ಜಿಲ್ಲೆಗಳು

ವಿಜಯಪುರ | ಕನ್ನಡದ ಅಸ್ಮಿತೆ, ಸಂಸ್ಕೃತಿ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ: ಪ್ರೊ. ವಿಜಯಾ ಕೋರಿಶೆಟ್ಟಿ

ಕನ್ನಡ ಭಾಷೆ, ನಾಡು ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು. ವಿಜಯಪುರ ನಗರದ ಅಕ್ಕ...

ದೊಡ್ಡಬಳ್ಳಾಪುರ |ಧರ್ಮಸ್ಥಳದ ಶ್ರೀಮುಡಿ ಭವನದದಲ್ಲಿ ದಲಿತ ಮುಖಂಡ ಗುರುರಾಜಪ್ಪ ರವರ ಶವ ಪತ್ತೆ !

ದಲಿತರ ಮುಖಂಡ, ಛಲವಾದಿ ಮಹಾಸಭಾ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷರಾದ ಸಿ.ಗುರುರಾಜಪ್ಪ ಅವರು ಅಕಾಲಿಕ ಮರಣ ಹೊಂದಿದ್ದಾರೆ. ಧರ್ಮಸ್ಥಳದ ಶ್ರೀಮುಡಿ ಭವನದ ವರಾಂಡದಲ್ಲಿ 55 ವರ್ಷದ ಅಪರಿಚಿತ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿ ಬೆಂಗಳೂರು...

ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಎಂಇಎಸ್‌ನಿಂದ ಕರಾಳ ದಿನಾಚರಣೆ

ಇಡೀ ಕರ್ನಾಟಕ ಸಡಗರದಿಂದ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ನಿಷೇಧ ಹಾಗೂ ಅನುಮತಿ ನಿರಾಕರಣೆಯ ನಡುವೆಯೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)...

ಕಲಬುರಗಿ | ಅಂತರರಾಷ್ಟ್ರೀಯ ಬೌದ್ಧ ಧಮ್ಮ ದೀಕ್ಷಾ ಯಾತ್ರೆಗೆ ತೆರೆ; ಸನ್ನತಿಯಲ್ಲಿ ಸಾವಿರಾರು ಜನರಿಂದ ಬೌದ್ಧ ದೀಕ್ಷೆ ಸ್ವೀಕಾರ!

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ, ಬೌದ್ಧ ಧಮ್ಮದ ಪ್ರಸಾರ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 5ರಂದು ಕಲಬುರಗಿಯಿಂದ ಆರಂಭಗೊಂಡ ಅಂತರರಾಷ್ಟ್ರೀಯ ಬೌದ್ಧ ಧಮ್ಮ ದೀಕ್ಷಾ ಹಾಗೂ ಕರ್ನಾಟಕ ರಾಜ್ಯ...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ

ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನಗೊಳಿಸಿ, ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರು ತಲುಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು. ಚಿತ್ರದುರ್ಗ ನಗರದ...

ತುಮಕೂರು | ಕನ್ನಡ ಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಕೃಷ್ಣಬೈರೇಗೌಡ

ಕನ್ನಡ ರಾಜ್ಯೋತ್ಸವದ ಸಂಭ್ರಮ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಅಭಿಪ್ರಾಯಪಟ್ಟರು. ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ...

ಉಡುಪಿ ರಾಜ್ಯದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆ: ಸಚಿವ ರಿಝ್ವಾನ್ ಅರ್ಷದ್ ಘೋಷಣೆ

ಕಡಲು ನಮ್ಮ ನಿಜವಾದ ಮತ್ತು ಅತಿದೊಡ್ಡ ಸಂಪತ್ತು. ಇದರ ಸದ್ಬಳಕೆಗಾಗಿ ಕರ್ನಾಟಕ ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಸರಕಾರ ಅನುಮೋದನೆ ನೀಡಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ...

ಉಡುಪಿ | ಸಹಕಾರ ಸಂಘಗಳು ಬಡವರು, ಮಧ್ಯಮ ವರ್ಗದವರಿಗೆ ಆರ್ಥಿಕ ಆಸರೆ : ಸಚಿವ ರಿಝ್ವಾನ್ ಅರ್ಷದ್

ಸಹಕಾರ ವ್ಯವಸ್ಥೆ ಜನರ ಸಮಸ್ಯೆಗಳನ್ನು ಅರಿತು, ಪರಸ್ಪರ ನೆರವಿನ ಮೂಲಕ ಸಮಾಜದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡುವ ಮಹತ್ವದ ವ್ಯವಸ್ಥೆಯಾಗಿದೆ. ಸಹಕಾರ ಸಂಘಗಳು ಇಲ್ಲದಿದ್ದರೆ ಬಡವರು, ಮಧ್ಯಮ ವರ್ಗದವರು, ರೈತರು ಹಾಗೂ ಸಣ್ಣ...

ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್‌ಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಸಮಾಜ ಸೇವೆ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಜನಪರ ಕ್ಷೇತ್ರಗಳಲ್ಲಿ ನಿರಂತರವಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ (ರಿ), ಮಂಗಳೂರು (BSWT) ಸಂಸ್ಥೆಯು 2026ನೇ ಸಾಲಿನ ದಕ್ಷಿಣ...

ಗದಗ | ಕೋಮುವಾದಿ ಹೆಸರಲ್ಲಿ ಮಹಿಳೆಯರ ಮೇಲೆ ಶೋಷಣೆ: ಕಾಮ್ರೇಡ್ ದೇವಿ ಕಿಡಿ

"ಕೋಮುವಾದ ಹೆಸರಿನಲ್ಲಿ ಮಹಿಳೆಯರ ಮೇಲೆ ಶೋಷಣೆ ಮತ್ತು ಲಿಂಗ ತಾರತಮ್ಯ ನಡೆಯುತ್ತಿದ್ದು, ಇದರ ವಿರುದ್ದ ಜಾಗೃತಿ ಅಭಿಯಾನ ನಡೆಸಿ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆ ಕಲ್ಪಿಸಬೇಕು" ಎಂದು ಜನವಾದಿ ಮಹಿಳಾ...

ರಾಯಚೂರು | ಸಾಮರಸ್ಯ, ಸಹಬಾಳ್ವೆಯೇ ನಾಡಿನ ಸಂಸ್ಕೃತಿಯ ಜೀವಾಳ: ಸಚಿವ ಡಾ. ಅಜಯ್ ಸಿಂಗ್

ಸಾಮರಸ್ಯವೇ ನಾಡಿನ ಸಂಸ್ಕೃತಿಯ ಜೀವಾಳವಾಗಿದೆ. ಸರ್ವಧರ್ಮ ರಕ್ಷಣೆ, ಸತ್ಯಾರಾಧನೆ, ಧರ್ಮನೀತಿ ಹಾಗೂ ಸರ್ವಧರ್ಮ ಸಹಿಷ್ಣುತೆಯ ಮೂಲಕ ಸಹಬಾಳ್ವೆ, ಸೌಹಾರ್ದತೆ ಮತ್ತು ಭಾವೈಕ್ಯತೆಯನ್ನು ಎತ್ತಿಹಿಡಿದು ನಾಡು-ನುಡಿಯ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ...

ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಬದುಕಿನೊಂದಿಗೆ ಬೆರೆತಿರುವ ಭಾಷೆಯನ್ನು ಜೀವನದುದ್ದಕ್ಕೂ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಪ್ರಕಾಶ್ ಶೆಟ್ಟಿ...

ಈ ಹೊತ್ತಿನ ಪ್ರಮುಖ ಸುದ್ದಿ