ದೇಶ

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ

ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಸಂಸದರ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯು ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ನಡೆಯುತ್ತಿದ್ದು,...

ಛತ್ತೀಸ್‌ಗಢ | ದನ ಸಾಗಿಸುತ್ತಿದ್ದ ಇಬ್ಬರ ಮೃತದೇಹ ಪತ್ತೆ; ಗುಂಪು ಹತ್ಯೆ ಆರೋಪ

ದನಗಳನ್ನು ಸಾಗಿಸುತ್ತಿದ್ದ ಇಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಅವರ ಮೃತದೇಹಗಳ ಮೇಲೆ ಗಂಭೀರ ಗಾಯಗಳು ಕಂಡುಬಂದಿದ್ದು, ಅವರನ್ನು ಗುಂಪುಹತ್ಯೆ ಮಾಡಲಾಗಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ,...

ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಹೆಸರು ಅನುಮೋದಿಸಿದ ಕಾಂಗ್ರೆಸ್

"ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ" ಎಂದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ...

ಮೋದಿ 3.0 ಸರ್ಕಾರದಲ್ಲಿ ನಿತೀಶ್ ಪಕ್ಷಕ್ಕೆ 2 ಮಂತ್ರಿಗಿರಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸಂಪುಟದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಎರಡು ಖಾತೆಗಳನ್ನು ಪಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಇಬ್ಬರು ಹಿರಿಯ ನಾಯಕರಾದ...

ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝುಗೆ ಆಹ್ವಾನ

ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರಿಗೆ ಆಹ್ವಾನ ನೀಡಲಾಗಿದ್ದು, ಆಹ್ವಾನವನ್ನು ಮುಯಿಜ್ಜು ಅವರು ಸ್ವೀಕರಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ...

‘ಇಂಡಿಯಾ’ ಕೂಟವು ಸಂಸತ್ತಿನ ಒಳಗೆ-ಹೊರಗೆ ಒಗ್ಗಟ್ಟಾಗಿ ಕೆಲಸ ಮಾಡಬೇಕು: ಖರ್ಗೆ

ಲೋಕಸಭೆ ಚುನಾವಣೆಯ ಜನಾದೇಶವು 'ವಿಭಜನೆ ಮತ್ತು ದ್ವೇಷ ರಾಜಕೀಯ'ವನ್ನು ನಿರ್ಣಾಯಕವಾಗಿ ನಿರಾಕರಿಸಿದೆ. 'ಇಂಡಿಯಾ' ಮೈತ್ರಿಕೂಟವು ಸಂತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ. ದೆಹಲಿಯಲ್ಲಿ...

ಚುನಾವಣೆ | ಮೋದಿಗೆ ನೈತಿಕ, ರಾಜಕೀಯ, ವೈಯಕ್ತಿಕ ಸೋಲು – ಕರುಣಾಜನಕ ಪ್ರದರ್ಶನ; ಕಾಂಗ್ರೆಸ್ ಲೇವಡಿ

ಲೋಕಸಭೆ ಚುನಾವಣೆಯ ಜನಾದೇಶವು ಪ್ರಧಾನಿ ನರೇಂದ್ರ ಮೋದಿಯವರಿಗೆ 'ನೈತಿಕ, ರಾಜಕೀಯ ಮತ್ತು ವೈಯಕ್ತಿಕ' ಸೋಲನ್ನು ಕೊಟ್ಟಿದೆ. ಈಗ ಅವರ 'ಕರುಣಾಜನಕ' ಚುನಾವಣಾ ಕಾರ್ಯಕ್ಷಮತೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ. ಮಂಗಳವಾರ...

