ದೇಶ

ಉಪ ಚುನಾವಣೆ 2023 ಫಲಿತಾಂಶ: ಇಂಡಿಯಾ 4, ಬಿಜೆಪಿ 3 ಕ್ಷೇತ್ರಗಳಲ್ಲಿ ಜಯ

ಮಂಗಳವಾರ(ಸೆ.8) ವಿವಿಧ ರಾಜ್ಯಗಳ ಏಳು ಸ್ಥಾನಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶದಲ್ಲಿ ಇಂಡಿಯಾ ಒಕ್ಕೂಟ 4 ಹಾಗೂ ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇಂಡಿಯಾ ಒಕ್ಕೂಟದ ಭಾಗವಾಗಿ ಕೇರಳದಲ್ಲಿ ಕಾಂಗ್ರೆಸ್, ಪಶ್ಚಿಮ ಬಂಗಾಳದಲ್ಲಿ...

ಮಾಂಸಾಹಾರ ಸೇವನೆಯಿಂದ ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಐಐಟಿ ಪ್ರಾಧ್ಯಾಪಕ ವಿವಾದಾತ್ಮಕ ಹೇಳಿಕೆ

ಪ್ರಾಣಿಗಳ ಮೇಲಿನ ಕ್ರೌರ್ಯ ಹಾಗೂ ಅವುಗಳನ್ನು ಕೊಂದು ತಿನ್ನುತ್ತಿರುವುದರಿಂದ ಹಿಮಾಚಲ ಪ್ರದೇಶದಲ್ಲಿ ಭೂಕುಸಿತಗಳು ಮತ್ತು ಮೇಘಸ್ಫೋಟಗಳು ಸಂಭವಿಸುತ್ತಿವೆ ಎಂದು ಐಐಟಿ ಮಂಡಿ ನಿರ್ದೇಶಕ ಲಕ್ಷ್ಮೀಧರ್ ಬೆಹೆರಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿಮ್ಲಾದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ...

ಹೆಸರಾಂತ ವ್ಯಂಗ್ಯಚಿತ್ರಕಾರ ಅಜಿತ್ ನಿನಾನ್‌ ಮೈಸೂರಿನಲ್ಲಿ ನಿಧನ

ತಮ್ಮ ಅತ್ಯುತ್ತಮ ವ್ಯಂಗ್ಯಚಿತ್ರಗಳಿಂದ ಜಾಗತಿಕ ಮನ್ನಣೆ ಪಡೆದಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಅಜಿತ್ ನಿನಾನ್ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ನಿನಾನ್ ಪತ್ನಿ,...

‘ಇಂಡಿಯಾ’ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ: ಡಿಎಂಕೆ ಸಚಿವರ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಸನಾತನ ಧರ್ಮ ನಿರ್ಮೂಲನೆ ಕುರಿತಾದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಸಂಸದ ಎ ರಾಜಾ ಹೇಳಿಕೆಗಳಿಗೆ ಕುರಿತಂತೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ ಎಂದಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ...

ಜೆಎನ್‌ಯು ವಿವಿಯಲ್ಲಿ ಅಂಗವಿಕಲ ವಿದ್ಯಾರ್ಥಿಗೆ ಎಬಿವಿಪಿ ಸದಸ್ಯರಿಂದ ಹಲ್ಲೆ  

ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿಗೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಯನ್ನು ಫಾರೂಕ್ ಆಲಂ ಎಂದು ಗುರುತಿಸಲಾಗಿದೆ. ಫಾರೂಕ್ ಅವರು ಎನ್‌ಎಸ್‌ಯುಐ ಹಿರಿಯ...

ಅಂಗಿ ಕಳಚಿ ಎಂದರು, ನಾನು ದೇಗುಲದ ಒಳಗೆ ಕಾಲಿಡಲಿಲ್ಲ: ಕೇರಳ ಘಟನೆ ಮೆಲುಕು ಹಾಕಿದ ಸಿದ್ದರಾಮಯ್ಯ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ "ಸನಾತನ ಧರ್ಮ ನಿರ್ಮೂಲನೆ" ಹೇಳಿಕೆಯ ಬಗ್ಗೆ ಬಿಜೆಪಿ ನಾಯಕರಿಂದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ದೇಗುಲದ ಸಿಬ್ಬಂದಿ ಅಂಗಿ ಕಳಚಿ ಎಂದದ್ದಕ್ಕೆ ದೇಗುಲದ ಪ್ರವೇಶ ನಿರಾಕರಣೆಯ...

