ದೇಶ

BREAKING NEWS | ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ

ಬೆಂಗಳೂರಿನ 8 ತಿಂಗಳ ಮಗುವಿಗೆ ಎಚ್‌ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಆರೋಗ್ಯ ಇಲಾಖೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್...

ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ತಮ್ಮ ಪೋಷಕರು ಉಡುಗೊರೆ ರೂಪದಲ್ಲಿ (ಗಿಫ್ಟ್ ಡೀಡ್) ನೀಡಿದ ಆಸ್ತಿಯನ್ನು ಅನುಭವಿಸುವ ಹಕ್ಕು ಹೆತ್ತವರನ್ನು ಅವಗಣಿಸಿ, ಅವರ ಯೋಗಕ್ಷೇಮ ನೋಡಿಕೊಳ್ಳದೆ ಬಿಟ್ಟುಬಿಡುವ ಮಕ್ಕಳಿಗೆ ಇರುವುದಿಲ್ಲ. ಮಕ್ಕಳಿಂದ ಅವಗಣಿಸಲ್ಪಟ್ಟರೆ ಹೆತ್ತವರು ಆ ಗಿಫ್ಟ್ ಡೀಡ್‌ಗಳನ್ನು...

ಬಿಹಾರ| ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ

ಬಿಹಾರ ರಾಜಧಾನಿ ಪಾಟ್ನಾದ ಗಾಂಧಿ ಮೈದಾನದಲ್ಲಿ ವಿದ್ಯಾರ್ಥಿ ಪ್ರತಿಭಟನೆಯನ್ನು ಬೆಂಬಲಿಸಿ ಅನಿರ್ಧಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ನಸುಕಿನಲ್ಲಿ ಬಿಹಾರ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್...

ಪುಷ್ಪಾ 2 ಕಾಲ್ತುಳಿತ | ಆಸ್ಪತ್ರೆಯಲ್ಲಿ ಗಾಯಾಳು ಬಾಲಕನ ಭೇಟಿ; ಅಲ್ಲು ಅರ್ಜುನ್‌ಗೆ ಪೊಲೀಸ್‌ ನೋಟಿಸ್‌

ಇತ್ತೀಚೆಗೆ ಹೈದಾರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪಾ 2 ಶೋ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಗಾಯಗೊಂಡ ಬಾಲಕನನ್ನು ಸಿನಿಮಾ ನಟ ಅಲ್ಲು ಅರ್ಜುನ್ ಆಸ್ಪತ್ರೆಯಲ್ಲಿ ಭೇಟಿಯಾಗಲು ಮುಂದಾಗಿದ್ದರು. ಈ ಬೆನ್ನಲ್ಲೇ ಪೊಲೀಸರು ಅಲ್ಲು ಅರ್ಜುನ್‌ಗೆ...

ಕಾರಿಗೆ ಟ್ರಕ್ ಡಿಕ್ಕಿ | ಇಬ್ಬರು ಬಿಜೆಪಿ ನಾಯಕರ ಸಾವು; ಪೂರ್ವಯೋಜಿತ ಕೃತ್ಯ ಆರೋಪ

ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಸಾವನ್ನಪ್ಪಿರುವ ಘಟನೆ ಭಾನುವಾರ ಮುಂಜಾನೆ ಒಡಿಶಾದ ಸಂಬಲ್‌ಪುರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಿಜೆಪಿ ನಾಯಕರನ್ನು ದೇವೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಎಂದು...

ಮಧ್ಯಪ್ರದೇಶ | ಮನೆಯ ಶೌಚ ಗುಂಡಿಯಲ್ಲಿ ನಾಲ್ವರ ಮೃತದೇಹ ಪತ್ತೆ

ಮನೆಯೊಂದರ ಶೌಚ ಗುಂಡಿಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಸಿಂಗ್ರೌಲಿ ಜಿಲ್ಲೆಯ ಬದೋಖರ್ ಗ್ರಾಮದಲ್ಲಿರುವ ಹರಿಪ್ರಸಾದ್ ಪ್ರಜಾಪತಿ ಎಂಬವರ ನಿವಾಸದ ಹಿಂಬದಿಯಲ್ಲಿರುವ ಶೌಚ ಗುಂಡಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಪ್ರಜಾಪತಿ ಅವರ...