ಗೃಹಬಳಕೆ ವೆಚ್ಚ ಸಮೀಕ್ಷೆ 2022-23 | ಆಹಾರಕ್ಕಾಗಿ ಹೆಚ್ಚು ಖರ್ಚು – ಪೌಷ್ಟಿಕತೆಗಿಲ್ಲ ಒತ್ತು

ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಕುಟುಂಬಗಳು ತಮ್ಮ ಮಾಸಿಕ ವೆಚ್ಚದಲ್ಲಿ ಹೆಚ್ಚಿನ ಪಾಲನ್ನು ಆಹಾರಕ್ಕಾಗಿ ವೆಚ್ಚ ಮಾಡುತ್ತಿವೆ. ಅದರಲ್ಲೂ, ದಿನನಿತ್ಯ ಅತ್ಯಗತ್ಯವಾಗಿ ಬೇಕಿರುವ ಆಹಾರ ಪದಾರ್ಥಗಳಿಗೆ ಹೆಚ್ಚು ಖರ್ಚಾಗುತ್ತಿದೆ. ಹೆಚ್ಚು ಪೌಷ್ಟಿಕಾಂಶ...

ಮಣಿಪುರದಲ್ಲಿ ಮಕಾಡೆ ಮಲಗಿದ ಬಿಜೆಪಿ

2023ರ ಮೇ 3ರಂದು ಮಣಿಪುರ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ದಳ್ಳುರಿಗೆ ಭೌಗೋಳಿಕವಾಗಿ ಮತ್ತು ಮಾನಸಿಕವಾಗಿ ಇಡೀ ರಾಜ್ಯವೇ ಛಿದ್ರವಾಯಿತು. ಒಂದು ಕಡೆ ಹಿಂಸಾಚಾರದಿಂದ ನೆಲೆ ಕಳೆದುಕೊಂಡ 60,000 ನಿರಾಶ್ರಿತರು, ಮತ್ತೊಂದೆಡೆ ಇತ್ತೀಚಿನ ವರುಣಾರ್ಭಟಕ್ಕೆ...

ಗೋಹತ್ಯೆ ನಿಷೇಧ ಕಾಯ್ದೆ ಎಂಬ ‘ಅನರ್ಥ’ಕಾರಿ ಪ್ರಹಸನ

ಗೋವನ್ನು ಹೈನುಗಾರಿಕೋತ್ಪನ್ನಗಳ ಮೂಲ ಧಾತು ಎಂಬುದನ್ನು ಪರಿಗಣಿಸಿ, ಹೈನುಗಾರಿಕೋತ್ಪನ್ನಗಳ ಸಾಲಿಗೆ ಗೋಮಾಂಸವನ್ನೂ ಕಡ್ಡಾಯವಾಗಿ ಸೇರ್ಪಡೆ ಮಾಡಬೇಕು. ಗೋವಧೆಗಿರುವ ಎಲ್ಲ ನಿಷೇಧಗಳನ್ನೂ ತೆರವುಗೊಳಿಸಬೇಕು. ಉತ್ತರಪ್ರದೇಶ ಮತ್ತೊಮ್ಮೆ ಸುದ್ದಿಯಲ್ಲಿದೆ. ʼCow Beltʼ ಎಂದೇ ಕುಖ್ಯಾತವಾಗಿರುವ ಈ ರಾಜ್ಯದಲ್ಲಿ...

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ಚೆರುಕುರಿ ರಾಮೋಜಿ ರಾವ್ ಅವರು ಶನಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂಧಿಸನೆ, ಸಾವನ್ನಪ್ಪಿದ್ದಾರೆ. ರಾಮೋಜಿ ಅವರಿಗೆ 87 ವರ್ಷ...

ಸುಳ್ಳಾದ ಭವಿಷ್ಯ | ಇನ್ನು ಮುಂದೆ ಚುನಾವಣಾ ಸೀಟುಗಳನ್ನು ಊಹಿಸುವುದಿಲ್ಲ: ಪ್ರಶಾಂತ್ ಕಿಶೋರ್

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಶಾಸ್ತ್ರಜ್ಞ ಪ್ರಶಾಂತ್ ಕಿಶೋರ್, "ಬಿಜೆಪಿ 303 ಅಥವಾ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ. ಜೂನ್ 4ರಂದು ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ" ಎಂದು ಭವಿಷ್ಯ ನುಡಿದಿದ್ದರು. ಆದರೆ,...

ಈ ಹೊತ್ತಿನ ಪ್ರಮುಖ ಸುದ್ದಿ