ಉತ್ತರ ಕನ್ನಡ

ಕಾರವಾರ | ನಿಂತಿದ್ದ ಬಸ್‌ಗೆ ಬೈಕ್‌ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾರವಾರ ನಗರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಿಗ್ಗೆ ನಿಂತಿದ್ದ ಬಸ್ಸಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ(42)...

ಉತ್ತರ ಕನ್ನಡ | ಶಾಸಕ ಸತೀಶ್ ಸೈಲ್‌ಗೆ ಇಡಿ ಶಾಕ್; ಕಾರವಾರದ ನಿವಾಸದ ಮೇಲೆ ದಾಳಿ

ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯುತ್ತಿರುವಾಗಲೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಬುಧವಾರ ಮುಂಜಾನೆ ಇಡಿ ಅಧಿಕಾರಿಗಳ ತಂಡವು ಶಾಸಕರ ಕಾರವಾರದ ಚಿತ್ತಾಕುಲದಲ್ಲಿರುವ ನಿವಾಸದ...

ಉತ್ತರ ಕನ್ನಡ | ಹೊನ್ನಾವರ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಹೊನ್ನಾವರ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಭರ್ತಿಗಾಗಿ 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಆಸಕ್ತಿಯುಳ್ಳ ವಕೀಲರು ಅರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ 26/08/2025...

ಉತ್ತರ ಕನ್ನಡ | ಲೋಕ ಅದಾಲತ್‌ನಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಪ್ರಕರಣ ಇತ್ಯರ್ಥ ಪಡಿಸುವ ಗುರಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 13ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹಿರಿಯ...

ಮುಂಡಗೋಡ | ಕಾಳಗನಕೊಪ್ಪ ಶಾಲಾ ಶಿಕ್ಷಕಿ ಅಮಾನತು; ಪುನರ್‌ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

ಮುಂಡಗೋಡ ಪಟ್ಟಣ ವ್ಯಾಪ್ತಿಯ ಕಾಳಗನಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಭಾರತಿ ನಾಯ್ಕ್ ಅವರ ಅಮಾನತು ಆದೇಶವನ್ನು ಹಿಂಪಡೆದು, ಅದೇ ಶಾಲೆಗೆ ಪುನರ್‌ನೇಮಕ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಭಾರತಿ ನಾಯ್ಕ ಅವರು, ಕಾಳಗನಕೊಪ್ಪ ಶಾಲೆಯ...

ಯಲ್ಲಾಪುರ | ಕವಲಗಿ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಯುವಕನ ಶವ ಪತ್ತೆ: ಮತ್ತೊಬ್ಬನಿಗಾಗಿ ಮುಂದುವರೆದ ಶೋಧ

ಯಲ್ಲಾಪುರದ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿ ಭಾನುವಾರದಂದು ಕವಲಗಿ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಇಬ್ಬರು ಸಹೋದರರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಮತ್ತೊಬ್ಬನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನಸರದ...

ಯಲ್ಲಾಪುರ | ತುಂಬಿದ ಹಳ್ಳದಲ್ಲಿ ಕೊಚ್ಚಿಹೋದ ಇಬ್ಬರು ಯುವಕರು ನಾಪತ್ತೆ: ಪ್ರಕರಣ ದಾಖಲು

ತುಂಬಿದ ಹಳ್ಳದಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನರಸ ಗ್ರಾಮದಲ್ಲಿ ನಡೆದಿದೆ. ಕಾಣೆಯಾದವರನ್ನು ಮಾದನಸರ ಗ್ರಾಮದ ಒಂದೇ ಕುಟುಂಬದ ನಿವಾಸಿಗಳಾಗಿರುವ...

ಸಿದ್ದಾಪುರ | ಸಾವಿನಲ್ಲೂ ಸಾರ್ಥಕತೆ ಮೆರೆದ ಆಟೋ ಚಾಲಕ: ಎಂಟು ಜನರಿಗೆ ಅಂಗಾಂಗ ದಾನ

ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆಟೋ ಚಾಲಕ ವೃತ್ತಿ ಮಾಡುತ್ತಿದ್ದು, ಅಪಘಾತದಲ್ಲಿ ಗಾಯಗೊಂಡು, ಮೆದುಳು ನಿಷ್ಕ್ರಿಯಗೊಂಡ ನಂತರ ತನ್ನ ಅಂಗಾಂಗ ದಾನ ಮಾಡುವ ಮೂಲಕ ಎಂಟು ಜನರ...

ಉತ್ತರ ಕನ್ನಡ | ದೌರ್ಜನ್ಯಗಳಿಂದ ನೊಂದ ಮಹಿಳೆಯರಿಗೆ ನೆರವಾಗಲು ಶೀಘ್ರದಲ್ಲೇ ಹೆಚ್ಚುವರಿ ಸಖಿ ಕೇಂದ್ರ

ಉತ್ತರ ಕನ್ನಡದ ಕಾರವಾರದಲ್ಲಿರುವ ಸಖಿ ಕೇಂದ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. ಕಾರವಾರ ಕೇಂದ್ರವು ಇತರೆ ತಾಲೂಕುಗಳಿಂದ ದೂರ ಇರುವ ಕಾರಣ ನೊಂದ ಮಹಿಳೆಯರಿಗೆ ತಕ್ಷಣದಲ್ಲಿ ಸೂಕ್ತ ನೆರವು...

ಮುಂಡಗೋಡ | ರಕ್ಷಾಬಂಧನ ಆಚರಿಸಿದ ನರೇಗಾ ಕೂಲಿ ಕಾರ್ಮಿಕರು

ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡುವ ರಕ್ಷಾಬಂಧನ ಹಬ್ಬವನ್ನು ಮುಂಡಗೋಡ ತಾಲೂಕಿನ ನರೇಗಾ ಕೂಲಿ ಕಾರ್ಮಿಕರು ಆಚರಿಸಿದ್ದಾರೆ. ಮುಂಡಗೋಡು ತಾಲೂಕು...

ಉತ್ತರ ಕನ್ನಡ | ಜಾಲಿ, ಹೆಬಳೆ, ಭಟ್ಕಳ ವಿಲೀನಗೊಳಿಸಿ ನಗರಸಭೆ ರೂಪಿಸಲು ಸಚಿವ ಸಂಪುಟದಲ್ಲಿ ತೀರ್ಮಾನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಆಡಳಿತ ವ್ಯವಸ್ಥೆಗೆ ಹೊಸ ರೂಪ ನೀಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ, ಭಟ್ಕಳ ಪುರಸಭೆಯೊಂದಿಗೆ ಜಾಲಿ ಪಟ್ಟಣ ಪಂಚಾಯಿತಿ...

ಉತ್ತರ ಕನ್ನಡ | ಜೆರಾಕ್ಸ್ ಶಾಪ್‌ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ನ್ಯೂ ಕೆಎಚ್‌ಬಿ ಕಾಲೋನಿಯ ಮಹಾಲೆ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಓಂಕಾರ್ ಜೆರಾಕ್ಸ್ ಮತ್ತು ಪುಸ್ತಕದ ಅಂಗಡಿಗೆ ಬೆಂಕಿ ತಗುಲಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X