ರಾಯಚೂರು

ರಾಯಚೂರು | ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಪ್ರತಿಭಟನೆ

ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದು, ಸಮಾನ ಕೆಲಸಕ್ಕೆ ಸಮಾನವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯುನಿಯನ್‌ ಸೆಂಟರ್‌ (ಎಐಯುಟಿಯುಸಿ) ರಾಯಚೂರು ಜಿಲ್ಲಾ ಘಟಕವು ನಗರದ ಅಂಬೇಡ್ಕರ ವೃತ್ತದಲ್ಲಿ...

ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು; ಪ್ರಕರಣ ದಾಖಲು

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಪತ್ನಿ ವ್ಯೆದ್ಯರ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾನ್ವಿ ತಾಲೂಕಿನ...

ರಾಯಚೂರು | ಪೌಷ್ಟಿಕಯುಕ್ತ ಆಹಾರ ಸೇವನೆಯೇ ಅನೀಮಿಯಾಗೆ ರಾಮಬಾಣ: ಸಿಇಒ ರಾಹುಲ್ ತುಕರಾಂ

ಮನುಷ್ಯನ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆಯಾದಾಗ ರಕ್ತಹೀನತೆ ಉಂಟಾಗುತ್ತದೆ.‌ ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಪೌಷ್ಠಿಕಾಂಶಯುಕ್ತ ಆಹಾರ ಸೇವನೆಯೊಂದೇ ಅನೀಮಿಯಾ (ರಕ್ತಹೀನತೆ) ಸಮಸ್ಯೆಗೆ ರಾಮಬಾಣ ಎಂದು ರಾಯಚೂರು ಜಿಲ್ಲಾ ಪಂಚಾಯತ್...

ರಾಯಚೂರು | ಪರಿಸರ ಹಾನಿಯಾಗದಂತೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ: ಡಿಸಿ ನಿತೀಶ್

ರಾಯಚೂರಿನಲ್ಲಿ ಸುಮಾರು 322.3 ಎಕರೆಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ವಿಮಾನ ನಿಲ್ದಾಣದ ನಿರ್ಮಾಣದ ಹಂತದಲ್ಲಿ ಯಾವುದೇ ರೀತಿಯ ಪರಿಸರ ಹಾನಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ತಿಳಿಸಿದರು. ನಗರದ ಯರಮರಸ್ ಸರ್ಕ್ಯೂಟ್...

ರಾಯಚೂರು | ಜಗತ್ತೇ ಇಂಟರ್‌ನೆಟ್ ಜಾಲದಲ್ಲಿ ತೇಲುತ್ತಿದೆ, ಎಚ್ಚರಿಕೆಯಿಂದ ಬಳಸಿ:ಇಂಟರ್‌ನೆಟ್

ಜಗತ್ತು ಇಂಟರ್‌ನೆಟ್‌ ಎಂಬ ಜಾಲದಲ್ಲಿ ಮುಳುಗಿದ್ದು, ಪ್ರಸ್ತುತ ವಿವಿಧ ರೀತಿಯಲ್ಲಿ ವಂಚಿಸುವ ಈ ಜಾಲತಾಣವು ಸಮಾಜವನ್ನು ಕಾಡುತ್ತಿದೆ. ಆದ್ದರಿಂದ ಇಂಟರ್‌ನೆಟ್‌ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ರಾಯಚೂರಿನ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು...

ರಾಯಚೂರು | ಮಹಾ ಕುಂಭಮೇಳಕ್ಕೆ ತೆರಳಿದ್ದ ವಾಹನ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ರಾಯಚೂರು ನಗರದ ಗಾಜಗಾರಪೇಟೆ ನಿವಾಸಿಗಳು ಕುಂಭಮೇಳದ ದರ್ಶನ ಪಡೆದು ಹಿಂದಿರುಗುವಾಗ ವಾಹನ ಅಪಘಾತಕ್ಕೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಾಗಪುರ್ ಬಳಿ ನಡೆದಿದೆ. ಗಾಜಗಾರಪೇಟೆ...

