ದೇಶ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 209ರೂ. ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 209 ರೂ.ಗಳಿಗೆ ಹೆಚ್ಚಿಸಿವೆ. ಇಂದಿನಿಂದಲೇ(ಅಕ್ಟೋಬರ್ 1) ಜಾರಿಗೆ ಬರುವಂತೆ  ಸಿಲಿಂಡರ್ ದರವನ್ನು 209 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ...

ಊಟಿ – ಮೆಟ್ಟುಪಾಳ್ಯಂ ರಸ್ತೆಯಲ್ಲಿ ಕಂದಕಕ್ಕೆ ಉರುಳಿದ ಬಸ್;‌ 8 ಮಂದಿ ಸಾವು

ಪ್ರವಾಸಿಗರ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದ್ದರಿಂದ 8 ಮಂದಿ ಪ್ರವಾಸಿಗರು ಮೃತಪಟ್ಟು 42 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಊಟಿ–ಮೆಟ್ಟುಪಾಳ್ಯಂ ರಸ್ತೆಯಲ್ಲಿ ನಡೆದಿದೆ. ಮೃತರಲ್ಲಿ ಬಹುತೇಕರು ತಮಿಳುನಾಡಿನ ತೆಂಕಾಸಿಯ...

2 ಸಾವಿರ ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಅ. 7ರವರೆಗೆ ಅವಧಿ ವಿಸ್ತರಿಸಿದ ಆರ್‌ಬಿಐ

ಅಕ್ಟೋಬರ್ 7ರವರೆಗೂ 2000 ರೂ. ನೋಟು ವಿನಿಮಯಕ್ಕೆ ಅವಕಾಶ ಅ.8ರ ನಂತರ 2000 ರೂ. ನೋಟುಗಳ ಸ್ವೀಕಾರ ಬ್ಯಾಂಕ್‌ಗಳಲ್ಲಿ ಸ್ಥಗಿತ 2 ಸಾವಿರ ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ನೀಡಿರುವ ಗಡುವನ್ನು ಭಾರತೀಯ ರಿಸರ್ವ್ ಬ್ಯಾಂಕ್...

‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’ ಹೊಂದಿರುವ ಮಹಿಳೆಯರು ಮುಂದೆ ಬರುತ್ತಾರೆ ಎಂದು ಮಹಿಳೆಯರ ಬಗ್ಗೆ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಹಿರಿಯ ನಾಯಕ ಅಬ್ದುಲ್ ಬರಿ...

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ ಸಂಚಾರ ತಡೆದಿದ್ದರು. ಪರಿಣಾಮವಾಗಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು ಆಂಬುಲೆನ್ಸ್‌ನಲ್ಲಿಯೇ ಒಂದು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿತ್ತು ಎಂದು ವರದಿಯಾಗಿದೆ....

‘ಆತ ನನ್ನ ಮಗನೇ ಇರಬಹುದು, ಆತನನ್ನು ಗಲ್ಲಿಗೇರಿಸಿ’: ಅತ್ಯಾಚಾರ ಆರೋಪಿಯ ತಂದೆ

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು ಉಜ್ಜಯಿನಿಯಲ್ಲಿ ಬಾಲಕಿಯ ಅತ್ಯಾಚಾರ ಆರೋಪಿಯ ತಂದೆ ಹೇಳಿದ್ದಾರೆ. ಅಲ್ಲದೆ, ತನ್ನ ಮಗನ ಪರವಾಗಿ ನ್ಯಾಯಾಲಯದಲ್ಲಿ ಯಾರೂ ವಾದಿಸಬಾರದು ಎಂದು ಸ್ಥಳೀಯ...

