ರಾಯಚೂರು 

ರಾಯಚೂರು | ಜೈನ ದಿಗಂಬರ ಮುನಿಗಳಿಗೆ ಸರ್ಕಾರ ಭದ್ರತೆ ನೀಡುವಂತೆ ಆಗ್ರಹ

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಖಂಡಿಸಿ ರಾಯಚೂರು ಸಕಲ ಜೈನ ಸಮಾಜದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. "ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ...

ರಾಯಚೂರು | ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ಕಂಡು ಬಂದಲ್ಲಿ ಅಧಿಕಾರಿಗಳ ಅಮಾನತು; ಡಿಸಿ ಎಚ್ಚರಿಕೆ

ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ಕಂಡು ಬಂದಲ್ಲಿ ಮೇಲ್ವಿಚಾರಕರು ಸೇರಿದಂತೆ ನಿಯೋಜಿಸಿದ ಅಧಿಕಾರಿಗಳನ್ನೂ ಅಮಾನತು ಮಾಡಲಾಗುವುದು ಎಂದು ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಗರಸಭೆಯ ಘನತ್ಯಾಜ್ಯ ಸಂಗ್ರಹ ವಿಲೇವಾರಿ...

ರಾಯಚೂರು | ಬರಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಹಾಗೂ ರಾಯಚೂರು ಭಾಗವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಜಿಲ್ಲಾ ಸಮಿತಿ ಕಾರ್ಯಕರ್ತರು ಜಿಲ್ಲಾ...

ರಾಯಚೂರು | ಬಡವರಿಗೆ ಭೂಮಿ ಮಂಜೂರಾತಿ ಗ್ಯಾರಂಟಿ ನೀಡಲಿ: ಮಾರೆಪ್ಪ ಹರವಿ

ರಾಜ್ಯದ ಹಲವೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜುರಾತಿ ನೀಡುವ ಮೂಲಕ ಬದುಕಿನ ಗ್ಯಾರಂಟಿ ನೀಡಬೇಕು ಎಂದು ಭೂಮಿ ವಸತಿ ಹೋರಾಟ ಸಮಿತಿಯ ರಾಜ್ಯ ಸದಸ್ಯ ಮಾರೆಪ್ಪ ಹರವಿ ಒತ್ತಾಯಿಸಿದರು. ರಾಯಚೂರು ನಗರದಲ್ಲಿ ನಡೆದ...

ರಾಯಚೂರು | ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ್ದ ಮೊಬೈಲ್ ಹಿಂಪಡೆಯಲು ಒತ್ತಾಯ

ದೇಶದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ನಿಗದಿ ಮಾಡಿ, ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಯಚೂರಿನಲ್ಲಿ...

ರಾಯಚೂರು | ಒಳ ಮೀಸಲಾತಿ ಜಾರಿಗೆ ನೀಡಿರುವ ಸಮ್ಮತಿ ರದ್ದತಿ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಸುಪ್ರಿಂಕೋರ್ಟಿನ ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐದು ಮಂದಿ ನ್ಯಾಯಮೂರ್ತಿಗಳ ಪೀಠವು ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಸಮ್ಮತಿಸಿದೆ. ಪೀಠದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸುಪ್ರಿಂಕೋರ್ಟಿಗೆ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಲಾಗಿದೆ...

ರಾಯಚೂರು | ಬಜೆಟ್‌ನಲ್ಲಿ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳಕ್ಕೆ ಒತ್ತಾಯ

ಪ್ರಸ್ತುತ ರಾಜ್ಯ ಬಜೆಟ್‌ನಲ್ಲಿ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ...

ರಾಯಚೂರು | ಮುಖ್ಯ ಶಿಕ್ಷಕನ ಅಮಾನತಿಗೆ ಎಸ್‌ಎಫ್‌ಐ ಆಗ್ರಹ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಾಗಲವಾಡ ಕ್ಲಸ್ಟರ್ ವ್ಯಾಪ್ತಿಯ ನಡುಗಡ್ಡೆ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶಿವರಾಜ್ ಎಂಬಾತನನ್ನು ಅಮಾನತು ಮಾಡುವಂತೆ ಎಸ್ಎಫ್ಐ ಜಿಲ್ಲಾ ಸಮಿತಿ ಮುಖಂಡರು...

ರಾಯಚೂರು | ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡಲು ಒತ್ತಾಯ

ರಾಜ್ಯ ಸರ್ಕಾರ ಒಳಮೀಸಲಾತಿ ಕುರಿತಾಗಿ ಪರಿಶಿಷ್ಟ ಜಾತಿಗಳಿಗೆ ಶೇ.17ರಷ್ಟು ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಮೀಸಲಾತಿ ನಿಗದಿಪಡಿಸಿ ಕೇಂದ್ರಕ್ಕೆ ಪರಿಷ್ಕೃತ ಶಿಫಾರಸು ರವಾನಿಸಬೇಕು ಎಂದು ಸಮಾಜಿಕ ನ್ಯಾಯಕ್ಕಾಗಿ ಎಸ್‌ಸಿ ಒಳಮೀಸಲಾತಿ ಹೋರಾಟ ಸಮಿತಿ...

ರಾಯಚೂರು | ಕೃಷಿ ಕ್ಷೇತ್ರಕ್ಕೆ ಪ್ರತ್ಯೇಕ ಬಜೆಟ್‌ ಮಂಡನೆಗೆ ಒತ್ತಾಯ

ಕೃಷಿ ಕ್ಷೇತ್ರಕ್ಕೆ ಪ್ರತ್ಯೇಕವಾಗಿ ಒಂದು ಲಕ್ಷ ಕೋಟಿ ರೂಪಾಯಿಯ ಬಜೆಟ್ ಮಂಡನೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿಗೆ...

ರಾಯಚೂರು | ಅರಣ್ಯ ಭೂಮಿ, ಗೈರಾಣ ಭೂಮಿ ಸಾಗುವಳಿದಾರರಿಗೆ ಪಟ್ಟಾ ನೀಡುವಂತೆ ಒತ್ತಾಯ

ಅರಣ್ಯ ಭೂಮಿ ಮತ್ತು ಗೈರಾಣ ಭೂಮಿ ಸಾಗುವಳಿದಾರರಿಗೆ ಪಟ್ಟಾ ಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ....

ರಾಯಚೂರು | ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪ್ರಕರಣ; ಶಾಲಾ ಮುಖ್ಯ ಶಿಕ್ಷಕ ಅಮಾನತು

ರಾಯಚೂರು ತಾಲೂಕಿನ ಅಪ್ಪನದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದಲ್ಲಿ ಹಲ್ಲಿ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕ ಕನಕಪ್ಪ ಹಾಗೂ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X