ದೇಶ

ವಿಧಾನಸಭೆ ಚುನಾವಣೆ: ಮಧ್ಯ ಪ್ರದೇಶದಲ್ಲಿ ಶೇ.27, ಛತ್ತೀಸ್‌ಗಢದಲ್ಲಿ ಶೇ.19 ಮತದಾನ

ಮಧ್ಯ ಪ್ರದೇಶದ ಎಲ್ಲ 230 ಕ್ಷೇತ್ರ ಹಾಗೂ ಛತ್ತೀಸ್‌ಗಢದ 70 ಸ್ಥಾನಗಳ ಕೊನೆಯ ಹಂತದ ವಿಧಾನಸಭೆ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ. ಮಧ್ಯ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ...

ಉತ್ತರಖಂಡ ಸುರಂಗ ದುರಂತ: ಮನುಕುಲದ ಉಳಿವಿಗಲ್ಲದೆ ಮತ್ಯಾರಿಗಾಗಿ ಅಭಿವೃದ್ಧಿ

ಕೆಲದಿನಗಳ ಹಿಂದೆ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಪಟ್ಟಣಕ್ಕೆ ಸಮೀಪದಲ್ಲಿರುವ ಗಂಗೋತ್ರಿ - ಯಮುನೋತ್ರಿ ಹೆದ್ದಾರಿಯಲ್ಲಿ(ಚಾರ್ ಧಾಮ್) ಸಿಲ್ಕಿಯಾರ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಿಸಲಾಗುತ್ತಿರುವ ಸರ್ವಋತು ಸುರಂಗ ಕುಸಿದು 40 ಕಾರ್ಮಿಕರು ಅದರಲ್ಲಿ ಸಿಲುಕಿಕೊಂಡರು....

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನೆರಡು ದಿನದಲ್ಲಿ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಕಳೆದ ಕೆಲವು ತಿಂಗಳುಗಳಿಂದ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸದ...

ವಿರಾಟ್, ಅಯ್ಯರ್‌ ಹೆಸರು ಉಲ್ಲೇಖಿಸಿ ಶಮಿ ಹೆಸರು ಕಡೆಗಣಿಸಿದ ಪ್ರಲ್ಹಾದ್ ಜೋಶಿ; ಭಾರೀ ವಿರೋಧ

’ಇದು ಶಮಿ ಫೈನಲ್‌’ ಆಗಿತ್ತೆಂದು ಕ್ರಿಕೆಟ್ ಪ್ರೇಮಿಗಳು ಪ್ರತಿಕ್ರಿಯಿಸಿದ ಬಳಿಕ ಜೋಶಿಯವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಎಡಿಟ್ ಮಾಡಿದ್ದರೂ ಎಕ್ಸ್ ಖಾತೆಯಲ್ಲಿ ತಪ್ಪು ಹಾಗೆಯೇ ಉಳಿದಿದೆ ವಿಶ್ವಕಪ್‌ ಟೂರ್ನಿಯ ಸೆಮಿ ಫೈನಲ್‌ನಲ್ಲಿ ಭಾರತ ಗೆದ್ದಿದೆ. ’ಇದು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ತಲೆಗೆ ಹೊಡೆದು ಸುದ್ದಿಯಲ್ಲಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರ...

ಆ್ಯಪ್‌ನಲ್ಲಿ ಎರಡು ನಂಬರ್ ಅಕೌಂಟ್ ಬಳಸುವ ಆಯ್ಕೆ ಪರಿಚಯಿಸಿದ ವಾಟ್ಸಾಪ್

ನಂಬರ್‌ ಒನ್‌ ಜನಪ್ರಿಯ ಮಾಧ್ಯಮ ವಾಟ್ಸಾಪ್ ಎರಡು ಅಕೌಂಟ್ ಬಳಸುವ ಆಯ್ಕೆಯನ್ನು ಪರಿಚಯಿಸಿದೆ. ಇನ್ನು ಮುಂದೆ ವಾಟ್ಸಾಪ್ ಬಳಕೆದಾರರು ತಮ್ಮ ಆ್ಯಪ್‌ನಲ್ಲಿ ಎರಡು ಅಕೌಂಟ್‌ಗಳನ್ನು ಬಳಸಬಹುದು. ಈಗಾಗಲೇ ಈ ವಿನೂತನ ಫೀಚರ್‌ ಆಂಡ್ರಾಯ್ಡ್‌ ಹಾಗೂ...

