ಉಡುಪಿ

ಉಡುಪಿ | ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ; ಶಕ್ತಿ ಯೋಜನೆ ನಿಲ್ಲಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ...

ಉಡುಪಿ | ಕೊಂಕಣಿ ಜಾನಪದ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು: ವಂ. ಡೆನಿಸ್ ಡೇಸಾ

ನಮ್ಮಲ್ಲಿರುವ ಕೊಂಕಣಿ ಸಂಪ್ರದಾಯ ಜಾನಪದೀಯ ಸಂಸ್ಕೃತಿಗಳು ವಿಶಿಷ್ಠ ಮತ್ತು ವೈವಿಧ್ಯಮಯವಾಗಿದ್ದು, ಅದನ್ನು ಉಳಿಸಿ ಪೋಷಿಸುವ ಅಗತ್ಯವಿದೆ ಎಂದು ಉಡುಪಿಯ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ವಂ. ಡೆನಿಸ್ ಡೇಸಾ ಹೇಳಿದರು. ಅವರು ಗುರುವಾರ...

ಉಡುಪಿ | ಅಸಹಾಯಕ ಸ್ಥಿಯಲ್ಲಿದ್ದ ಯುವಕನ‌ ರಕ್ಷಣೆ: ಪೊಲೀಸರಿಂದ ಸಂಬಂಧಿಕರ ಪತ್ತೆ ಕಾರ್ಯ ಯಶಸ್ವಿ

‌‌‌‌‌‌‌ಉಡುಪಿ ನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸನಿಹ‌‌ ಅಸಹಾಯಕ ಸ್ಥಿತಿಯಲ್ಲಿದ್ದ‌ ಅಪರಿಚಿತ ವ್ಯಕ್ತಿಯನ್ನು ರಕ್ಷಿಸಿ, ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಗೆ ದಾಖಲುಪಡಿಸಿರುವ‌ ಘಟನೆ ನಡೆದಿದೆ. ನಗರದ ರಸ್ತೆಗಳಲ್ಲಿ ಯುವಕನೊಬ್ಬ ಅನಾವಶ್ಯಕ ಅಲೆದಾಡುವುದನ್ನು ಗಮನಿಸಿದ,...

ಉಡುಪಿ | ನಗರಸಭೆ ಪೌರಾಯುಕ್ತ ರಾಯಪ್ಪಗೆ ಬೀಳ್ಕೊಡುಗೆ

ಉಡುಪಿ ನಗರಸಭಾ ಪೌರ ನೌಕರರ ಸಂಘದ ವತಿಯಿಂದ ನಿವೃತ್ತರಾಗುತ್ತಿರುವ ಪೌರಾಯುಕ್ತ ರಾಯಪ್ಪ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸನ್ಮಾನ ಸ್ವೀಕರಿಸಿದ ಪೌರಾಯುಕ್ತ ರಾಯಪ್ಪ ಮಾತನಾಡಿ, ಮೊದಲು ನಾವು ಸರಿಯಾಗಿರಬೇಕು. ಆಗ...

ಉಡುಪಿ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು...

ಉಡುಪಿ | ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್‌ನಿಂದ ಅನ್ಯಾಯ: ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ಉಡುಪಿ ನಗರದ ಮಲ್ಪೆಯಲ್ಲಿರುವ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕಿನಿಂದ ಅನ್ಯಾಯ ಆಗಿರುವ ಸಂತ್ರಸ್ತರು, ಸೋಮವಾರ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಯವರ ಕಚೇರಿಯ ತನಕ ಪಾದಯಾತ್ರೆ ಮಾಡಿದ ಸಂತ್ರಸ್ಥರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನಮಗೆ ನ್ಯಾಯ ಕೊಡಿಸಿ...

ಉಡುಪಿ | ಮೋರಿಗೆ ಬಿದ್ದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ ನಗರದ ಮಣಿಪಾಲದ ಈಶ್ವರ ನಗರದ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಪ್ರಯಾಣಿಕರು ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದ್ದು ಕಾರು...

ಉಡುಪಿ | ರಕ್ತದಾನದ ಮೂಲಕ ಜೀವ ಉಳಿಸುವುದು ಪವಿತ್ರ ಕಾರ್ಯ: ಡಾ. ಗಣನಾಥ ಎಕ್ಕಾರು

ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು ಉಳಿಸುವುದು ಪವಿತ್ರ ಕಾರ್ಯವಾಗಿದೆ ಎಂದು ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು. ಅವರು ಪೂರ್ಣಪ್ರಜ್ಞಾ ಕಾಲೇಜಿನ ರೆಡ್‌ಕ್ರಾಸ್, ರಾಷ್ಟೀಯ ಸೇವಾ ಯೋಜನೆ, ಎಸ್.ಸಿ.ಸಿ...

ಉಡುಪಿ | ಮಳೆಯಿಂದ ಹಾನಿ: ಪುನರ್‌ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲ ಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ತ್ವರಿತಗತಿಯಲ್ಲಿ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ. ಕೆ...

ಉಡುಪಿ | ಮುಗಿಯದ ಇಂದ್ರಾಳಿ ರೈಲ್ವೆ ಸೇತುವೆ ರಸ್ತೆ ಸಮಸ್ಯೆ; ಪ್ರತಿಭಟನೆಗೆ ಮುಂದಾದ ನಾಗರಿಕರು

ಉಡುಪಿ ನಗರದ ಹೃದಯಭಾಗದಲ್ಲಿರುವ ಮಲ್ಪೆ- ತೀರ್ಥಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 169ಎ ಚತುಷ್ಪಥ ಕಾಮಗಾರಿ ಕಳೆದ ಕೆಲವು ವರ್ಷಗಳಿಂದ ನಿಧಾನ ಗತಿಯಲ್ಲಿ ನಡೆಯುತ್ತಿದೆ. ಇಂದ್ರಾಳಿಯಲ್ಲಿರುವ ರೈಲ್ವೆ ಮೇಲ್ವೇತುವೆ ಕಾಮಗಾರಿ ವಿಳಂಬದಿಂದಾಗಿ ಮಣಿಪಾಲವನ್ನು ಸಂಪರ್ಕಿಸುವ...

ಉಡುಪಿ | ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ: ಇಬ್ಬರ ಬಂಧನ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷವುಣಿಸಿದ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಅಜೆಕಾರು ಮರ್ಣೆ ಗ್ರಾಮದ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು ಬಾಲಕೃಷ್ಣ(44) ಎಂದು...

ಉಡುಪಿ | ರೈಲು ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

ಉಡುಪಿ ಜಿಲ್ಲೆಯ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಿಲುಗಡೆ ಪಡೆದ ರೈಲಿನ ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕನೋರ್ವ ಜಿಲ್ಲಾಸ್ಪತ್ರೆಗೆ ಸಾಗಿಸಿದ ಬಳಿಕ, ಸಾವನ್ನಪ್ಪಿರುವುದು ವೈದ್ಯರ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಘಟನೆಯು ಶುಕ್ರವಾರ ನಡೆದಿದ್ದು, ಮೃತದೇಹವನ್ನು ಅಜ್ಜರಕಾಡಿನ...

ಈ ಹೊತ್ತಿನ ಪ್ರಮುಖ ಸುದ್ದಿ