ಸಾಮಾಜಿಕ ನ್ಯಾಯ ಶಾಶ್ವತವಾಗಿ ಅರಳಲಿ: ಪತ್ರ ಮುಖೇನ ಬಿಜೆಪಿಗೆ ಉದಯನಿಧಿ ಸ್ಟಾಲಿನ್ ತಿರುಗೇಟು

ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ ಅವರ ಸನಾತನ ಭಾಷಣ ವಿಷಯದ ಬಗ್ಗೆ ಬಿಜೆಪಿ ನಾಯಕರ ಪ್ರತಿಭಟನೆ ನಡುವೆ ಸ್ಟಾಲಿನ್‌ ಮತ್ತೊಂದು ಪತ್ರದ ಮೂಲಕ ಕಮಲ ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ...

ಸನಾತನ ವಿವಾದ: ಬಿಜೆಪಿ ಸಚಿವರಿಗೆ ಪ್ರಧಾನಿ ಸೂಚನೆ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, 'ನಾವು ಸರಿಯಾಗಿ ಉತ್ತರ ನೀಡಬೇಕಿದೆ' ಎಂದು ಬಿಜೆಪಿ ಸಚಿವರಿಗೆ...

2019ರ ಚುನಾವಣೆಗಾಗಿ ಕೇಂದ್ರಕ್ಕೆ 3 ಲಕ್ಷ ಕೋಟಿ ರೂ.ಹಣ ವರ್ಗಾವಣೆಗೆ ನಿರಾಕರಿಸಿದ್ದ ಆರ್‌ಬಿಐ

2019ರ ಲೋಕಸಭೆ ಚುನಾವಣೆಗೆ ಕೇವಲ ಒಂದು ವರ್ಷದ ಮೊದಲು 2018 ರಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಡುವೆ ಹಣಕಾಸಿನ ವರ್ಗಾವಣೆಗೆ ಸಂಬಂಧಿಸಿದಂತೆ ಘರ್ಷಣೆ ಉಂಟಾಗಿದ್ದ ಘಟನೆ ಈಗ...

ಉತ್ತರ ಪ್ರದೇಶ ವಿದ್ಯಾರ್ಥಿ ಕಪಾಳ ಮೋಕ್ಷ ಪ್ರಕರಣ: ತನಿಖೆಯ ಸ್ಥಿತಿಗತಿ ವರದಿ ಕೇಳಿದ ಸುಪ್ರೀಂ ಕೋರ್ಟ್

ಶಿಕ್ಷಕಿಯ ಸೂಚನೆ ಮೇರೆಗೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ಪ್ರಕರಣದ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಮುಜಾಫರ್‌ ನಗರ ಪೊಲೀಸ್ ವರಿಷ್ಠಾಧಿಕಾರಿಗೆ ಸುಪ್ರೀಂ ಕೋರ್ಟ್ ಬುಧವಾರ(ಸೆ.06) ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್...

ಸತ್ಯದಿಂದ ಭಾರತದ ಕುಟುಂಬ ವ್ಯವಸ್ಥೆ ಉಳಿದಿದೆ ಎಂದ ಭಾಗವತ್: ಜಾತಿ ವ್ಯವಸ್ಥೆ, ಅಸಮಾನತೆ ಹೆಚ್ಚಿದೆ ಎಂದ ನೆಟ್ಟಿಗರು

ಪ್ರಪಂಚದಾದ್ಯಂತ ಕುಟುಂಬ ವ್ಯವಸ್ಥೆಯು ಅವನತಿಯತ್ತ ಸಾಗುತ್ತಿದ್ದರೆ, ಭಾರತದಲ್ಲಿ ಸತ್ಯದಿಂದ ಕುಟುಂಬ ವ್ಯವಸ್ಥೆ ಸುಭದ್ರವಾಗಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು. ಮೋಹನ್ ಭಾಗವತ್ ಅವರ ಹೇಳಿಕೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿರುವ...

ತಮಿಳುನಾಡು | ದಲಿತ ಮಹಿಳೆ ತಯಾರಿಸಿದ ಅಡುಗೆ ಸೇವಿಸಲು ನಿರಾಕರಿಸಿದ ವಿದ್ಯಾರ್ಥಿಗಳು

ದಲಿತ ಮಹಿಳೆ ಅಡುಗೆ ತಯಾರಿಸಿದರೆಂದು ಶಾಲಾ ಮಕ್ಕಳು ಆಹಾರವನ್ನು ಸೇವಿಸಲು ನಿರಾಕರಿಸಿರುವ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ. ತಮಿಳುನಾಡಿನ ಕರೂರ್ ಜಿಲ್ಲೆಯ ವೇಲನ್ ಚೆಟ್ಟಿಯಾರ್ ಪಂಚಾಯತ್ ಯೂನಿಯನ್ ಶಾಲೆಯಲ್ಲಿ ಓದುತ್ತಿರುವ 30...

ಈ ಹೊತ್ತಿನ ಪ್ರಮುಖ ಸುದ್ದಿ