ರಾಯಚೂರು | ಕುಡಿಯುವ ನೀರಿಗೆ ಪರದಾಟ; ಸಮಸ್ಯೆ ಪರಿಹಾರಕ್ಕೆ ರೈತ ಸಂಘ ಒತ್ತಾಯ

ರಾಯಚೂರು ತಾಲೂಕಿನ ಮಮದಾಪೂರು ಗ್ರಾಮದ ಜನ ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಜನರ ಬಳಕೆಗೆ ಹಾಗೂ ದನಕರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ...

ರಾಯಚೂರು | ಭೂಹೀನರಿಗೆ ಪಟ್ಟಾ ನೀಡಲು ಭೂಮಿ ವಸತಿ ಹಕ್ಕು ವಂಚಿತರ ಸಂಘಟನೆ ಆಗ್ರಹ

ಗೋಮಾಳ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸಿರುವ ಲಕ್ಷಾಂತರ ಭೂಹೀನರ ಅರ್ಜಿಗಳು ತಿರಸ್ಕರಿಸಲಾಗಿದೆ. ತಕ್ಷಣ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಪಟ್ಟಾ ನೀಡಬೇಕೆಂದು ಭೂಮಿ ವಸತಿ ಹಕ್ಕು ವಂಚಿತರ ಸಂಘಟನೆ ವತಿಯಿಂದ ಪ್ರತಿಭಟನೆ...

ರಾಯಚೂರು | ಏಮ್ಸ್ ಮಂಜೂರಾತಿಗೆ ಕೇಂದ್ರ ಸರ್ಕಾರ ಮೌನ: ರವಿ ಬೋಸರಾಜ್

ಏಮ್ಸ್ ಮಂಜೂರಾತಿಗಾಗಿ ನಡೆಸುತ್ತಿರುವ ಹೋರಾಟ ಸಾವಿರ ದಿನ ಪೂರೈಸಿದ್ದು, ಕೇಂದ್ರ ಸರಕಾರಕ್ಕೆ ಮನವಿ ಮಾಡಿದರೂ ಉದ್ದೇಶ ಪೂರ್ವಕವಾಗಿ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರವಿ ಬೋಸರಾಜ್ ಆರೋಪಿಸಿದರು. ರಾಯಚೂರು ನಗರದಲ್ಲಿ...

ರಾಯಚೂರು | ಕಪ್ಪು ಪಟ್ಟಿ ಧರಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಗ್ರಾಮ ಆಡಳಿತ ಕಚೇರಿಗಳಿಗೆ ಮೂಲ ಸೌಲಭ್ಯ ಒದಗಿಸಬೇಕು, ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ...

ರಾಯಚೂರು | ಫೆ.13 ರಂದು ಜಿಲ್ಲಾ ರೈತ ಸಮಾವೇಶ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ 89ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ಫೆಬ್ರವರಿ 13 ರಂದು ಜಿಲ್ಲಾ ರೈತ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ...

ರಾಯಚೂರು | ನೈಸರ್ಗಿಕ ಸಂಪತ್ತು ರಕ್ಷಿಸುವಲ್ಲಿ ಕೂಲಿ ಕಾರ್ಮಿಕರ ಪಾತ್ರ ಅಪಾರ: ಚಂದ್ರಶೇಖರ್ ಪವಾರ

ಮನರೇಗಾ ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಗ್ರಾಮೀಣ ಪ್ರದೇಶದ ನೈಸರ್ಗಿಕ ಸಂಪತ್ತು ರಕ್ಷಿಸುವಲ್ಲಿ ಅಪಾರ ಶ್ರಮವಹಿಸುತ್ತಾರೆ. ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಗೆ ಮುಂದಾಗಬೇಕು ಎಂದು ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X