ಉಡುಪಿ

ಉಡುಪಿ | ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ನೀಡಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು...

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ (ಬಿಪಿಎಲ್) ಮತ್ತು ಅಂತ್ಯೋದಯ (ಎಎವೈ) ಪಡಿತರ ಚೀಟಿಗಳ ಅರ್ಹ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಸರ್ಕಾರ ಅಕ್ಟೋಬರ್ 20ರವರೆಗೆ ಕಾಲಾವಕಾಶ ವಿಸ್ತರಿಸಿದೆ. ಈ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಬ್ರಹ್ಮಾವರ ತಾಲೂಕು ಹೋರಾಟ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರ ಬೆಂಬಲ ಕ್ರೋಡೀಕರಿಸಲು ಅಕ್ಟೋಬರ್ 17ರಂದು...

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ. ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ ಕಡಿಮೆ ಇಲ್ಲದಂತೆ ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸಬೇಕು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್‌ನ...

ಉಡುಪಿ | 11 ವರ್ಷವಾದರೂ ಪೂರ್ಣಗೊಳ್ಳದ ಕುಂದಾಪುರ ಯುಜಿಡಿ ಕಾಮಗಾರಿ: ಸಚಿವ ಬಾಲಕೃಷ್ಣ ಅಸಮಾಧಾನ

ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ₹56.54 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಒಳಚರಂಡಿ (ಯುಜಿಡಿ) ಕಾಮಗಾರಿ 11 ವರ್ಷ ಕಳೆದರೂ ಪೂರ್ಣಗೊಳ್ಳದಿರುವುದಕ್ಕೆ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ...

ಅ.15ರಂದು ದ.ಕ., ಉಡುಪಿ ಜಿಲ್ಲೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅ.15ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯಲಿರುವ ದಸರಾ...

ಮಂಗಳೂರು | SIR ರದ್ದತಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮನವಿ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಜನವರಿ 2025ರ ಮತದಾರರ ಪಟ್ಟಿಗಳನ್ನು ಮರುಸ್ಥಾಪಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕ್ರಮ ಕೈಗೊಳ್ಳಬೇಕು...

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ ಹಕ್ಕುಪತ್ರವನ್ನು ತಕ್ಷಣ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಕೊರಗ ಸಮುದಾಯದ ಫಲಾನುಭವಿಗಳು ಸೋಮವಾರ ವಾಮಂಜೂರು...

ಉಡುಪಿ | ಮೂಲ ನಿವಾಸಿಗಳ ಮತದಾನದ ಹಕ್ಕು ಕಿತ್ತುಕೊಳ್ಳುವ ಸಂಚು: ಜ್ಞಾನಪ್ರಕಾಶ ಸ್ವಾಮೀಜಿ ಆರೋಪ

ಮೂಲನಿವಾಸಿಗಳ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯ ಅರಿವು ಮೂಡಿಸಿಕೊಂಡು ಜಾಗೃತರಾದಾಗ ಮಾತ್ರ ಸಮಾಜದಲ್ಲಿ ಅಧಿಕಾರ ಮತ್ತು ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಇತಿಹಾಸದ ಅರಿವಿಲ್ಲದ ಸಮುದಾಯಗಳು ತಮ್ಮ ಹಕ್ಕುಗಳಿಂದ ವಂಚಿತರಾಗುವ ಅಪಾಯವಿದೆ ಎಂದು ಮೈಸೂರಿನ...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು ನಡೆದು ಬಹಳ ಸಮಯ ಕಳೆದಿದ್ದರೂ ಚುನಾವಣೆಗಳು ಇನ್ನೂ ನಡೆಯದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ಪ್ರಕಟವಾಗಿರುವ ಪಂಚಾಯತ್‌ ಕ್ಷೇತ್ರಗಳ...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ವೇಳೆ ವಶಕ್ಕೆ ಪಡೆದಿರುವ ಪ್ರತಿಭಟನಾಕಾರರನ್ನು ಕೂಡಲೇ ಬಿಡುಗಡೆ ಗೊಳಿಸುವಂತೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