ದೇಶ

ವೈಚಾರಿಕ ಸಮರ ಮುಂದುವರಿಯಲಿದೆ: ಚುನಾವಣಾ ಫಲಿತಾಂಶದ ಬಳಿಕ ರಾಹುಲ್ ಗಾಂಧಿ

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಜಯಭೇರಿ ಬಾರಿಸಿದರೆ, ಉಳಿದ ಮೂರು ರಾಜ್ಯಗಳಲ್ಲಿ ಸೋಲನುಭವಿಸುವ ಮೂಲಕ ನಿರಾಸೆ ಅನುಭವಿಸಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಚುನಾವಣಾ...

ರೇವಂತ್ ರೆಡ್ಡಿಗೆ ಶುಭ ಕೋರಿದ ಡಿಜಿಪಿ ಅಮಾನತುಗೊಳಿಸಿದ ಚುನಾವಣಾ ಆಯೋಗ

ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿ ಶುಭ ಕೋರಿದ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಭಾನುವಾರ ಚುನಾವಣಾ ಆಯೋಗ ಅಮಾನತುಗೊಳಿಸಿದೆ. ರೇವಂತ್ ರೆಡ್ಡಿಯನ್ನು ಭೇಟಿ...

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾದ ಆರು ಅಂಶಗಳು

2014ರಲ್ಲಿ ತೆಲಂಗಾಣ ರಾಜ್ಯವನ್ನು ರಚಿಸಿದ ಬಳಿಕ ನಡೆದ ಎರಡು ಚುನಾವಣೆಗಳಲ್ಲಿ ನೆಲಕಚ್ಚಿದ್ದ ಕಾಂಗ್ರೆಸ್‌, ಈಗ ಫೀನಿಕ್ಸ್‌ನಂತೆ ಎದ್ದು ನಿಂತಿದೆ. ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಆಡಳಿತರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಸೋಲುಂಡಿದೆ. ಆಡಳಿತ...

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ ಕಾಂಗ್ರೆಸ್‌ ಕೈಯಲ್ಲಿದ್ದ ರಾಜಸ್ಥಾನ ಕಮಲದ ತೆಕ್ಕೆಗೆ ಜಾರಿದೆ. 199 ಸ್ಥಾನಗಳ ಪೈಕಿ 115 ಸ್ಥಾನಗಳಲ್ಲಿ...

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವರ್ಷದ ಹಿಂದೆ ಯಾರೂ ನಿರೀಕ್ಷಿಸಿರಲಿಲ್ಲ: ಸಿದ್ದರಾಮಯ್ಯ

ಇಂದು ಪ್ರಕಟಗೊಂಡ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ...

12 ರಾಜ್ಯಗಳಲ್ಲಿ ‘ಬಿಜೆಪಿ’ಯದ್ದೇ ನೇರ ಆಡಳಿತ; 3ಕ್ಕೆ ಕುಸಿದ ಕಾಂಗ್ರೆಸ್‌

ಈಗಷ್ಟೇ ಚುನಾವಣೆ ನಡೆದ ಐದು ರಾಜ್ಯಗಳ ಪೈಕಿ, ನಾಲ್ಕು ರಾಜ್ಯಗಳ ಮತ ಎಣಿಕೆ ಭಾನುವಾರ ನಡೆದಿದೆ. ಅವುಗಳಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಆ ಮೂಲಕ ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಕೂಡ ತೆಲಂಗಾಣದ ಕಾಂಗ್ರೆಸ್‌ಗೆ ದೊಡ್ಡ ನೈತಿಕ ಶಕ್ತಿಯಾಯಿತು. ಒಗ್ಗಟ್ಟಿನಿಂದ ಹೋರಾಡಲು ಸ್ಫೂರ್ತಿ ನೀಡಿತು. ಮುಖ್ಯವಾಗಿ ಕರ್ನಾಟಕದ ಮಾದರಿಯಲ್ಲಿಯೇ...

