ಜಿಲ್ಲೆಗಳು

ಬೀದರ್‌ | ಬಸವ ಪಂಚಮಿ ಆಚರಣೆ: ಮಕ್ಕಳಿಗೆ ಹಾಲು, ಬಾಳೆಹಣ್ಣು ವಿತರಣೆ

ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ಸೋಮವಾರ ಮಾನವ ಬಂಧುತ್ವ ವೇದಿಕೆ ಕರ್ನಾಟಕ ವತಿಯಿಂದ ಅರ್ಥಪೂರ್ಣವಾಗಿ ಬಸವ ಪಂಚಮಿ ಆಚರಿಸಲಾಯಿತು. ನಾಗರ ಪಂಚಮಿಯ ಬದಲಾಗಿ ಬಸವ ಪಂಚಮಿ ಆಚರಿಸಿ, ಅಲೆಮಾರಿ ಜನಾಂಗದ ಮಕ್ಕಳಿಗೆ ಹಾಲು...

ಸಿಂಧನೂರು | ಹಿರೇಹಳ್ಳದಲ್ಲಿ ಮರಳು ಅಕ್ರಮ ಗಣಿಗಾರಿಕೆ ತಡೆಗೆ ರೈತ ಸಂಘ ಆಗ್ರಹ

ಸಿಂಧನೂರು ನಗರದ ಹಿರೇಹಳ್ಳದಲ್ಲಿ ನಡೆಯುತ್ತಿರುವ ಮರಳು ಅಕ್ರಮ ಗಣಿಗಾರಿಕೆ ತಡೆಗಟ್ಟಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸ್ಥಳಕ್ಕೆ ತೆರಳಿ ಪ್ರತಿಭಟಿಸಿದರು. ನಿರ್ದಿಷ್ಟ ಸ್ಥಳದಲ್ಲಿ ಮಾತ್ರ ಮರಳು...

ಚಿಕ್ಕಮಗಳೂರು | ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು 

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಪ್ರವಾಸಕ್ಕೆಂದು ಬಂದಿದ್ದ ದಂಪತಿಯ ಕಾರು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಸೋಮಾವತಿ ನದಿ ಸೇತುವೆಗೆ...

ಚಿಕ್ಕಮಗಳೂರು | ಸಚಿವ ನಾಗೇಂದ್ರ; ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ 

ಚಿಕ್ಕಮಗಳೂರು ನಗರದ ತಾಲೂಕು ಕಚೇರಿ ಮುಂಭಾಗ ಸಚಿವ ನಾಗೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.  ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು...

ಯಾದಗಿರಿ | ಮೂರು ತಿಂಗಳಲ್ಲೇ ಕಿತ್ತುಹೋದ ₹3.95 ಕೋಟಿ ರಸ್ತೆ; ಕಳಪೆ ಕಾಮಗಾರಿ ಆರೋಪ

₹3.95 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಕಾಮಗಾರಿ ಪೂರ್ಣಗೊಂಡು ಕೇವಲ ಮೂರು ತಿಂಗಳಲ್ಲೇ ಡಾಂಬರ್ ಕಿತ್ತುಹೋಗಿ, ಜಲ್ಲಿಕಲ್ಲುಗಳು ಮೇಲೆದ್ದು ಗುಂಡಿಗಳು ನಿರ್ಮಾಣವಾಗಿರುವ ಘಟನೆ ಗುರುಮಠಕಲ್ ಮತಕ್ಷೇತ್ರದ ಪಾಡಪಲ್ಲಿ ಬಳಿ ನಡೆದಿದೆ. ಕಳಪೆ ಕಾಮಗಾರಿ...

ಯಾದಗಿರಿ | 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆಗೆ ಆಗ್ರಹ

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ 4 ಸಾವಿರ ಹೈಸ್ಕೂಲ್ ಶಿಕ್ಷಕರ ನೇಮಕಾತಿಯಲ್ಲಿ ಗಣಿತ ಸೇರಿದಂತೆ ವಿಷಯವಾರು ಶಿಕ್ಷಕರ ಹುದ್ದೆಗಳನ್ನು ಸೇರಿಸಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ...