ಪೊಲೀಸರು ದಲಿತರ ಹಿತಾಸಕ್ತಿಗೆ ವಿರುದ್ಧವಿದ್ದಾರೆ: ಮಾಜಿ ಐಎಎಸ್‌ ಅಧಿಕಾರಿ ಆರೋಪ

ತಿರುನಲ್ವೇಲಿ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ಸರಿಯಾಗಿ ಪಾಲಿಸುತ್ತಿಲ್ಲ. ಅವರು ಸಂತ್ರಸ್ತ ದಲಿತರನ್ನು ರಾಜಿ ಮಾಡಿಕೊಳ್ಳಲು ಒತ್ತಾಯಿಸುತ್ತಿದ್ದಾರೆ ಎಂದು ಮಾಜಿ ಐಎಎಸ್ ಅಧಿಕಾರಿ ಮತ್ತು ಸಮೂಗ...

ಜಮ್ಮು-ಕಾಶ್ಮೀರ | ಕಂದಕಕ್ಕೆ ಉರುಳಿದ ಬಸ್‌; 36 ಮಂದಿ ದುರ್ಮರಣ

ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಬುಧವಾರ ಬೆಳಗ್ಗೆ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 55 ಮಂದಿ ಪ್ರಯಾಣಿಸುತ್ತಿದ್ದ...

ಮ್ಯಾನುಯಲ್ ಸ್ಕ್ಯಾವೆಂಜಿಂಗ್ | ಕೊಳಚೆ ಸ್ವಚ್ಛಗೊಳಿಸಲು ಗುಂಡಿಗೆ ಇಳಿದಿದ್ದ ನಾಲ್ವರು ಕಾರ್ಮಿಕರು ಸಾವು

ಕೈಯಲ್ಲಿ ಮಲ ಬಾಚುವಿಕೆ, ಮಲದ ಗುಂಡಿಗಳಿಗೆ ಪೌರ ಕಾರ್ಮಿಕರನ್ನು ಇಳಿಸುವುದನ್ನು ಕಾನೂನಾತ್ಮಕವಾಗಿ ನಿಷೇಧಿಸಿದ್ದರೂ, ಈ ಅನಿಷ್ಟ ಪದ್ದತಿ ಇನ್ನೂ ಜೀವಂತವಾಗಿದೆ. ಸರ್ಕಾರಿ ಅಧಿಕಾರಿಗಳು ಸೇರಿದಂತೆ ಪ್ರಬಲರು ಪೌರ ಕಾರ್ಮಿಕರನ್ನು ಕೊಳಚೆ ಗುಂಡಿಗಳಿಗೆ ಇಳಿಸಿ,...

ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ (75) ಮಂಗಳವಾರ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ಭಾನುವಾರ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು...

ಪರಿಸರ ಸಚಿವಾಲಯದ ಸಮಿತಿಗೆ ಅದಾನಿ ಕಂಪನಿ ಉದ್ಯೋಗಿ: ‘ದೋಸ್ತಿ ಎಂದರೆ ಹೀಗಿರಬೇಕು’ ಎಂದ ವಿಪಕ್ಷಗಳು

ಕೇಂದ್ರ ಸರ್ಕಾರದ ಪರಿಸರ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತಜ್ಞರ ಮೌಲ್ಯಮಾಪನ ಸಮಿತಿಗೆ ಗೌತಮ್ ಅದಾನಿ ಕಂಪನಿಯ ಉದ್ಯೋಗಿಯೋರ್ವರನ್ನು ನೇಮಕ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಪಕ್ಷಗಳು ಟೀಕೆ ಮಾಡಿದೆ. ತಜ್ಞರ ಮೌಲ್ಯಮಾಪನ ಸಮಿತಿಗೆ ಶ್ರೀಮಂತ...

ತಮಿಳುನಾಡಿನಲ್ಲಿ ಭಾರೀ ಮಳೆ; ಶಾಲೆಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಪರಿಣಾಮವಾಗಿ ತಮಿಳುನಾಡಿನ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ...

ಈ ಹೊತ್ತಿನ ಪ್ರಮುಖ ಸುದ್ದಿ