ರಾಯಚೂರು 

ರಾಯಚೂರು | ಪ್ರಯಾಗರಾಜ್‌ನ ಕುಂಭಮೇಳದಲ್ಲಿ ಸೂಕ್ತ ವ್ಯವಸ್ಥೆಯಿಲ್ಲದೆ ಹಲವು ಮಂದಿ ಸಾವು: ಎನ್ ಎಸ್ ಬೋಸರಾಜ್

ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಕುಂಭಮೇಳದ ಬಗ್ಗೆ ಉತ್ತರ ಪ್ರದೇಶ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆದಿದ್ದು, ಈಗ ಅಲ್ಲಿ ಸೂಕ್ತ ವ್ಯವಸ್ಥೆವಿಲ್ಲದೆ ಹಲವು ಮಂದಿ ಸಾವನ್ನಪ್ಪಿದ್ದಾರೆ. ಇದರ ಬಗ್ಗೆ ಪ್ರಶ್ನೆ...

ರಾಯಚೂರು | ಎಸ್‌ಟಿ ನಕಲಿ ಪ್ರಮಾಣಪತ್ರ ತಡೆಗೆ ಆಯೋಗ ರಚಿಸಿ; ವಾಲ್ಮೀಕಿ ನಾಯಕ ಸಂಘ ಆಗ್ರಹ

ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಮತ್ತು ಪರಿವಾರ ಎಸ್‌ಟಿ ಸಮುದಾಯದ ನಕಲಿ ಪ್ರಮಾಣ ಪತ್ರ ಹಾವಳಿ ತಡೆಯುವುದಕ್ಕೆ ಆಯೋಗ ರಚನೆ ಮಾಡಬೇಕು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ...

ರಾಯಚೂರು | ʼಮಾದಕ ವ್ಯಸನದಿಂದ ಯುವಕರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಬೇಕುʼ

ಪ್ರಸ್ತುತ ದಿನಮಾನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಯುವ ಸಮೂಹ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದನ್ನು ತಡೆಗಟ್ಟಲು ಇಲಾಖೆಗಳು ಮುಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಬಸವರಾಜ್ ಬಾದರ್ಲಿ ಹೇಳಿದರು.ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, "ಇತ್ತೀಚೆಗೆ...

ರಾಯಚೂರು | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ: ಸಚಿವ ಬೋಸರಾಜು

ನಗರದಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಬೋಸರಾಜು ಹೇಳಿದರು. ರಾಂಪೂರು ಬಳಿ 10 ಎಕರೆ ವ್ಯಾಪ್ತಿಯಲ್ಲಿರುವ...

ರಾಯಚೂರು | ಹಂಚಿಕೆಯಾಗಿರುವ ನಿವೇಶನಗಳಿಗೆ ಭೂಮಿ ಮಂಜೂರು ಮಾಡಲು ಡಿಸಿಗೆ ಮನವಿ

ನಿವೇಶನ ಹಂಚಿಕೆಯಾಗಿ ವರ್ಷಗಳೇ ಗತಿಸಿದರೂ ಮಂಜೂರಾದ ಭೂಮಿಯನ್ನು ಅಭಿವೃದ್ಧಿ ಮಾಡಿ ಹಂಚಿಕೆ ಮಾಡುವುದಕ್ಕೆ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಆರೋಪಿಸಿ ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ...

ರಾಯಚೂರು | ಕ್ರೀಡೆಗಳಿಂದ ಮಾನಸಿಕ ನೆಮ್ಮದಿ ಸಿಗಲಿದೆ: ಡಿಸಿ ನಿತೀಶ್

ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ಪಡೆಯಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಕೆ. ನಿತೀಶ್‌ ಅಭಿಪ್ರಾಯಪಟ್ಟರು. ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ರಾಯಚೂರು | ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

ರಾಯಚೂರು ಜಿಲ್ಲೆ ಲಿಂಗಸೂಗೂರು ರಸ್ತೆಯ ಬೀದಿಬದಿ ಸಣ್ಣ-ಪುಟ್ಟ ವ್ಯಾಪಾರಸ್ಥರನ್ನು ತೆರವುಗೊಳಿಸಲಾಗಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ನಿರ್ದೇಶನದ ಮೇರೆಗೆ ಪುನರ್ ವ್ಯಾಪಾರ ಮಾಡಲು ಸ್ಥಳಾವಕಾಶ ಮಾಡಿಕೊಡುವಂತೆ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದಿಂದ...

