ದೇಶ

ಗುಜರಾತ್ | ಹಿಂದೂ ದೇಶದಲ್ಲಿರಬೇಕಾದರೆ ಜೈ ಶ್ರೀರಾಮ್ ಎನ್ನಬೇಕು ಎಂದವನ ಬಂಧನ

ವ್ಯಕ್ತಿಯೊಬ್ಬ ಹಿಂದೂ ದೇಶದಲ್ಲಿರಬೇಕಾದರೆ ನೀನು ಜೈ ಶ್ರೀರಾಮ್ ಎನ್ನಬೇಕು ಎಂದ ವ್ಯಕ್ತಿಯೊಬ್ಬನನ್ನು ಗುಜರಾತ್‌ ಪೊಲೀಸರು ಬಂಧಿಸಿದ್ದಾರೆ. ಫ್ಯಾಕ್ಟ್‌ ಚೆಕ್‌ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಮದ್ಯಪಾನ ಮಾಡಿದ್ದ ಈ ವ್ಯಕ್ತಿ...

ಗುಜರಾತ್‌ನಲ್ಲಿ ಪ್ರಕರಣ ಹಿಂಪಡೆಯದ ದಲಿತ ಮಹಿಳೆಯ ಹತ್ಯೆ; ಮಧ್ಯ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ

ದಲಿತ ಮಹಿಳೆಯರ ಮೇಲೆ ಗುಜರಾತ್‌ ಹಾಗೂ ಮಧ್ಯ ಪ್ರದೇಶದಲ್ಲಿ ಎರಡು ಘನಘೋರ ದುರಂತಗಳು ನಡೆದಿರುವ ಪ್ರಕರಣ ಬೆಳಕಿಗೆ ಬಂದಿವೆ. ಮೂರು ವರ್ಷಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ...

ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ಕೈಯಿಂದ ಮಲ ಬಾಚುವ ವೇಳೆ ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಪೌರ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ.ಗಳ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಸ್ಥಳೀಯ ನಗರ ಆಡಳಿತಕ್ಕೆ ಆದೇಶ ನೀಡಿದೆ. ಮಲದ ಗುಂಡಿಯಲ್ಲಿ...

ಜಗಳದ ವೇಳೆ 4ನೇ ತರಗತಿ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿದ ಸಹಪಾಠಿಗಳು

ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಕೈವಾರದ ಮೂಲಕ 108 ಬಾರಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ. ಘಟನೆಯ ಬಗ್ಗೆ...

ಥೈಲ್ಯಾಂಡ್, ಶ್ರೀಲಂಕಾ ಬಳಿಕ ಭಾರತೀಯರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಮಲೇಷ್ಯಾ ಅನುಮತಿ

ಥೈಲ್ಯಾಂಡ್, ಶ್ರೀಲಂಕಾ ದೇಶಗಳ ನಂತರ ಈಗ ಮಲೇಷ್ಯಾ ಕೂಡ ಭಾರತೀಯರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಿದೆ. ಡಿಸೆಂಬರ್ 1 ರಿಂದ ಭಾರತ ಮತ್ತು ಚೀನಾದ ನಾಗರಿಕರಿಗೆ 30 ದಿನಗಳ ವೀಸಾ-ಮುಕ್ತ ಪ್ರವೇಶ...

ಗುಜರಾತ್ | ಅಕಾಲಿಕ ಮಳೆಯಿಂದ ಸಿಡಿಲು ಬಡಿದು 20 ಮಂದಿ ಸಾವು

ಗುಜರಾತ್‌ನ 251 ತಾಲೂಕುಗಳ ಪೈಕಿ 230ಕ್ಕೂ ಹೆಚ್ಚು ತಾಲೂಕುಗಳಲ್ಲಿ ಗುಡುಗು ಸಹಿತ ಅಕಾಲಿಕ ಮಳೆಯಾಗಿದೆ. ಭಾನುವಾರ ಸಿಡಿಲು ಬಡಿದು ಅಪ್ರಾಪ್ತರು ಸೇರಿದಂತೆ ಸುಮಾರು 20 ಮಂದಿ ಸಾವನ್ನಪ್ಪಿದ್ದು, ಒಂಬತ್ತುಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ...

