ವಿಚಾರ

ವಚನ ಕಲ್ಯಾಣ | ಕಲ್ಯಾಣವಿಲ್ಲದ ಕಾರಣ ಕೈಲಾಸವಿಲ್ಲವೆನಗೆ, ಬಸವಾ!

ಕಲ್ಯಾಣವಿಲ್ಲ ಕೈಲಾಸವಿಲ್ಲ, ಬಸವಾ. ಕಲ್ಯಾಣವಿಲ್ಲದ ಕಾರಣ ಕೈಲಾಸವಿಲ್ಲವೆನಗೆ, ಬಸವಾ. ಆ ಕಲ್ಯಾಣ ಕೈಲಾಸವಾಯಿತ್ತು ಬಸವಾ. ಆ ಕಲ್ಯಾಣವಳಿದು ಕೈಲಾಸವಾದ ಬಳಿಕ, ಬಸವನ ಮೂರ್ತಿಯಿಲ್ಲ. ಬಸವನ ಮೂರ್ತಿಯನರಿಯದ ಕಾರಣ ಕೈಲಾಸವಿಲ್ಲ ಕಲ್ಯಾಣವಿಲ್ಲವಯ್ಯಾ, ಸಂಗಯ್ಯಾ. ಬಸವಣ್ಣನವರ ಧರ್ಮಪತ್ನಿ...

ವಚನ ಕಲ್ಯಾಣ | ಭಕ್ತಿಯೆಂಬ ಪೃಥ್ವಿಯಲ್ಲಿ ಗುರೂಪದೇಶವೆಂಬ ನೇಗಿಲಂ ಪಿಡಿದು

ಭಕ್ತಿಯೆಂಬ ಪೃಥ್ವಿಯಲ್ಲಿ ಗುರೂಪದೇಶವೆಂಬ ನೇಗಿಲಂ ಪಿಡಿದು,ಅಂತಃಕರಣ ಚತುಷ್ಟಯವೆಂಬ ಪಶುವಂ ಕಟ್ಟಿಓಂಕಾರನಾದವೆಂಬ ಸೆಳೆಕೋಲಂ ಪಿಡಿದುಉತ್ತರ ಕ್ರೀಯೆಂಬ ಸಾಲನೆತ್ತಿದುಃಕರ್ಮವೆಂಬ ಕಂಟಕದ ಗುಲ್ಮವಂ ಕಡಿದುಅರುಹೆಂಬ ರವಿಯ ಕಿರಣದಿಂದ ಒಣಗಿಸಿಅವಂ ಕೂಡಲೊಟ್ಟಿ, ಜ್ಞಾನಾಗ್ನಿಯೆಂಬ ಅಗ್ನಿಯಿಂದ ಸುಟ್ಟುರುಹಿಆ ಹೊಲನಂ ಹಸಮಾಡಿ,...

ವಚನ ಕಲ್ಯಾಣ | ಕೊಲ್ಲದಿರ್ಪುದೆ ಧರ್ಮ

ಲಿಂಗದೇವನೆ ಕರ್ತ, ಶಿವಭಕ್ತನೆ ಶ್ರೇಷ್ಠ.ಕೊಲ್ಲದಿರ್ಪುದೆ ಧರ್ಮ. ಅಧರ್ಮದಿಂದ ಬಂದುದನೊಲ್ಲದಿರ್ಪುದೆ ನೇಮ.ಅಳುಪಿಲ್ಲದಿರ್ಪುದೆ ವ್ರತ. ಇದೇ ಸತ್ಪಥ, ಉಳಿದುದೆಲ್ಲ ಮಿಥ್ಯವೆಂದೆ ಕಾಣಾ, ದೇವರಾಯ ಸೊಡ್ಡಳಾ.” 12ನೇ ಶತಮಾನದ ಶರಣ ಚಳವಳಿಯ 770 ಅಮರ ಗಣಂಗಳಲ್ಲಿ ವಚನಕಾರ ಸೊಡ್ಡಳ...

ವಚನ ಕಲ್ಯಾಣ | ಸತ್ಯಶುದ್ಧವಿಲ್ಲದುದು ಕಾಯಕವಲ್ಲ

ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ;ಸತ್ಯಶುದ್ಧವಿಲ್ಲದುದು ಕಾಯಕವಲ್ಲ;ಆಸೆಯೆಂಬುದು ಭವದ ಬೀಜ;ನಿರಾಸೆಯೆಂಬುದು ನಿತ್ಯಮುಕ್ತಿ.ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ ವಚನ ಚಳವಳಿಯಲ್ಲಿ ಪುರುಷರಷ್ಟೇ ಮಹಿಳೆಯರೂ ಸಾಮಾಜಿಕ ಪರಿವರ್ತನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸ್ತ್ರೀ ಸಮಾನತೆಗೆ ಹೆಚ್ಚು ಪ್ರಾಶಸ್ತ್ಯ ನೀಡಿದ ಕಾರಣಕ್ಕೆ...

ವಚನ ಕಲ್ಯಾಣ | ಸುಮ್ಮನೇಕೆ ದಿನಕಳೆವಿರಿ, ಸುಮ್ಮನೇಕೆ ಹೊತ್ತುಗಳೆವಿರಿ?

