ಜಿಲ್ಲೆಗಳು

ಬೆಳಗಾವಿ | ಗಂಡನ ಮನೆಯವರ ಕಿರುಕುಳ: 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ

ಗಂಡನ ಮನೆಯವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಮೂರು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಪೀರನವಾಡಿ ಪಾಟೀಲ್...

ಅಲಿಯಾಬಾದ್ | ಮೀಸಲಾತಿ ಮರುಪರಿಶೀಲನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಆಗ್ರಹ

ನಾಗಠಾಣಾ ವಿಧಾನಸಭಾ ಕ್ಷೇತ್ರದ ಅಲಿಯಾಬಾದ್ ಗ್ರಾಮ ಪಂಚಾಯತ್‌ನ ವಾರ್ಡ್ ಸಂಖ್ಯೆ-2ರ ಮೀಸಲಾತಿಯನ್ನು ನಿಯಮಾನುಸಾರ ಮರುಪರಿಶೀಲಿಸಿ, ಪರಿಶಿಷ್ಟ ಜಾತಿ (ಎಸ್‌ಸಿ) ಮಹಿಳೆಗೆ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.)...

ಚಿಕ್ಕಬಳ್ಳಾಪುರ | 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಪೊಕ್ಸೋ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದ್ದು, ಪೋಷಕರ ದೂರಿನ ಮೇರೆಗೆ ಬಾಗೇಪಲ್ಲಿ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆ ಅಂಗಳದಲ್ಲಿ...

ತಾಳಿಕೋಟಿ | ಪರಮಾನಂದ ಬೆಟ್ಟವನ್ನು ‘ದೇವಿವನ’ವಾಗಿ ರೂಪಿಸಲು ಪ್ರಯತ್ನಿಸುವೆ: ಬಸವರಾಜ ಬಿರಾದಾರ್ ನರಸಲಗಿ

ಪರಮಾನಂದ ಬೆಟ್ಟವನ್ನು ಪರಿಸರ ಸ್ನೇಹಿತರ ಆಶಯದಂತೆ ಡೀಮ್ಡ್ ಅರಣ್ಯವಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದನ್ನು ʼದೇವಿವನʼವನ್ನಾಗಿ ರೂಪಿಸುವ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುದ್ದೇಬಿಹಾಳ ಸಾಮಾಜಿಕ ಅರಣ್ಯ...

ಗದಗ | ಸಾಲದ ಒತ್ತಡ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಒತ್ತಡದಿಂದ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂತೋಷಗೌಡ(31) ಅವರು ಸವಡಿ ಕೆವಿಜಿ ಬ್ಯಾಂಕ್‌ನಲ್ಲಿ ₹2 ಲಕ್ಷ, ರೋಣ ಎಸ್‌ಬಿಐ ಬ್ಯಾಂಕ್‌ನಲ್ಲಿ...

ಕಲಬುರಗಿ | ಅಕ್ರಮ ಮರಳು ದಂಧೆ ವಿರುದ್ಧ ದೂರು; ಕರವೇ ಜಿಲ್ಲಾಧ್ಯಕ್ಷನಿಗೆ ಜೀವ ಬೆದರಿಕೆ, ಪ್ರಕರಣ ದಾಖಲು

ಅಕ್ರಮ ಮರಳು ದಂಧೆ ವಿರುದ್ಧ ದೂರು ನೀಡಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾಧ್ಯಕ್ಷ ಆನಂದ ಎಸ್. ದೊಡ್ಡಮನಿ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಬ್ರಹ್ಮಪುರ...

ರಾಯಚೂರು | ಮಾಜಿ ಶಾಸಕ ಸೈಯದ್ ಯಾಸೀನ್ ಅಂತಿಮ ದರ್ಶನಕ್ಕೆ ಈದ್ಗಾ ಮೈದಾನದಲ್ಲಿ ವ್ಯವಸ್ಥೆ

ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ರಾಯಚೂರು ನಗರ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ ಅವರ ನಿಧನ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಇಂದು ಬೆಳಿಗ್ಗೆ 11.30ರಿಂದ ನಗರದ ಅರಬ್ ಮೊಹಲ್ಲಾದ...

ಯಾದಗಿರಿ | ಭೀಮಾ ನದಿ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ; ದೂರು ದಾಖಲು

ಜಿಲ್ಲೆಯ ಗುರುಸಣಗಿ ಸಮೀಪದ ಭೀಮಾ ನದಿಯ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಡಗೇರಾ ಪೊಲೀಸ್ ಠಾಣೆಯಲ್ಲಿ...

ಯಾದಗಿರಿ | ಜೀವ ಬೆದರಿಕೆ ಹಾಕಿ ಮಹಿಳೆ ಮೇಲೆ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು

ಜೀವ ಬೆದರಿಕೆ ಹಾಕಿ ಮಹಿಳೆಯನ್ನು ಬೈಕ್‌ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ವೆಂಕಟೇಶ ನಗರ ತಾಂಡಾ ನಿವಾಸಿ ಶಂಕರ್ ರಾಠೋಡ್ (27) ವಿರುದ್ಧ...

ಕಲಬುರಗಿ | ನಿಯಂತ್ರಣ ತಪ್ಪಿದ ಬೈಕ್ ಕಲ್ಲಿಗೆ ಡಿಕ್ಕಿ; ಮೂವರು ಯುವಕರ ದಾರುಣ ಸಾವು

ವೇಗವಾಗಿ ಚಲಿಸುತ್ತಿದ್ದ ಬೈಕ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ಪಾಣೇಗಾಂವ ಸಮೀಪ ಭಾನುವಾರ ತಡರಾತ್ರಿ...

ಬಾಗಲಕೋಟೆ | ಲಿಂಗಾಯತ ಸ್ವತಂತ್ರ ಧರ್ಮ: ಸಾಂವಿಧಾನಿಕ ಮಾನ್ಯತೆಗೆ ಸಂಘಟಿತ ಹೋರಾಟದ ಕರೆ

ಲಿಂಗಾಯತ ಮಠಾಧೀಶರ ಒಕ್ಕೂಟದ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಿ, ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕುವಂತೆ ಸಂಘಟಿತ ಹೋರಾಟ ನಡೆಸಬೇಕು ಎಂದು ಮನಗೂಳಿ ವಿರಕ್ತಮಠದ ವೀರಾಧೀಶನಂದ ಸ್ವಾಮೀಜಿ ಹೇಳಿದರು. ಬಾಗಲಕೋಟೆ ಜಿಲ್ಲೆಯ...

ಪಾವಗಡ | ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ: ಚಾಲಕ ಗಂಭೀರ

 ಪಾವಗಡದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಬ್ಲೇಡ್ ಮುರಿದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯ ಹುಣಸೆ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಬೆಳ್ಳಿಬಟ್ಲು–ಶೈಲಾಪುರ ಗ್ರಾಮಗಳ ಮಧ್ಯೆ ಸಂಭವಿಸಿದೆ. ಚಳ್ಳಕೆರೆ ಡಿಪೋದ...

ಈ ಹೊತ್ತಿನ ಪ್ರಮುಖ ಸುದ್ದಿ