ಮಧ್ಯಪ್ರದೇಶ | ಮೊದಲ ಜಯ ದಾಖಲಿಸಿದ ‘ಭಾರತೀಯ ಆದಿವಾಸಿ ಪಕ್ಷ’

ಮಧ್ಯಪ್ರದೇಶದಲ್ಲಿ ಭಾರತೀಯ ಆದಿವಾಸಿ ಪಕ್ಷವು ತನ್ನ ಮೊದಲ ಜಯವನ್ನು ದಾಖಲಿಸಿದೆ. ರಾಜ್ಯದ ರತ್ಲಾಮ್ ಜಿಲ್ಲೆಯ ಸೈಲಾನಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಇದೇ ಮೊದಲ ಬಾರಿಗೆ ಖಾತೆ ತೆರೆದಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಸೈಲಾನಾ...

4 ರಾಜ್ಯಗಳ ಚುನಾವಣಾ ಫಲಿತಾಂಶ: ಡಿ.6ರಂದು ‘ಇಂಡಿಯಾ’ ಒಕ್ಕೂಟದ ಸಭೆ ಕರೆದ ಖರ್ಗೆ

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡ ನಂತರ ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ತನ್ನ ಒಕ್ಕೂಟದ ಪಕ್ಷಗಳ ನಾಯಕರಿಗೆ ಡಿಸೆಂಬರ್‌ 6ರಂದು ನಡೆಯುವ ಸಭೆಗೆ ಆಹ್ವಾನಿಸಿದೆ. ಈ ಬಗ್ಗೆ...

ತೆಲಂಗಾಣಕ್ಕೆ ನೀಡಿರುವ 6 ಗ್ಯಾರಂಟಿ ಶೀಘ್ರ ಜಾರಿ: ಕಾಂಗ್ರೆಸ್‌ ನಾಯಕ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಪಕ್ಕಾ ಆಗಿದೆ. ಈ ಹಿನ್ನೆಲೆ, ತೆಲಂಗಾಣದಲ್ಲಿರುವ ಗಾಂಧಿ ಭವನದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಕಾರ್ಯಕರ್ತರು ಸಿಹಿ ಹಂಚಿ, ತಿಂದು ಕುಣಿದು ಕುಪ್ಪಳಿಸುತ್ತಿದ್ದಾರೆ. ಈ ವೇಳೆ, ಮಾದ್ಯಮದವರೊಂದಿಗೆ ಮಾತನಾಡಿದ...

ತೆಲಂಗಾಣ: ಗೆಲುವಿನತ್ತ ಕೋಮುದ್ವೇಷ ಭಾಷಣಕಾರ ರಾಜಾ ಸಿಂಗ್‌

ಬಿಜೆಪಿಯಿಂದ ಉಚ್ಚಾಟಿತನಾಗಿ, ಮತ್ತೆ ಬಿಜೆಪಿಯ ಟಿಕೆಟ್ ಪಡೆದು ತೆಲಂಗಾಣದ ಗೋಶಾಮಹಲ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕ ರಾಜಾ ಸಿಂಗ್‌ ಮತ್ತೊಮ್ಮೆ ಗೆಲುವು ಪಡೆಯುವತ್ತ ಮುನ್ನಡೆ ಸಾಧಿಸಿದ್ದಾರೆ. 13ನೇ ಸುತ್ತಿನ ಮತ ಎಣಿಕೆಯ ವೇಳೆಗೆ 25,000 ಮತಗಳ...

ಸನಾತನ ಧರ್ಮವನ್ನು ನಿಂದಿಸಿದವರಿಗೆ ಈ ಚುನಾವಣೆಯೇ ನಿದರ್ಶನ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

ಮಧ್ಯಪ್ರದೇಶ, ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಬರುತ್ತಿರುವ ಮಧ್ಯೆಯೇ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, 'ಸನಾತನ ಧರ್ಮ'ವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟಿದ್ದಾರೆ. ಚುನಾವಣಾ ಫಲಿತಾಂಶಗಳು ಬಿಜೆಪಿಯ ಕಡೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