ಜಿಲ್ಲೆಗಳು

ಯಾದಗಿರಿ | ಮಹಿಳಾ ಮೀಸಲಾತಿ ತಕ್ಷಣ ಜಾರಿಗೆ ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

ಮಹಿಳಾ ಮೀಸಲಾತಿಯನ್ನು ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ಬೇರ್ಪಡಿಸಿ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿಯನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ...

ಕಲಬುರಗಿ | ಬಸ್ ಪಲ್ಟಿ: 34ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಆಳಂದ ತಾಲೂಕಿನ ರಾಜೋಳ–ಭೂಸನೂರ ತಾಂಡ ಮಾರ್ಗದಲ್ಲಿ ಬುಧವಾರ ಕೆಕೆಆರ್‌ಟಿಸಿ ಬಸ್ ಪಲ್ಟಿಯಾಗಿ 34ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ರಸ್ತೆ ಮತ್ತು ಸೇತುವೆಯ ದುಸ್ಥಿತಿಯೇ ಪ್ರಮುಖ...

ಕಲಬುರಗಿ | ದಲಿತ ಸಂಘರ್ಷ ಸಮಿತಿ ಭೀಮಮಾರ್ಗ: ತಾಲೂಕು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ

ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಪದಾಧಿಕಾರಿಗಳ ಸಭೆ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ನಗರದ ಐವಾನ ಶಾಹಿ ಅತಿಥಿ ಗೃಹದಲ್ಲಿ ಮಂಗಳವಾರ...

ಚಿಕ್ಕಮಗಳೂರು | ಕಾಫಿನಾಡಿನಲ್ಲಿ ತುಂಗೆ ಉಕ್ಕಿ ಹರಿಯುತ್ತಿದೆ 

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡಿನ ಚಿತ್ರಣವೇ ಸಂಪೂರ್ಣವಾಗಿ ಬದಲಾಗಿದೆ. ಆರಂಭದಲ್ಲಿ ಮಳೆ ಕೊರತೆಯಿಂದ ಕಂಗಾಲಾಗಿದ್ದ ಜಿಲ್ಲೆಯಲ್ಲಿ ಇದೀಗ ಮಳೆರಾಯನ ಅಬ್ಬರ ತೀವ್ರಗೊಂಡಿದೆ. ಶೃಂಗೇರಿ ತಾಲೂಕು...

ಎಸ್‌ಐಆರ್ | ಬೀದರ್ ಜಿಲ್ಲೆಯಲ್ಲಿ 2.45 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಬೀಳುವ ಭೀತಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಲಕ್ಷಾಂತರ ಬಡವರು, ವಲಸೆ ಕಾರ್ಮಿಕರು, ಅಲೆಮಾರಿ ಸಮುದಾಯದವರು ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವವರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಹುನ್ನಾರ ನಡೆಯುತ್ತಿದೆ ಎಂದು ಎಸ್‌ಐಆರ್...

ಚಿಕ್ಕಮಗಳೂರು | ಅಪ್ರಾಪ್ತ ಮಗು: ಲೈಂಗಿಕ ಶೋಷಣೆ, ನಿಂದನೆ ವಿಡಿಯೋ ವೈರಲ್; ಆರೋಪಿ ಬಂಧನ 

ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತ ಮಗುವಿನ ಲೈಂಗಿಕ ಶೋಷಣೆ ಹಾಗೂ ನಿಂದನೆಯ (CSEAM) ವೀಡಿಯೊ ಹಂಚಿಕೊಂಡಿದ್ದ ಚಿಕ್ಕಮಗಳೂರಿನ ಯುವಕನೊಬ್ಬನ ಮೇಲೆ ಪ್ರಕರಣ ದಾಖಲಾಗಿದೆ.  ನಗರದ ಟಿಪ್ಪು ನಗರದ ನಿವಾಸಿ ಅಗ್ಟನ್ (20), ಸಾಮಾಜಿಕ ಜಾಲತಾಣವಾದ 'ಸ್ಕ್ಯಾಪ್‌ಚಾಟ್‌'...

ಉಡುಪಿ | ಬ್ರಹ್ಮಾವರ ವಲಯ ಕರಾಟೆ ಸ್ಪರ್ಧೆ: 40 ಶಾಲೆಗಳ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಬೊಕ್ಕಪಟ್ಣ ಹೊನ್ನಾಳ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯು ಬುಧವಾರ...

ಚಿಕ್ಕಮಗಳೂರು | ಮಂತ್ರಿಗಿರಿ ಪಟ್ಟಿಯಲ್ಲಿ ಶಾಂತೇಗೌಡ; ನಿರಾಸೆಯಾಗಿದ್ದೇಕೆ? 

