ಕೊಪ್ಪಳ

ಕೊಪ್ಪಳ | ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಮತ್ತು ಬರುವ ಚಾಕೊಲೇಟ್ ಕೊಡಿಸಿ 13 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಮಲ್ಲಪ್ಪ ತೋಳದ (37), 8ನೇ ತರಗತಿ...

ಕೊಪ್ಪಳ | ಬುಲೆರೋ- ಬೈಕ್‌ ಡಿಕ್ಕಿ; ಮೂವರು ಸಾವು

ಬುಲೆರೋ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಗಾವತಿ ತಾಲ್ಲೂಕು ಇಂದರಗಿ ಗ್ರಾಮದ ಬಳಿ ನಡೆದಿದೆ. ಮೃತಪಟ್ಟಿರುವ ರಾಜಾಹುಸೇನ್ (18) ಗಂಗಾವತಿ ತಾಲ್ಲೂಕು ಶ್ರೀರಾಮನಗರ, ಕೊಪ್ಪಳ...

ಕೊಪ್ಪಳ | ಅಂಬೇಡ್ಕರ್ ಪರಿನಿಬ್ಬಾಣದ ದಿನದಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಡಾ. ಬಿ ಆರ್ ಅಂಬೇಡ್ಕರ್ ಪರಿನಿ‌ಬ್ಬಾಣದ ದಿನದ ಅಂಗವಾಗಿ ತಾವರಗೇರಾದಲ್ಲಿ ಕರ್ನಾಟಕ ಪ್ರತಿಭಾ ಅಕಡೆಮಿಯು ಕೊಪ್ಪಳ ಜಿಲ್ಲೆಯ ಎಸ್‌ಸಿ/ಎಸ್‌ಟಿ ಹಾಗೂ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದಲ್ಲಿ...

ಕೊಪ್ಪಳ | ಮಕ್ಕಳ ಹಕ್ಕುಗಳ ಗ್ರಾಮಸಭೆ ಮನವಿಗೆ ಸಿಇಒ ನಿರ್ಲಕ್ಷ್ಯ: ಕೆಸಿಆರ್‌ಒ ಆರೋಪ

ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರವು ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಹಕ್ಕುಗಳ ಗ್ರಾಮಸಭೆ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತಂದಿದ್ದರೂ ಕೊಪ್ಪಳ ಜಿಲ್ಲೆಯ ಯಾವುದೇ ಗ್ರಾಮ ಪಂಚಾಯತಿಲ್ಲೂ...

ಕೊಪ್ಪಳ | ನ.30ರಂದು ಸಾಹಿತ್ಯ ಅಕಾಡೆಮಿಯಿಂದ ʼಸ್ವಜನ ಸಮ್ಮಿಲನʼ ಕಾರ್ಯಕ್ರಮ

ಸಾಹಿತ್ಯ ಅಕಾಡೆಮಿ ಹಾಗೂ ಶಕ್ತಿ ಶಾರದೆಯ ಮೇಳ, ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ನಗರದಲ್ಲಿ ʼಸೃಜನ ಸಮ್ಮಿಲನʼ ಕಾರ್ಯಕ್ರಮ ಇದೇ ನವಂಬರ್ 30ರಂದು ನಡೆಯಲಿದೆ. ಕಾವ್ಯ, ಕಥೆ, ಕಲೆ–ಸಾಹಿತ್ಯ ವಿಚಾರಗಳಿಂದ ಸಮೃದ್ಧಗೊಂಡ ಈ ಕಾರ್ಯಕ್ರಮವನ್ನು...

ಕೊಪ್ಪಳ | ಬೀದಿ ನಾಯಿ ಹಾವಳಿ; ಸುಪ್ರೀಂ ಕೋರ್ಟ್‌ ಆದೇಶ ಅನುಷ್ಠಾನಕ್ಕೆ ಅಧಿಕಾರಿಗಳ ವಿಶೇಷ ಸಭೆ

ಸುಪ್ರೀಂ ಕೋರ್ಟ್ ಆದೇಶದಂತೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ ವಿಠ್ಠಲ್ ಚೌಗಲಾ ಮತ್ತು ತಾಪಂ...

ಕೊಪ್ಪಳ | ವಸತಿ ನಿಲಯದಲ್ಲಿ ಬಾಲಕಿಗೆ ಹೆರಿಗೆ; ಮೇಲ್ವಿಚಾರಕಿ ವಜಾ

ಕೊಪ್ಪಳ ಜಿಲ್ಲೆ ಕುಕುನೂರು ತಾಲೂಕಿನ ವಸತಿ ನಿಲಯವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಕರ್ತವ್ಯ ಲೋಪದ ಹಿನ್ನೆಲೆ ಮೇಲ್ವಿಚಾರಕನನ್ನು ತಾತ್ಕಾಲಿಕ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ...

ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ನಿಧನರಾಗಿದ್ದಾರೆ. ಅನಾರೋಗ್ಯ ಕಾರಣದಿಂದ ಕಳೆದ ನಾಲ್ಕು ದಿನಗಳಿಂದ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇದೀಗ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ...

ಕೊಪ್ಪಳ | ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನ ಕಾನೂನು ಅರಿವು ಅತ್ಯಗತ್ಯ: ಅನ್ನಪೂರ್ಣ

ಇತ್ತೀಚೆಗೆ ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ವಾಗುತ್ತಿವೆ. ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸುವುದು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನ ಕಾನೂನು ಅರಿವು ಅಗತ್ಯವಿದೆ ಎಂದು...

ಕೊಪ್ಪಳ | ಹಣವಾಳ ಪಿಡಿಒ ಅಮಾನತು

ಗ್ರಾಮ ಪಂಚಾಯತಿ ಸದಸ್ಯರ ಗೌರವಧನವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಹಣವಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿಡಿಒ ಗೌಸ್‌ ಸಾಬ ಮುಲ್ಲಾ ಅವರನ್ನು ಅಮಾನತು ಮಾಡಲಾಗಿದೆ. ಗೌಸ್ ಸಾಬ ಅವರನ್ನು ಅಮಾನತು ಮಾಡಿ...

ಕೊಪ್ಪಳ | ಕೌಟುಂಬಿಕ ನ್ಯಾಯಾಲದಲ್ಲಿ ವ್ಯಾಜ್ಯ; ಪತ್ನಿ, ಅತ್ತೆ-ಮಾವನಿಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನ

ಕೊಪ್ಪಳ ನಗರದ ಜಿಲ್ಲಾ ಕೌಟುಂಬಿಕ ನ್ಯಾಯಾಲದಲ್ಲಿ ವೈವಾಹಿಕ ವಿಚ್ಛೇದನದ ಸಂಬಂಧಿತವಾಗಿ ವ್ಯಾಜ್ಯ ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿ, ಅತ್ತೆ ಹಾಗೂ ಮಾವನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ನ್ಯಾಯಾಲಯದ ಮಧ್ಯಸ್ಥಿಕೆದಾರರ...

ಕೊಪ್ಪಳ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಸಿಕ್ಕರೆ ಖುಷಿ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಸಿಗುತ್ತದೆ ಎಂದರೆ ಅದು ನನಗೂ ಸಂತೋಷದ ವಿಷಯ. ಇದರಿಂದ‌ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಈ ಹೊತ್ತಿನ ಪ್ರಮುಖ ಸುದ್ದಿ