ಚಿಕ್ಕಮಗಳೂರು | ವಿದ್ಯಾರ್ಥಿಗಳು ಉತ್ತಮ ಆಹಾರ, ಜೀವನಶೈಲಿ ರೂಢಿಸಿಕೊಳ್ಳಬೇಕು; ಬಸವ ಮರುಳಸಿದ್ದ ಸ್ವಾಮೀಜಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿಕ್ಕಮಗಳೂರು ಜಿಲ್ಲಾ ಘಟಕದಿಂದ, ಸರ್ಕಾರಿ ನೌಕರರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶನಿವಾರ ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ತಮ...

ಕಲಬುರಗಿ | ಮೂಢನಂಬಿಕೆ ತೊರೆದು ಮಾನವೀಯತೆಯಿಂದ ಬಸವ ಪಂಚಮಿ ಆಚರಿಸಿ: ಕರೆ

ಬಸವ ಪಂಚಮಿ ಹಬ್ಬವನ್ನು ಮೂಢನಂಬಿಕೆ ಹಾಗೂ ಕಂದಾಚಾರಗಳಿಗೆ ಅವಕಾಶ ನೀಡದೆ ವೈಚಾರಿಕ, ವೈಜ್ಞಾನಿಕ ಮತ್ತು ಮಾನವೀಯ ಮೌಲ್ಯಗಳೊಂದಿಗೆ ಆಚರಿಸಬೇಕು ಎಂದು ಮಾನವ ಬಂಧುತ್ವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಬಸವ ಪಂಚಮಿ...

ಹಾವೇರಿ | ಟೇಲರಿಂಗ್ ಶಾಪ್ ನಲ್ಲಿ ಗ್ರಂಥಾಲಯ ಉದ್ಘಾಟನೆ

ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಮನೆಗೊಂದು ಗ್ರಂಥಾಲಯ ಅಡಿಯಲ್ಲಿ ವಿನೂತಾ ಟೇಲರಿಂದ ಶಾಪ್ ನಲ್ಲಿ ಗ್ರಂಥಾಲಯ ಅನುಷ್ಠಾನಗೊಂಡಿತು. ಹಾವೇರಿ ಪಟ್ಟಣದ ಬಸವೇಶ್ವರ ನಗರದ 11ನೇ ಕ್ರಾಸ್ ಬಳಿ ವಿನೂತಾ ಟೇಲರಿಂಗ್ ಶಾಪ್ ನಲ್ಲಿ ಗ್ರಂಥಾಲಯವನ್ನು...

ಚಿಕ್ಕಬಳ್ಳಾಪುರ | ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು

ಸಿಂಗಾಟಕದಿರೇನಹಳ್ಳಿ ಗ್ರಾಮದ ದಲಿತರಿಗೆ ಮಂಜೂರಾಗಿರುವ ಜಮೀನಿನ ವಿವಾದವನ್ನು ಕೂಡಲೇ ಇತ್ಯರ್ಥಪಡಿಸಬೇಕು ಎಂದು ಒತ್ತಾಯಿಸಿ ಕಳೆದ 64ಕ್ಕೂ ಹೆಚ್ಚು ದಿನಗಳಿಂದ ಧರಣಿ ನಡೆಸುತ್ತಿರುವ ದಲಿತ ಸಂಘಟನೆಗಳು, ಆ.27ರಂದು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿವೆ.ಅಂದು ತಿರ್ನಹಳ್ಳಿ...

ಗದಗ | ಎಸ್.ಐ.ಆರ್; 7,82,081 ಎನ್ಯುಮರೇಷನ್ ಫಾರ್ಮಗಳ ಡಿಜಿಟಲೀಕರಣ

ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ಮತದಾರರ ಪಟ್ಟಿಯಲ್ಲಿದ್ದಾರೆ....

ಗದಗ | ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ 2026-27 ನೇ ಸಾಲಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ 29ಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