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್: ಕಕ್ಕಾಬಿಕ್ಕಿಯಾದ ಮೋದಿ; ವಿಡಿಯೋ ವೈರಲ್

ದೆಹಲಿ ವಿಧಾನಸಭಾ ಚುನಾವಣಾ ಅಬ್ಬರ ಹೆಚ್ಚಾಗಿದೆ. ಬಿಜೆಪಿ ಪರವಾಗಿ ಪ್ರಧಾನಿ ಮೋದಿ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಭಾನುವಾರ, ನಡೆದ ಚುನಾವಣಾ ಪ್ರಚಾರದಲ್ಲಿ ಮೋದಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮಾತನಾಡಲಾಗದೆ ಮೋದಿ ಕಕ್ಕಾಬಿಕ್ಕಿಯಾಗಿದ್ದಾರೆ....

ಜಾತಿ ದೌರ್ಜನ್ಯ | ಕಳ್ಳತನ ಶಂಕೆ; ದಲಿತ ಯುವಕರಿಗೆ ಚಪ್ಪಲಿ ಹಾರ ಹಾಕಿ ಹಲ್ಲೆ

ಮೇಕೆ ಕಳ್ಳತನ ಮಾಡಿದ್ದಾರೆಂದು ಶಂಕಿಸಿ ಇಬ್ಬರು ದಲಿತ ಯುವಕರಿಗೆ ಚಪ್ಪಲಿ ಹಾಕಿ ಹಾಕಿ, ಅಮಾನುಷವಾಗಿ ಥಳಿಸಿರುವ ಘಟನೆ ಒಡಿಶಾದ ಜಗತ್ ಸಿಂಗ್ ಪುರ ಜಿಲ್ಲೆಯಲ್ಲಿ ನಡೆದಿದೆ. ಜಗತ್ ಸಿಂಗ್ ಪುರ ಜಿಲ್ಲೆಯ ಬಿರಿಡಿ...

ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ನುಣುಪಾದ ರಸ್ತೆ ನಿರ್ಮಾಣ : ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಖಂಡನೆ

"ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿ ನಿರ್ಮಿಸಲಾಗುವುದು" ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ ರಮೇಶ್ ಬಿಧುರಿ ಭಾನುವಾರ...

ಗುಜರಾತ್ | ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರ ಸಾವು

ಗುಜರಾತ್‌ನ ಪೋರಬಂದರ್‌ನಲ್ಲಿ ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (ಕರಾವಳಿ ಪಡೆ) ಹೆಲಿಕಾಪ್ಟರ್ ಪತನಗೊಂಡಿದೆ. ಆ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಹೆಲಿಕಾಪ್ಟರ್ ಅನ್ನು ಅಡ್ವಾನ್ಸ್ಡ್...

ವಿಮಾನ ನಿಲ್ದಾಣಕ್ಕೆ ‘ಬೋರ್ಡಿಂಗ್ ಪಾಸ್‌’ಅನ್ನು ಬ್ಯಾನರ್‌ ರೀತಿ ತಂದ ಯುವಕ; ವಿಡಿಯೋ ವೈರಲ್

ಇತ್ತೀಚೆಗೆ ವಿಮಾನ ಅಪಘಾತಗಳು ಮತ್ತು ವಿಮಾನ ಪ್ರಯಾಣದ ವಿಳಂಬಗಳ ಸುದ್ದಿ ಹೆಚ್ಚಾಗಿ ವರದಿಯಾಗುತ್ತಿವೆ. ವಿಮಾನ ಅಪಘಾತಗಳು ಹೆಚ್ಚು ಆತಂಕವನ್ನು ಸೃಷ್ಟಿಸಿವೆ. ಇಂತಹ ಸಂದರ್ಭದಲ್ಲಿ ವಿಮಾನ ನಿಲ್ದಾಣವೊಂದರಲ್ಲಿ ಹಾಸ್ಯಾಸ್ಪದ ಘಟನೆಯೊಂದು ನಡೆದಿದ್ದು, ಘಟನೆ ವಿಡಿಯೋ...

ಪಾನಿಪುರಿ ವ್ಯಾಪಾರಿಗಳಿಗೂ ಜಿಎಸ್‌ಟಿ; ಕೇಂದ್ರದ ವಿರುದ್ಧ ಆಕ್ರೋಶ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಪಾಪ್‌ಕಾರ್ನ್‌ಗೂ ಶೇಕಡ 18 ಜಿಎಎಸ್‌ಟಿ ವಿಧಿಸಲಾಗುತ್ತದೆ ಎಂದು ಘೋಷಿಸಿದ್ದಾರೆ. ಈ ಮೂಲಕ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್‌ಗೆ ಒಳಗಾಗಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