ಉತ್ತರ ಕನ್ನಡ

ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳನೀರು ಮಾರಾಟಗಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಕುಮಟಾದ ಬಯಲುಗದ್ದೆ ಮೂಲದ 55 ವರ್ಷದ ಉಮೇಶ್ ನಾರಾಯಣ್...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ ನಡೆದಿರುವ ಘಟನೆ ಭಟ್ಕಳದಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯ ಬಳಿಕ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದಿರುವ ಹಾಗೂ ತಾರ್ಕಿಕ ವ್ಯತ್ಯಾಸ ಹೊಂದಿರುವ ಮತದಾರರಿಗೆ ಒಟ್ಟು 65,248 ನೋಟಿಸ್‌ಗಳನ್ನು ನೀಡಲಾಗಿದ್ದು, ಈ ಪೈಕಿ 58,687...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ ಅಡಿಪಾಯ ಹಾಕಿದ್ದರು. ಅವರ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಚಿಂತನೆಗಳಿಂದ ಪ್ರೇರಣೆ ಪಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ...

ಕಾರವಾರ | ₹26 ಲಕ್ಷ ಪಾವತಿಸಿದರೂ ಬಡ್ಡಿ ಕಿರುಕುಳ: ಗುಂಡಿಕ್ಕುವುದಾಗಿ ಬೆದರಿಕೆ, ಮೂವರ ವಿರುದ್ಧ FIR

ಕಾರವಾರ: ಪಡೆದ ಸಾಲಕ್ಕಿಂತ ದುಪ್ಪಟ್ಟು ಹಣವನ್ನು ಮರುಪಾವತಿಸಿದರೂ ಇನ್ನೂ ಬಡ್ಡಿ ಹಣ ನೀಡುವಂತೆ ಒತ್ತಾಯಿಸಿ, ಸರ್ವಿಸ್ ರಿವಾಲ್ವರ್‌ನಿಂದ ಗುಂಡಿಕ್ಕುವುದಾಗಿ ಹಾಗೂ ಜೆಸಿಬಿ ಮೂಲಕ ಮನೆ ಕೆಡವಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರ...

ಗಣಪತಿ ವಿಸರ್ಜನೆಗೆ ಮೀಸಲಿಟ್ಟ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ: ಬೇರೆ ಕೆರೆ ಗುರುತಿಗೆ ಸ್ಥಳೀಯರ ಆಗ್ರಹ

ಉತ್ತರ ಕನ್ನಡ ಜಿಲ್ಲಾಡಳಿತದಿಂದ ಗಣಪತಿ ವಿಸರ್ಜನೆಗೆ ಮೀಸಲಿಟ್ಟ ಕೆರೆಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿದ್ದು, ಇದೀಗ ಯಲ್ಲಾಪುರ ನಗರದ ಜೋಡಿ ಕೆರೆಯಲ್ಲಿ ಗಣಪತಿ ವಿಸರ್ಜನೆಗೆ ಭಯ ಪಡುವಂತಹ ಸ್ಥಿತಿ ಎದುರಾಗಿದೆ. ಜೋಡಿ ಕೆರೆಯಲ್ಲಿ ಗಣಪತಿ...

ಕುಮಟಾ | ನಕಲಿ ಫೋನ್‌ಪೇ ಪಾವತಿ ಸಂದೇಶ ತೋರಿಸಿ ₹16,700 ಮೌಲ್ಯದ ಮೊಬೈಲ್ ವಂಚನೆ

ಕುಮಟಾದಲ್ಲಿ ಪೋನ್ ಪೇ ಮೂಲಕ ಆನ್‌ಲೈನ್‌ ಮಾಡಿದಂತೆ ನಕಲಿ ಮೆಸೇಜ್ ಹಾಗೂ ಸ್ಕ್ರೀನ್ ಶಾಟ್ ತೋರಿಸಿ ಮೊಬೈಲ್‌ ಫೋನ್‌ ಪಡೆದುಕೊಂಡು ವ್ಯಕ್ತಿಯೊಬ್ಬ ವಂಚಿಸಿರುವ ಘಟನೆ ನಡೆದಿದೆ. ಕುಮಟಾ ಹೊಸ ಬಸ್‌ ನಿಲ್ದಾಣದ ಸಮೀಪದಲ್ಲಿರುವ...

ಕಾರವಾರ | ಸರ್ಕಾರಿ ಪಿಯು ಕಾಲೇಜಿನಲ್ಲಿ ಸಿಇಟಿ, ನೀಟ್, ಜೆಇಇಗೆ ಉಚಿತ ತರಬೇತಿ

ಕಾರವಾರ: ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವಂತೆ ಸರ್ಕಾರವು ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ ಎಂದು ಕರ್ನಾಟಕ...

ಶಿರಸಿ | ಅತಿಕ್ರಮಣ ಮನೆ ನಂಬರ್ ರದ್ದು ಆದೇಶ ಹಿಂಪಡೆಯಲು ಮನವಿ: ಸಚಿವ ಖಂಡ್ರೆ ಭೇಟಿ ಮಾಡಿದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ್

ಶಿರಸಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿಕ್ರಮಣ ಹಾಗೂ ಸರ್ಕಾರಿ ಜಾಗದಲ್ಲಿರುವ ಮನೆಗಳಿಗೆ ನೀಡಲಾಗಿರುವ ಮನೆ ನಂಬರ್‌ಗಳನ್ನು ರದ್ದುಪಡಿಸಿ, ಅಂತಹ ಮನೆಗಳಿಂದ ತೆರಿಗೆ ಸಂಗ್ರಹಿಸದಿರುವ ಸರ್ಕಾರದ ಕ್ರಮಕ್ಕೆ ಜಿಲ್ಲೆಯ ಶಾಸಕರಾದ ಭೀಮಣ್ಣ ನಾಯ್ಕ ಹಾಗೂ...

ಮುಂಡಗೋಡ | ಟಿಬೆಟಿಯನ್ ಕ್ಯಾಂಪಿನಲ್ಲಿ ₹4.60 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.4ರಲ್ಲಿ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಟಿಬೆಟಿಯನ್ ಕ್ಯಾಂಪ್ ನಂ.4ರ 76(ಎ)ನೇ ಮನೆಯಲ್ಲಿ ವಾಸವಿರುವ ನವಾಂಗ್ ಟೆಂಡಪ್ (42)...

ಉತ್ತರ ಕನ್ನಡ | ಸೆಪ್ಟೆಂಬರ್. 12ರಂದು ಜಿಲ್ಲೆಯಾದ್ಯಂತ ‘ಪ್ರಜಾಸೇವೆ ಆಂದೋಲನ’

ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 12ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’...

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡಿಜೆ ಬಳಕೆಗೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

ಶಬ್ದ ಮಾಲಿನ್ಯ ನಿಯಂತ್ರಣ ಹಾಗೂ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆ, ಬೇಸ್ ಬೂಸ್ಟರ್‌, ಮೊಬೈಲ್ ಡಿಜೆ ವಾಹನಗಳು ಸೇರಿದಂತೆ 75 ಡೆಸಿಬೆಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಶಬ್ದವರ್ಧಕ...

ಈ ಹೊತ್ತಿನ ಪ್ರಮುಖ ಸುದ್ದಿ