ದೇಶ

ಕಾವಡ್ ಯಾತ್ರೆ ವಿವಾದ | ಸುಪ್ರೀಂ ಕೋರ್ಟ್ ಕದ ತಟ್ಟಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಕಾವಡ್ ಯಾತ್ರೆಯ ಮಾರ್ಗದಲ್ಲಿರುವ ತಿನಿಸುಗಳ ಸ್ಟಾಲ್‌ಗಳ ಮಾಲೀಕರು ಸ್ಟಾಲ್‌ನಲ್ಲಿ ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂಬ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳ ಆದೇಶದ ವಿರುದ್ಧವಾಗಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ನಲ್ಲಿ...

ಉಮರ್ ಖಲೀದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ದೆಹಲಿ ಗಲಭೆಗಳ ಪಿತೂರಿ ಪ್ರಕರಣಗಳ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಲೀದ್‌ ಜಾಮೀನು ಅರ್ಜಿ ವಿಚಾರಣೆಯಿಂದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಅಮಿತ್‌ ವರ್ಮಾ ಹಿಂದೆ ಸರಿದಿದ್ದಾರೆ. ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ...

ಸಂಸತ್ತಿನ ಮೇಲೆ ದಾಳಿ: ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ಸಿಪಿಐಎಂ ಸಂಸದರಿಗೆ ಬೆದರಿಕೆ ಕರೆ

ಕೇರಳದ ಸಿಪಿಐಎಂ ರಾಜ್ಯಸಭಾ ಸಂಸದ ವಿ ಶಿವದಾಸನ್ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್‌ ಅವರಿಗೆ ಪತ್ರ ಬರೆದಿದ್ದು, ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ತಮಗೆ ಬೆದರಿಕೆ ಕರೆ...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ನೀತಿಯನ್ನು ಖಂಡಿಸಿದ್ದ ಫೋನ್‌ಪೇ ಸಿಇಒ ಮತ್ತು ಸಂಸ್ಥಾಪಕ ಸಮೀರ್ ನಿಗಮ್‌ ಭಾನುವಾರ, ಬೇಷರತ್‌ ಆಗಿ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಕಂಪನಿಗಳ ‘ಸಿ’ ಮತ್ತು...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ, ಕನ್ವರ್ ಯಾತ್ರೆಗೆ ಸಂಬಂಧಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶ ಸೇರಿದಂತೆ ವಿವಾದಾತ್ಮಕ ವಿಷಯಗಳನ್ನು...

ಬಾಂಗ್ಲಾದೇಶ ಹಿಂಸಾಚಾರ | ಬಾಂಗ್ಲಾ ನಿರಾಶ್ರಿತರಿಗೆ ಆಶ್ರಯ ನೀಡುತ್ತೇವೆ ಎಂದ ಮಮತಾ ಬ್ಯಾನರ್ಜಿ

ಬಾಂಗ್ಲಾದೇಶ ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಾಂಗ್ಲಾ ನಿರಾಶ್ರಿತರಿಗೆ ಆಶ್ರಯ ನೀಡುವುದಾಗಿ ಹೇಳಿದ್ದಾರೆ. ನೆರೆಯ ದೇಶದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ತಮ್ಮ ರಾಜ್ಯದ ಬಾಗಿಲುಗಳನ್ನು ತೆರೆದಿಡಲು ಮತ್ತು...

6 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ 1,267 ರೈತರ ಆತ್ಮಹತ್ಯೆ

ಕಳೆದ 6 ತಿಂಗಳಲ್ಲಿ ಮಹಾರಾಷ್ಟ್ರ ದಲ್ಲಿ 1267 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮರಾವತಿ ವಿಭಾಗದ ವಿದರ್ಭ ಪ್ರಾಂತ್ಯದಲ್ಲಿ 557 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ಅಂಕಿಅಂಶಗಳ ಪ್ರಕಾರ ಜನವರಿಯಿಂದ...

ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಜಿಂದಾಲ್ ಅಧಿಕಾರಿ ವಿರುದ್ಧ ಎಫ್‌ಐಆರ್

ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ಎಸಗಿರುವ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದಿದೆ. ಜಿಂದಾಲ್ ಕಂಪನಿಯ ಅಧಿಕಾರಿಯೊಬ್ಬರ ವಿರುದ್ಧ ಕೋಲ್ಕತ್ತಾದ ಏರ್‌ಪೋರ್ಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ...

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಿಸರ್ಜಿಸಿದ ಮಲ್ಲಿಕಾರ್ಜುನ ಖರ್ಗೆ

ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಿಸರ್ಜಿಸಿದ್ದಾರೆ. ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಪಿಸಿಸಿ,...

FACT CHECK | ತಾಯಿಯೋರ್ವಳು ತನ್ನ ಮಗನಿಗೆ ನಿರ್ದಯವಾಗಿ ಹೊಡೆಯುತ್ತಿರುವ ವಿಡಿಯೋ ಕರ್ನಾಟಕದ್ದಲ್ಲ; ಏನಿದು ಪ್ರಕರಣ?

ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ದಯವಾಗಿ ಹೊಡೆಯುತ್ತಿರುವ ದೃಶ್ಯ ವೈರಲಾಗುತ್ತಿದೆ. ವೈರಲಾಗಿರುವ ಈ ವಿಡಿಯೋದಲ್ಲಿ ತಾಯಿಯೋರ್ವಳು ತನ್ನ ಮಗನ ಎದೆಯ ಮೇಲೆ ಕುಳಿತು ಹಲ್ಲೆ ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ,...

ಉತ್ತರ ಪ್ರದೇಶದ ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ: ಸುಪ್ರೀಂನಲ್ಲಿ ಅರ್ಜಿ

ಕನ್ವರ್‌ ಯಾತ್ರೆ ಯುದ್ದಕ್ಕೂ ಇರುವ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಮೂರ್ತಿ ಹೃಷಿಕೇಶ್‌ ರಾಯ್‌ ನೇತೃತ್ವದ...

ಬಿಜೆಪಿ ನೇತೃತ್ವದ ಸರ್ಕಾರ ಹೆಚ್ಚು ಕಾಲ ಉಳಿಯದು: ಟಿಎಂಸಿ ರ್‍ಯಾಲಿಯಲ್ಲಿ ಅಖಿಲೇಶ್, ಮಮತಾ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಟಿಎಂಸಿ ರ್‍ಯಾಲಿಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಿಸಿದರು. ಟಿಎಂಸಿಯ...

ಈ ಹೊತ್ತಿನ ಪ್ರಮುಖ ಸುದ್ದಿ