿತ ಸೇನೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X