2023ರ ವಿಧಾನಸಭಾ ಚುನಾವಣೆಯಲ್ಲಿ ಸುದೀರ್ಘ 24 ವರ್ಷಗಳ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಐದಕ್ಕೆ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್‌ಗೆ, ಇದೀಗ ಸಚಿವ ಸಂಪುಟ ರಚನೆಯಲ್ಲಿ ಜಿಲ್ಲೆಯನ್ನು ಕಡೆಗಣಿಸಿರುವುದು ಕಾರ್ಯಕರ್ತರಲ್ಲಿ ಭಾರಿ...

ಬೀದರ್‌ | ಹಳ್ಳಕ್ಕೆ ವಿಷಯುಕ್ತ ರಾಸಾಯನಿಕ ತ್ಯಾಜ್ಯ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಹುಮನಾಬಾದ್‌ನ ಮಾಣಿಕನಗರದ ಹಳ್ಳಕ್ಕೆ ಹಾಗೂ ಗುರುಗಂಗಾ ಮತ್ತು ಮೀರಜಾ ನದಿಗೆ ಹುಮನಾಬಾದ್ ಕೈಗಾರಿಕಾ ಪ್ರದೇಶದ ಕೆಲವು ಕಾರ್ಖಾನೆಗಳಿಂದ ವಿಷಯುಕ್ತ ರಾಸಾಯನಿಕ ತ್ಯಾಜ್ಯ ಹರಿಸಲಾಗುತ್ತಿರುವ ಕುರಿತಂತೆ ಪರಿಶೀಲಿಸಿ ನಿಯಮಾನುಸಾರ ಕಠಿಣ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಗೆ ಸಿಗದ ಸಚಿವ ಸ್ಥಾನ : ಮೆಣಸಿನಕಾಯಿ ತಿಂದು ಬೆಂಬಲಿಗರಿಂದ ವಿನೂತನ ಪ್ರತಿಭಟನೆ

ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬಾಗೇಪಲ್ಲಿ,ಚೇಳೂರು ಸೇರಿದಂತೆ ಗುಡಿಬಂಡೆ ಸುತ್ತಮುತ್ತಲಿನ ತಾಲೂಕುಗಳಲ್ಲಿ ಬೆಂಬಲಿಗರ ಆಕ್ರೋಶ ಮುಗಿಲು ಮುಟ್ಟಿದೆ. ಈ ಅಸಮಾಧಾನದ ಬಿಸಿ ಇಂದು ತೀವ್ರ ಸ್ವರೂಪ...

ಕೋಲಾರ | ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂದೇಶ್ ಬರದಂತೆ ನಿರ್ಬಂಧ: ದಲಿತ ಮುಖಂಡರ ಆಕ್ರೋಶ

ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಒಂದು ತಿಂಗಳು ಕಾಲ ಬರದಂತೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧ ಮಾಡಿರುವ ಆದೇಶವನ್ನು ಕೂಡಲೇ ಹಿಂಪಡೆದು, ತಾಲೂಕಿನ ಭಾಗೇಪಲ್ಲಿಯಲ್ಲಿ ಹೋರಾಟ ಮಾಡಲು ಅನುವು ಮಾಡಿಕೊಡಬೇಕು...

ಬಸವಕಲ್ಯಾಣ | ತಂತ್ರಜ್ಞಾನದ ಸದ್ಬಳಕೆಯಿಂದ ರಾಷ್ಟ್ರ ಕಟ್ಟಲು ಮುಂದಾಗಿ : ದತ್ತಾತ್ರೇಯ ಗಾದಾ

ಜವಾಹರ್ ನವೋದಯ ವಿದ್ಯಾಲಯವು ಆಧುನಿಕ ಶಿಕ್ಷಣಕ್ಕೆ ಅಗತ್ಯವಿರುವ ತಂತ್ರಜ್ಞಾನದ ಸಂಪನ್ಮೂಲಗಳ ಸೌಕರ್ಯ ಹೊಂದಿದ್ದು, ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಅಧ್ಯಯನದೊಂದಿಗೆ ರಾಷ್ಟ್ರ ಕಟ್ಟುವ ಕಾರ್ಯಕ್ಕೆ ಮುಂದಾಗಬೇಕು ಬಸವಕಲ್ಯಾಣ ತಹಸೀಲ್ದಾರ್‌ ದತ್ತಾತ್ರೇಯ ಗಾದಾ...

ಈ ಹೊತ್ತಿನ ಪ್ರಮುಖ ಸುದ್ದಿ