ವಿಶೇಷಚೇತನ ಯೋಧರ ಹೊಸ ಪಿಂಚಣಿ ಯೋಜನೆ; ಮೋದಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೊಮ್ಮೆ ಬಯಲು: ಖರ್ಗೆ

ಸಶಸ್ತ್ರ ಪಡೆ ಸಿಬ್ಬಂದಿಗೆ ಹೊಸ ವಿಶೇಷಚೇತನ ಪಿಂಚಣಿ ನಿಯಮಗಳ ಕುರಿತು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಈ ಕ್ರಮದ ಮೂಲಕ ಬಿಜೆಪಿಯ ನಕಲಿ ರಾಷ್ಟ್ರೀಯತೆ ಮತ್ತೊಮ್ಮೆ ಸಾಬೀತಾಗಿದೆ...

ಮಧ್ಯಪ್ರದೇಶ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟಂಬಕ್ಕೊಂದು ಉದ್ಯೋಗ: ಸಿಎಂ ಚೌಹಾಣ್

ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶ ಚುನಾವಣೆ ನಡೆಯಲಿದೆ. ಅಲ್ಲಿ ಅಪರೇಷನ್ ಕಮಲಕ್ಕೆ ಬಲಿಯಾಗಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌, ಈ ಬಾರಿಯ ಚುನಾವಣೆಯಲ್ಲಿ ಹಲವು ಗ್ಯಾರಂಟಿಗಳನ್ನು ಜನರ ಮುಂದಿಟ್ಟಿದೆ. ಕಾಂಗ್ರೆಸ್‌ ಗ್ಯಾರಂಟಿಗಳಿಗೆ ಬೆದರಿರುವ ಆಡಳಿತಾರೂಢ...

ಅ.4ರಿಂದ ಮತ್ತೆ ಚುನಾವಣಾ ಬಾಂಡ್: ‘ಬಿಜೆಪಿಗೆ ಚಿನ್ನದ ಫಸಲು’ ಎಂದ ಪಿ ಚಿದಂಬರಂ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ವಿತರಣೆ ಮಾಡಲು ಮತ್ತೊಮ್ಮೆ ಮುಂದಾಗಿದೆ. ಅಕ್ಟೋಬರ್ 4 ರಂದು 10 ದಿನಗಳ ಅವಧಿಗೆ ತೆರೆಯುವ 28 ನೇ ಹಂತದ ಚುನಾವಣಾ ಬಾಂಡ್‌ಗಳ...

ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ ಬಿಜೆಪಿ ಸಂಸದ ಸತೀಶ್ ಗೌತಮ್

ಉತ್ತರ ಪ್ರದೇಶದ ಬಿಜೆಪಿ ಸಂಸದ ಸತೀಶ್ ಗೌತಮ್ ಸಾರ್ವಜನಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಶಾಸಕಿಯೋರ್ವರ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ. ಉತ್ತರ ಪ್ರದೇಶದ ಅಲಿಘಢ್‌ನ ಕೋಲ್ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಗೌತಮ್...

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದು, ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾನೂನಾಗಿ ಜಾರಿಯಾಗಲಿದೆ. Government of India issues a gazette notification...

ಕರ್ನಾಟಕಕ್ಕೆ ನೀಡಲು ‘ಇಲ್ಲ’ ಎಂದಿದ್ದ ‘ಅಕ್ಕಿ’ ಸಿಂಗಾಪುರಕ್ಕೆ ರಫ್ತು ಮಾಡಲು ಹೊರಟ ಕೇಂದ್ರ ಸರ್ಕಾರ!

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದಾಗ 'ನಿಮಗೆ ಬೇಕಾದಷ್ಟು ದಾಸ್ತಾನು ಅಕ್ಕಿ ನಮ್ಮಲ್ಲಿ ಇಲ್ಲ' ಎಂದಿದ್ದ ಕೇಂದ್ರ ಸರ್ಕಾರವು, ಸಿಂಗಾಪುರಕ್ಕೆ ಅಕ್ಕಿಯನ್ನು ರಫ್ತು ಮಾಡಲು ಹೊರಟಿದೆ. ಮಾನವೀಯ ಕಾರ್ಯಾಚರಣೆಗಳ ಅಡಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