ದೇಶ

ಷೇರುಪೇಟೆ ವಂಚನೆ | ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್, ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಷೇರು ಮಾರುಕಟ್ಟೆ ವಂಚನೆ ಮತ್ತು ನಿಯಂತ್ರಕ ಉಲ್ಲಂಘನೆ ಆರೋಪದ ಮೇಲೆ ಮಾಜಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಶನಿವಾರ ಮುಂಬೈನ ವಿಶೇಷ ನ್ಯಾಯಾಲಯವು...

ಬಿಹಾರದ ಹೆಚ್ಚಿನ ಸ್ಥಳಗಳಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ: ಆರ್ಥಿಕ ಸಮೀಕ್ಷೆ

ಬಿಹಾರದ ಗಂಗಾ ನದಿಯ ನೀರು ಅಧಿಕ ಸ್ಥಳಗಳಲ್ಲಿ ಸ್ನಾನಕ್ಕೆ ಯೋಗ್ಯವಾಗಿಲ್ಲ, ನೀರಿನಲ್ಲಿ ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಬಿಹಾರದ ಆರ್ಥಿಕ ಸಮೀಕ್ಷೆ 2024-25 ಹೇಳಿದೆ. ಬಿಹಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಬಿಎಸ್‌ಪಿಸಿಬಿ) 34...

ಕೇಂದ್ರ ಸಚಿವೆಯ ಪುತ್ರಿಗೆ ದುಷ್ಕರ್ಮಿಗಳಿಂದ ಕಿರುಕುಳ: ದೂರು ದಾಖಲು

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಮುಕ್ತೈನಗರ ಪ್ರದೇಶದಲ್ಲಿ ನಡೆದ ಜಾತ್ರೆಯೊಂದರಲ್ಲಿ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವೆ ರಕ್ಷಾ ಖಡ್ಸೆ ಅವರ ಪುತ್ರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಈ...

ಆರ್‌ಎಸ್‌ಎಸ್‌ ಮುಖ್ಯಸ್ಥರು ಕುಂಭಮೇಳಕ್ಕೆ ಹೋಗಿರುವ ಚಿತ್ರ ತೋರಿಸಿ: ಶಿಂದೆ ವಿರುದ್ಧ ರಾವತ್ ವಾಗ್ದಾಳಿ

ಇತ್ತೀಚೆಗೆ ಮುಕ್ತಾಯವಾದ ಮಹಾ ಕುಂಭಮೇಳ ವಿಚಾರದಲ್ಲಿ ಮಹಾರಾಷ್ಟ್ರದ ಆಡಳಿತರೂಢ ಶಿವಸೇನೆ (ಶಿಂದೆ ಬಣ) ಮತ್ತು ವಿರೋಧ ಪಕ್ಷ ಶಿವಸೇನೆ (ಯುಬಿಟಿ) ನಡುವೆ ತೀವ್ರ ವಾಗ್ವಾದ ನಡೆಯುತ್ತಿದೆ. ಮಹಾ ಕುಂಭಮೇಳಕ್ಕೆ ಹೋಗದ ವಿಪಕ್ಷ ನಾಯಕರುಗಳನ್ನು...

ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಆಕಾಶ್ ಆನಂದ್ ವಜಾ

ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ವಜಾ ಮಾಡಿದ್ದಾರೆ. ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಇಂದು ನಡೆದ ಲಖನೌದಲ್ಲಿ ನಡೆದ ಅಖಿಲ ಭಾರತ...

ಅನಿವಾಸಿ ಭಾರತೀಯನ ಕೊಲೆ; 10 ಮಂದಿಗೆ ಜೀವಾವಧಿ ಶಿಕ್ಷೆ

'ಸ್ವಾಧ್ಯಾಯ ಪರಿವಾರ' ಎಂಬ ಆಧ್ಯಾತ್ಮಿಕ ಸಂಸ್ಥೆಯಲ್ಲಿ ನಡೆದಿದ್ದ ಅವ್ಯವಹಾರವನ್ನು ಪ್ರಶ್ನಿಸಿದ್ದ ಕಾರಣಕ್ಕೆ ಅನಿವಾಸಿ ಭಾರತೀಯನನ್ನು ಕೊಲೆ ಮಾಡಿದ ಪ್ರಕರಣದಲ್ಲಿ 10 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ 2006ರಲ್ಲಿ ಅನಿವಾಸಿ...

ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಹವ್ಯಾಸ ಬೆಳಸಿಕೊಂಡಿದ್ದಾರೆ: ಬಿಜೆಪಿಯ ಮಾಜಿ ಕೇಂದ್ರ ಸಚಿವನ ವಿವಾದಾತ್ಮಕ ಹೇಳಿಕೆ

ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಮಧ್ಯ ಪ್ರದೇಶದ ಸಚಿವ ಪ್ರಹ್ಲಾದ್‌ ಪಟೇಲ್ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಾಗರಿಕರ ಬೇಡಿಕೆಗಳನ್ನು 'ಭಿಕ್ಷೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಧ್ಯ ಪ್ರದೇಶದ ರಾಜಗಢ ಜಿಲ್ಲೆಯಲ್ಲಿ ವೀರಾಂಗನ...

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಿದ ದುರುಳ ಪೊಲೀಸರ ಬಲೆಗೆ

ಸುಮಾರು 17 ವರ್ಷದ ಬಾಲಕಿ ಮೇಲೆ 29 ವರ್ಷದ ಯುವಕ ಅತ್ಯಾಚಾರ ಎಸಗಿದ್ದು, ಆಕೆ ಗರ್ಭಿಣಿಯಾದಾಗ ಬಲವಂತವಾಗಿ ಗರ್ಭಪಾತ ಮಾಡಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆರೋಪಿಯು ನಕಲಿ ದಾಖಲೆಗಳನ್ನು ಬಳಸಿ ಗರ್ಭಪಾತ...

ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಹರಿಯಾಣದ ರೋಹ್ಟಕ್‌ನಲ್ಲಿ ನಡೆದಿದೆ. ಮೃತ ಮಹಿಳೆ ತಮ್ಮ ಕಾರ್ಯಕರ್ತೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ರೋಹ್ಟಕ್‌ನ ಸಂಪ್ಲಾ ಬಸ್‌ ನಿಲ್ದಾಣದ ಬಳಿ ದೊಡ್ಡ ನೀಲಿ ಸೂಟ್‌ಕೇಸ್‌ನಲ್ಲಿ...

ಪಂಜಾಬ್ ಮಾದಕವಸ್ತು ಬಿಕ್ಕಟ್ಟಿಗೆ ಅಕಾಲಿದಳ, ಬಿಜೆಪಿ ಮತ್ತು ಕಾಂಗ್ರೆಸ್ ಕಾರಣ: ಎಎಪಿ ಆರೋಪ

ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಈ ಹಿಂದಿನ ಅಕಾಲಿದಳ-ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳೇ ಕಾರಣ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಈ ಹಿಂದಿನ ಸರ್ಕಾರಗಳ ನಿರ್ಲಕ್ಷ್ಯವೇ ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಕಾರಣವಾಗಿದೆ...

ಸನಾತನ ಸಂಸ್ಥೆಯು ದೇಶದ ಸಂಸ್ಕೃತಿಯ, ಶಿಕ್ಷಣದ ಭಾಗವಾಗಬೇಕು: ಉಪ ರಾಷ್ಟ್ರಪತಿ ಧನಕರ್

ಸನಾತನ ಸಂಸ್ಥೆಯು ದೇಶದ ಸಂಸ್ಕೃತಿಯ, ಶಿಕ್ಷಣದ ಭಾಗವಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ಕೆಪಿಬಿ ಹಿಂದೂಜಾ ಕಾಲೇಜಿನ ವಾರ್ಷಿಕ ದಿನದ ಸಮಾರಂಭದಲ್ಲಿ ಮಾತನಾಡಿದ ಅವರು, "ಆರೋಗ್ಯ ಮತ್ತು ಶಿಕ್ಷಣ...

ಸೇನೆ ವಿರುದ್ಧ ಪೋಸ್ಟ್: ಶೆಹ್ಲಾ ರಶೀದ್ ಮೇಲಿನ ಪ್ರಕರಣ ಹಿಂಪಡೆಯಲು ಕೋರ್ಟ್ ಅಸ್ತು

ಭಾರತೀಯ ಸೇನೆಯು ಕಾಶ್ಮೀರದಲ್ಲಿ ಮನೆಗಳಿಗೆ ನುಗ್ಗಿ ಸ್ಥಳೀಯರ ಮೇಲೆ ಹಿಂಸೆ ಮಾಡುತ್ತಿದೆ ಎಂದು ಆರೋಪಿಸಿ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಶೋರಾ ಅವರು ಟ್ವೀಟ್ ಮಾಡಿದ್ದ ಕಾರಣಕ್ಕೆ ಅವರ ವಿರುದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