ರಾಯಚೂರು | ಅಪಘಾತಗಳ ಕುರಿತು ಜನ ಜಾಗೃತರಾಗುವುದು ಅಗತ್ಯ: ನ್ಯಾ. ಸಿದ್ರಾಮಪ್ಪ

ಅಪಘಾತಗಳ ಬಗ್ಗೆ ಎಷ್ಟೇ ಅರಿವು ಮೂಡಿಸುವ ಕಾರ್ಯಕ್ರಮಗಳಾಗುತ್ತಿದ್ದರೂ ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇವಲ ನಿಯಮಗಳು ಜಾರಿಯಾಗುವುದಕ್ಕಿಂತ ಅದರ ಜತೆಗೆ ಜನರೂ ಜಾಗೃತರಾಗಿರುವುದು ಅತಿಮುಖ್ಯ ಎಂದು ನ್ಯಾಯಾಧೀಶ ಸಿದ್ರಾಮಪ್ಪ ಕಲ್ಯಾಣರಾವ್...

ರಾಯಚೂರು | ದಲಿತ ಮನೆ ಮಾಲಿಕರ ಹೆಸರೇ ಖಾತೆಯಲ್ಲಿ ನಮೂದಿಲ್ಲ; ಕಣ್ಮುಚ್ಚಿ ಕುಳಿತ ನಗರಸಭೆ

ರಾಯಚೂರು ನಗರದ ಹರಿಜನವಾಡದಲ್ಲಿ (ದಲಿತ ಕೇರಿ) ವಾಸ ಮಾಡುತ್ತಿರುವ ಜನರ ಮನೆ ಮಾಲೀಕರ ಹೆಸರುಗಳು ನಗರಪಾಲಿಕೆ ಡಿಮ್ಯಾಂಡ್ ಖಾತೆಯಲ್ಲಿ ನಮೂದಿಸದೇ ಇರುವುದರಿಂದ ನಿವಾಸಿಗಳು ಸೌಲಭ್ಯಗಳಿಂದ ವಂಚಿತವಾಗುವಂತಾಗಿದೆ. ಇದು ನಗರಸಭೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು...

ರಾಯಚೂರು | ಕರ್ತವ್ಯ ಲೋಪ ಆರೋಪ; ಪಿಡಿಒ ಅಮಾನತಿಗೆ ಗ್ರಾಮಸ್ಥರ ಒತ್ತಾಯ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಹೇಮನಾಳ ಗ್ರಾಮ ಪಂಚಾಯತ್ ಪಿಡಿಓ ಪಂಚಾಯತಿಗೆ ಬಾರದೆ, ಸಾರ್ವಜನಿಕರಿಗೆ ಸಿಗದೇ ಕಾಲಹರಣ ಮಾಡುತ್ತಾ ಕರ್ತವ್ಯ ಲೋಪ ಎಸಗುತ್ತಿದ್ದಾರೆ. ಕೂಡಲೇ ಇವರನ್ನು ಅಮಾನತು ಮಾಡಿ ಇಲ್ಲವೇ ವರ್ಗಾವಣೆ ಮಾಡಿ...

ರಾಯಚೂರು | ಕುಡಿಯುವ ನೀರಿಗೆ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಹಲವು ಬಾರಿ ಹೋರಾಟ ನಡೆಸಿದರೂ ಪಂಚಾಯತಿ ಅಧಿಕಾರಿಗಳು ತಮಗೆ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರಾಯಚೂರಿನ ದೇವದುರ್ಗ ತಾಲೂಕು ಚಿಂಚೋಡಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ...

ರಾಯಚೂರು | ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಶಿಕ್ಷಕರಿಂದ ಮಾತ್ರ ಸಾಧ್ಯ: ಡಿಸಿ ನಿತೀಶ್

ಶೈಕ್ಷಣಿಕ ಗುಣಮಟ್ಟದಲ್ಲಿ ಸುಧಾರಣೆ ತರುವುದು ಶಾಲಾ ಹಂತದಲ್ಲಿ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್‌ ಕೆ. ಅಭಿಪ್ರಾಯಪಟ್ಟರು. ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತಾಲಯ, ಶಾಲಾ ಶಿಕ್ಷಣ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X