ಮಡಿಕೇರಿ

ಕೊಡಗು | ಪ್ರಿಯಕರನ ಮೇಲೆ ಬಿಸಿ ನೀರು ಎರಚಿ ವಿಕೃತಿ ಮೆರೆದ ಯುವತಿಯ ಕುಟುಂಬಸ್ಥರು

ಪ್ರೀತಿಸಿದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಬಿಸಿ ನೀರು ಎರಚಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಸುಹೇಲ್ (27) ಸಂತ್ರಸ್ತ ಯುವಕ. ಈತ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ಗಣಪತಿ ಬೀದಿ‌...

ಕೊಡಗು | ಪ್ರೌಢ ಶಾಲೆ ವಿದ್ಯಾರ್ಥಿನಿ ಕೊಲೆ ಪ್ರಕರಣ; ಆರೋಪಿ ಬಂಧನ

ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ(16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್(32) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದುಬಂದಿದೆ. ಗುರುವಾರ...

ಕೊಡಗು | ಶಾಲೆಗಳಲ್ಲಿ ರಾಗಿ ಮಾಲ್ಟ್ ನೀಡಲು ಚಿಂತನೆ: ಸಚಿವ ಮಧು ಬಂಗಾರಪ್ಪ

ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡುವ ಕುರಿತು ಚರ್ಚೆಗಳು ಆರಂಭವಾಗಿರುವ ಬೆನ್ನಲ್ಲೇ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾತನಾಡಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲಾ...

ಕೊಡಗು | ಕಾಫಿ ಕೊಯ್ಲಿಗೆ ಸಿಗುತ್ತಿಲ್ಲ ಕಾರ್ಮಿಕರು; ವೇತನದ ಜಾಹೀರಾತು ಹಿಡಿದು ನಿಂತ ಮಾಲೀಕರು

ಕರ್ನಾಟಕವೂ ಸೇರಿದಂತೆ ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಮ್ಮರವಾಗಿದೆ. ಉದ್ಯೋಗಗಳ ಕೊರತೆ ಮತ್ತು ಉದ್ಯೋಗಾಕಾಂಕ್ಷಿಗಳ ಹೆಚ್ಚಳದಿಂದ ಉದ್ಯೋಗಿಗಳಿಗೆ ವೇತನವೂ ಅಗತ್ಯಕ್ಕಿಂತ ಕಡಿಮೆಯೇ ಇದೆ. ಕೂಲಿ ಕೆಲಸ ಮಾಡುವವರೂ ಕೂಡ ಶ್ರಮಕ್ಕೆ ತಕ್ಕ ಕೂಲಿ ಸಿಗದೆ...

ಕೊಡಗು | ದೇಶದಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವುದು ಬಿಜೆಪಿ: ಸಚಿವ ಬೋಸರಾಜು

ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವುದು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು. ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ...

ಕೊಡಗು | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ, ಅವಹೇಳನಕಾರಿಯಾಗಿ ಮತ್ತು ಮಾನಹಾನಿಕರವಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕು...

ಕೊಡಗು | ಚಾರಣಕ್ಕೆ ತೆರಳಿದ್ದ ಯುವಕ ಹೃದಯಘಾತದಿಂದ ಸಾವು

ಚಾರಣಕ್ಕೆಂದು ತೆರಳಿದ್ದ ಹರಿಯಾಣ ಮೂಲದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿ ನಡೆದಿದೆ. ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ. ಆತ ತನ್ನ ಸ್ನೇಹಿತರೊಂದಿಗೆ...

ಕೊಡಗು | ವಿದ್ಯಾರ್ಥಿಗಳಲ್ಲಿ ಅನ್ವೇಷಣೆ ಸಾಮರ್ಥ್ಯ ಬೆಳೆಸಲು ಕೆ‌ ಟಿ ಬೇಬಿಮ್ಯಾಥ್ಯೂ ಕರೆ

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕಾ ಆಸಕ್ತಿ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಅನ್ವೇಷಣೆ ಸಾಮರ್ಥ್ಯ ಬೆಳೆಸುವ ಮೂಲಕ ಅವರನ್ನು ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಪ್ರೇರೇಪಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ...

ಕೊಡಗು | ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ; ಮಾಹಿತಿ ನೀಡಲು ಎಸ್‌ಪಿ ಮನವಿ

ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಕೊಡಗು ಜಿಲ್ಲಾ ವರಿಷ್ಠಾಧಿಕಾರಿ ಕೆ ರಾಮರಾಜನ್‌ ಕೋರಿದ್ದಾರೆ. 2024ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ,...

ಕೊಡಗು | ತಪ್ಪು ಮಾಡಿದ್ದರೆ ನನಗೆ ಮರಣ ದಂಡನೆ ನೀಡಿ: ಪೌರಾಯುಕ್ತ

ನನ್ನ ಕರ್ತವ್ಯದಲ್ಲಿ ನಾನು ತಪ್ಪು ಮಾಡಿದ್ದು ಸಾಬೀತಾದರೆ ನನಗೆ ಮರಣ ದಂಡನೆ ನೀಡಿ ಎಂದು ಮಡಿಕೇರಿ ನಗರಸಭೆ ಪೌರಾಯುಕ್ತ ವಿಜಯ್ ಹೇಳಿಕೆ ನೀಡಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತರ ಮೇಲೆ...

ಕೊಡಗು | ಜ.26ರಿಂದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ

ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡುವ ಪ್ರತಿ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಇತರ ಸಂಬಂಧ...

ಕೊಡಗು | ತುರ್ತು ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕ ದಳದ ಸಿಬ್ಬಂದಿ ಕಾರ್ಯ ಶ್ಲಾಘನೀಯ: ಬಿ.ಎನ್.ವೀಣಾ

ಹಬ್ಬ, ಜಾತ್ರೆ, ಚುನಾವಣೆ ಮುಂತಾದ ಪ್ರಮುಖ ಕಾರ್ಯಕ್ರಮಗಳು, ಪ್ರಾಕೃತಿಕ ವಿಕೋಪ ಹೀಗೆ ಹಲವು ತುರ್ತು ಸಂದರ್ಭಗಳಲ್ಲಿ ಪೊಲೀಸರ ಜತೆ ಕೈಜೋಡಿಸಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕ ದಳದ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಕೊಡಗಿನ...

ಈ ಹೊತ್ತಿನ ಪ್ರಮುಖ ಸುದ್ದಿ