ಶಹಾಪುರ ತಾಲೂಕಿನ ಕ್ರೀಡಾಂಗಣದಲ್ಲಿ ಬುಧವಾರ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹಯ್ಯಾಳ (ಬಿ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ...
ಮಹಿಳಾ ಮೀಸಲಾತಿಯನ್ನು ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ಬೇರ್ಪಡಿಸಿ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿಯನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ...
ಸೀಲ್ ಲ್ಯಾಬೋರೇಟರಿ ಕಂಪೆನಿಯಲ್ಲಿ ಭಾರೀ ಗ್ಯಾಸ್ ಸ್ಫೋಟ ಸಂಭವಿಸಿದೆ. ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೇಚೂರು ಬಳಿಯ ಸೀಲ್ ಲ್ಯಾಬೋರೇಟರಿ ಕಂಪನಿಯಲ್ಲಿ ನಡೆದಿದೆ.
ಕಡೇಚೂರು...
ಜಾತಿ ಗುರುತಿನ ಆಧಾರದ ಮೇಲೆ ಹಲ್ಲೆ ಮತ್ತು ಅವಮಾನಗಳ ಆರೋಪಗಳು ಇನ್ನೂ ದಾಖಲಾಗುತ್ತಿರುವುದು, ಸಾಮಾಜಿಕ ಅಸಮಾನತೆ ಸಂಪೂರ್ಣವಾಗಿ ಅಂತ್ಯಗೊಂಡಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಸಾಮಾಜಿಕ ನ್ಯಾಯದ ಸಾಧನಗಳ ಅಗತ್ಯದ ಕುರಿತ ಚರ್ಚೆಯನ್ನೂ ಮತ್ತೆ ಮುಂದಿಟ್ಟಿದೆ....
ಭೂ-ಒಡೆತನ ಯೋಜನೆಯನ್ನು ತಕ್ಷಣ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹೊಸ ಸಮಿತಿ ರಚಿಸಿ ಭೂಹೀನ ದಲಿತ ಕುಟುಂಬಗಳಿಗೆ ಭೂಮಿ ಹಂಚಿಕೆ ಮಾಡಬೇಕು. ಜೊತೆಗೆ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿ ರೈತರ ಬೆಳೆಸಾಲ ಮನ್ನಾ...
ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಹಾಗೂ ಮಕ್ಕಳ ಹಕ್ಕುಗಳು, ಸುರಕ್ಷತೆ ಮತ್ತು ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ...
ಸುರಪುರ ತಾಲೂಕಿನ ಶಖಾಪುರ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಗಾಗಿ ಕುಣಿ (ಸಮಾಧಿ) ಅಗೆಯುವ ಕಾಯಕ ನಿರ್ವಹಿಸಲು ನಿರಾಕರಿಸಿದ್ದಕ್ಕೆ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ...
ಮುಂಗಾರು ಮಳೆಯ ಅಭಾವದಿಂದ ಜಮೀನಿನಲ್ಲಿ ಬಿತ್ತಿದ್ದ ಹತ್ತಿ ಬೀಜಗಳು ಸರಿಯಾಗಿ ಮೊಳಕೆ ಬಾರದ ಹಿನ್ನೆಲೆಯಲ್ಲಿ ಮನನೊಂದ ಯುವ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಗುರುವಾರ ಸಂಜೆ...
ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಶ್ರೀ ದಂಡಗುಂಡ ಬಸವೇಶ್ವರ ಆಗ್ರೋ ಸಂಸ್ಥೆಯಲ್ಲಿ ರೈತರಿಗೆ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಲಾಗಿದ್ದು, ಜಿಎಸ್‌ಟಿ ನಿಯಮಾನುಸಾರ ಬಿಲ್ ನೀಡದೆ ನಕಲಿ...
ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲ್ಲೂಕಿನ ಹತ್ತಿಕುಣಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಯಾದಗಿರಿ, ಸೇಡಂ ರಾಜ್ಯ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ...
ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿ, ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ...
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಸ್ವತ್ತು 2.0 ಹಾಗೂ ಇ-ಖಾತಾ ವ್ಯವಸ್ಥೆಯ ತಾಂತ್ರಿಕ ದೋಷಗಳಿಂದ ಗ್ರಾಮೀಣ ಭಾಗದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಶೀಘ್ರ...