ಉತ್ತರ ಪ್ರದೇಶ: ದಲಿತ ಬಾಲಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯ

ಹದಿನಾಲ್ಕು ವರ್ಷದ ದಲಿತ ಸಮುದಾಯದ ಬಾಲಕನೊಬ್ಬನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಜೌನ್‌ಪುರ್ ಜಿಲ್ಲೆಯ ಸುಜಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. ತಮ್ಮ ಕುಟುಂಬದ ಬಾಲಕಿಗೆ...

ಗುಜರಾತ್ : ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಅಮಾನುಷ ಹಲ್ಲೆ

ಬುಡಕಟ್ಟು ಸಮುದಾಯದ ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನ ಕುಟುಂಬದವರು ಅಪಹರಿಸಿ, ಅಮಾನುಷವಾಗಿ ಥಳಿಸಿ ರಸ್ತೆಯಲ್ಲಿ ಅರೆಬೆತ್ತಲೆಯಾಗಿ ಬಿಟ್ಟಿರುವ ಘಟನೆ ಗುಜರಾತ್‌ನ ತಾಪಿ ಜಿಲ್ಲೆಯ ವ್ಯಾರಾ ಪಟ್ಟಣದಲ್ಲಿ ನಡೆದಿದೆ. ಬುಡಕಟ್ಟು ಸಮುದಾಯದ 26 ವರ್ಷದ ಈ...

ರಾಜಸ್ಥಾನ ಚುನಾವಣೆಗೆ ಕರ್ನಾಟಕ ರೈಲು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಭಾವ?

2019ರ ಲೋಕಸಭೆ ಚುನಾವಣೆಯಲ್ಲಿ ರೈಲ್ವೆ ಇಲಾಖೆಯನ್ನು ಬೇಕಾಬಿಟ್ಟಿ ಬಳಸಿಕೊಂಡಿದ್ದ ಬಿಜೆಪಿ ಈ ವಿಧಾನಸಭಾ ಚುನಾವಣೆಗಳಿಗೂ ಟ್ರೇನುಗಳ ಬಳಸಿಕೊಂಡಿದೆ. ರಾಜ್ಯದ ಹಲವು ರೈಲುಗಳು ರದ್ದಾಗಿದ್ದು, ಅದರ ಹಿಂದೆ ರಾಜಸ್ಥಾನ ಬಿಜೆಪಿ ಉಸ್ತುವಾರಿಯಾದ ಕೇಂದ್ರ ಸಚಿವ...

‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ ತಂಡದ ವೇಗದ ಬೌಲರ್‌ ಮೊಹಮ್ಮದ್ ಶಮಿ ವ್ಯಕ್ತಿಯೊಬ್ಬರ ಪ್ರಾಣ ಉಳಿಸಿದ್ದು, ಸ್ವತಃ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಉತ್ತರಾಖಂಡ್‌ನ ನೈನಿತಾಲ್‌ನ...

ಜಮ್ಮು ಕಾಶ್ಮೀರ ವಿದ್ಯುತ್ ಬಿಕ್ಕಟ್ಟು: ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಒಮರ್ ಅಬ್ದುಲ್ಲಾ ವಾಗ್ದಾಳಿ

ಸಾಮಾನ್ಯ ಜನರು ವಿದ್ಯುತ್‌ನಂತಹ ಮೂಲ ಸೌಕರ್ಯಗಳಿಗಾಗಿ ಹೆಣಗಾಡುತ್ತಿದ್ದರೆ, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಎಲ್ಲ ಐಷಾರಾಮಿ ಸೌಲಭ್ಯಗಳನ್ನು ಲಭ್ಯವಾಗುವಂತೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಒಮರ್...

ಉತ್ತರಾಖಂಡ ಸುರಂಗ ದುರಂತ: ಹೈದರಾಬಾದ್‌ನಿಂದ ಪ್ಲಾಸ್ಮಾ ಯಂತ್ರ ಆಗಮನ

ಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗ ಕಳೆದ 15 ದಿನಗಳ ಹಿಂದೆ ಕುಸಿದು ಬಿದ್ದು 41 ಕಾರ್ಮಿಕರು ಸಿಲುಕಿಕೊಂಡಿದ್ದು, ಕಾರ್ಮಿಕರನ್ನು ಹೊರತರುವ ರಕ್ಷಣಾ ಕಾರ್ಯಾಚರಣೆ ಇಲ್ಲಿಯವರೆಗೂ ಫಲಪ್ರದವಾಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ...

ಜನಪ್ರಿಯ