ಜಿಲ್ಲೆಗಳು

ಬಾಗೇಪಲ್ಲಿ | ಬಿಜೆಪಿ ಕೈಗೊಂಬೆಯಾಗಿರುವ ಜ್ಞಾನೇಶ್ ಕುಮಾರ್‌ರನ್ನ ಆಯುಕ್ತ ಸ್ಥಾನದಿಂದ ತಕ್ಷಣ ವಜಾಗೊಳಿಸಿ : ಪಿ.ಎಂ.ಮುನಿ ವೆಂಕಟಪ್ಪ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಸಿಪಿಐಎಂ...

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವ ಉದ್ದೇಶದಿಂದ ಪ್ರಶಾಂತಿ ಫೌಂಡೇಶನ್ ವತಿಯಿಂದ ಅಕ್ಟೊಬರ್ 2ರಂದು ಅಂದರೆ ನಾಳೆ ಶಿರಸಿಯಲ್ಲಿ ‘ಮನಸಿರಿ’...

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ಧರ್ಮಸ್ಥಳ ಅಸಹಜ ಸಾವು | 10 ವರ್ಷದಲ್ಲಿ 123 ಅಪರಿಚಿತ ಶವ ಪತ್ತೆ: ಖಾಸಗಿ ಆಸ್ಪತ್ರೆಯಲ್ಲಿ 84 ಶವಗಳ ‘ಪೋಸ್ಟ್‌ ಮಾರ್ಟಮ್’

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ (2015 ರಿಂದ 2026ರ ಆರಂಭದವರೆಗೆ) ದಾಖಲಾದ ಅಸ್ವಾಭಾವಿಕ ಮರಣ (Unnatural Death Report - UDR) ಪ್ರಕರಣಗಳು ಹಾಗೂ ಅಪರಿಚಿತ ಶವಗಳ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರ, ಪಾರದರ್ಶಕವಾಗಿ ಹಾಗೂ ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ ವಿಶೇಷವಾಗಿ ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿ ಜಮಖಂಡಿಯಲ್ಲಿ ರಾಜ್ಯ ರೈತ ಸಂಘ ಮತ್ತು ನಂದಿ ಸೇನೆ ನೇತೃತ್ವದಲ್ಲಿ ರೈತರು ಎತ್ತಿನ ಬಂಡಿಯಲ್ಲಿ...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕಲ್ಪಿಸುವುದರ ಜೊತೆಗೆ, ಸರ್ಕಾರಿ ನೌಕರರಿಗೆ ದೊರೆಯುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹುಬ್ಬಳ್ಳಿಯಲ್ಲಿ ಸಂಸದ ಜಗದೀಶ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ ಬಿತ್ತನೆ ಬೀಜ ಒದಗಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಬರದಿಂದ ಸಂಕಷ್ಟಕ್ಕೀಡಾಗಿರುವ ಅನ್ನದಾತರಿಗೆ ಕೇಂದ್ರ ಸರ್ಕಾರವೂ ತಕ್ಷಣ ನೆರವು ನೀಡಬೇಕು ಎಂದು...

ಚಾಮರಾಜನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೊಳ್ಳೇಗಾಲ ಪಟ್ಟಣದ ಎಂಜಿಎಸ್‌ವಿ ಪದವಿಪೂರ್ವ ಕಾಲೇಜು...

ಮಧುಗಿರಿ | ಸಿಂಹಾದ್ರಿ ಕುಟುಂಬಕ್ಕೆ ಸಾಂತ್ವನ : ತಾಯಿಗೆ ಉದ್ಯೋಗ, ಮನೆ ನಿರ್ಮಾಣದ ಭರವಸೆ

ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ ಮೃತಪಟ್ಟ ಪರಿಶಿಷ್ಟ ಜಾತಿಯ ಸಿಂಹಾದ್ರಿ ಅವರ ಮನೆಗೆ ಶಾಸಕ ಕೆ.ಎನ್. ರಾಜಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಿಂಹಾದ್ರಿ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ,...

ಕಾರವಾರ | 80 ಪ್ರಕರಣಗಳ ಪೈಕಿ 63ಕ್ಕೆ ಒಂದೇ ದಿನದಲ್ಲಿ ಪರಿಹಾರ

ಕಾರವಾರ: ವಿವಿಧ ಇಲಾಖೆಗಳು ಹಾಗೂ ಕಾನೂನು ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ 80 ಪ್ರಕರಣಗಳ...

SIR: ಮತದಾನದ ಹಕ್ಕು ಕಸಿಯುವ ಯಾವುದೇ ವ್ಯವಸ್ಥೆ ಒಪ್ಪಲಾಗದು-ಪ್ರಕಾಶ್ ರಾಜ್

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಆ ಹಕ್ಕಿಗೆ ಧಕ್ಕೆ ಉಂಟುಮಾಡುವ ಯಾವುದೇ ವ್ಯವಸ್ಥೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಹೇಳಿದರು. ಮಂಡ್ಯದ ನ್ಯೂ...

ಈ ಹೊತ್ತಿನ ಪ್ರಮುಖ ಸುದ್ದಿ