ಸುಮ್ಮನೇಕೆ ದಿನಕಳೆವಿರಿ, ಸುಮ್ಮನೇಕೆ ಹೊತ್ತುಗಳೆವಿರಿ? ಸುಮ್ಮನೇಕೆ ಹೊತ್ತಗಳೆವಿರಿ ಸ್ವಾಮಿಗಳಿರಾ? ಮಾಡ ಬನ್ನಿ ದಿನ ಶಿವರಾತ್ರಿಯ, ಕೇಳ ಬನ್ನಿ ಶಿವಾನುಭವವ, ನೋಡ ಬನ್ನಿ ಅಜಗಣ್ಣನಿರವ ಬಸವಣ್ಣತಂದೆ. ಜೀವನ ಎಂದರೆ ದಿನಗಳನ್ನು ಕಳೆಯುವುದಷ್ಟೇ ಅಲ್ಲ. ಪ್ರತಿದಿನಕ್ಕೂ ಒಂದು...

ವಚನ ಕಲ್ಯಾಣ | ಒಬ್ಬರ ಮನವ ಘಾತವ ಮಾಡಿ, ಗಂಗೆಯ ಮುಳುಗಿದಡೇನಾಗುವುದಯ್ಯಾ?

ಒಬ್ಬರ ಮನವ ನೋಯಿಸಿ, ಒಬ್ಬರ ಮನವ ಘಾತವ ಮಾಡಿ, ಗಂಗೆಯ ಮುಳುಗಿದಡೇನಾಗುವುದಯ್ಯಾ? ಚಂದ್ರನು ಗಂಗೆಯ ತಡಿಯಲ್ಲಿದ್ದಡೇನು? ಕಲಂಕ ಬಿಡದಾಯಿತ್ತಯ್ಯಾ. ಅದು ಕಾರಣ, ಮನವ ನೋಯಿಸಿದವನೆ, ಒಬ್ಬರ ಘಾತವ ಮಾಡಿದವನೆ, ಪರಮಪಾವನ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ. 12ನೇ...

ಧರೆಯ ಗರ್ಭದಿಂದ ಸಂವಿಧಾನದವರೆಗೆ: ಅಸ್ಪೃಶ್ಯತೆಯ ಬೇರು ಸವರಲು ಬಸವ-ಭೀಮ ಮಾರ್ಗ

 ‘ಜೈ ಭೀಮ್’ ಎಂಬುದು ಕೇವಲ ಒಂದು ಘೋಷಣೆಯಲ್ಲ, ಅದು ನಮ್ಮೊಳಗಿನ ಕ್ರಾಂತಿಯ ಮುನ್ನುಡಿ! ನಮ್ಮೊಳಗೆ ಭುಗಿಲೇಳಬೇಕಾದ ಮಾನಸಿಕ ಸ್ವಾತಂತ್ರ್ಯದ ಅಲೆ. ನೀಲಿ ಬಾನಿನ ಕೆಳಗೆ ನಾವೆಲ್ಲರೂ ಸಮಾನರು ಎಂದು ಸಾರುವ ಧೀಶಕ್ತಿಯ ಬೆಳಕು. ನಿನ್ನೆ...

ಸಂಕಲನವೆಂಬ ಮಾಯೆ: ಘನೀಭವಿಸಿದ ಕಾಲ ಮತ್ತು ಚಲಿಸುವ ಬಿಂಬ

ಸಂಕಲನವೆಂದರೆ ಕೇವಲ ಕಾಲವನ್ನು ಕತ್ತರಿಸಿ ಜೋಡಿಸುವುದಲ್ಲ, ಅದು ದೃಶ್ಯಗಳಿಗೆ ಜೀವ ತುಂಬುವ ಒಂದು ಆಧ್ಯಾತ್ಮಿಕ ಕ್ರಿಯೆ. ಪರದೆಯ ಮೇಲೆ ಕಣ್ಣಿಗೆ ಕಾಣಿಸದ ಸಂಗತಿಯನ್ನೂ ಕೇವಲ ಎರಡು ಶಾಟ್‌ಗಳ ನಡುವಿನ ಅಂತರ, ಲಯ ಮತ್ತು...

ವಚನ ಕಲ್ಯಾಣ | ಸಮತೆಯೆಂಬುದೆ ಯೋಗದಾಗು ನೋಡಾ

ಅರಿವೆ ಗುರು, ಆಚಾರವೆ ಶಿಷ್ಯ, ಜ್ಞಾನವೆ ಲಿಂಗ,ಪರಿಣಾಮವೆ ತಪ, ಸಮತೆಯೆಂಬುದೆ ಯೋಗದಾಗು ನೋಡಾ.ಈಸುವನರಿಯದೆ ವೇಷವ ಧರಿಸಿ,ಲೋಚು ಬೋಳಾದಡೆ ಮಹಾಲಿಂಗ ಕಲ್ಲೇಶ್ವರದೇವರು ನಗುವರು. ವಚನ ಚಳವಳಿ ಕೇವಲ ಧಾರ್ಮಿಕ ಸುಧಾರಣೆ ಚಳವಳಿಯಾಗಿರಲಿಲ್ಲ. ಅದು ಮನುಷ್ಯನ ಅಂತರಂಗವನ್ನು...

ವಚನ ಕಲ್ಯಾಣ | ಮಾಡುವ ಮಾಟವಿಲ್ಲದೆ ಮಾತಿಂಗೆ ಮಾತಾಡುವುದು ಅದೇತರ ಪೂಜೆ?

ಅವಾವ ಕಾಯಕದಲ್ಲಿ ಬಂದಡೂ ಭಾವಶುದ್ಧವಾಗಿ ಗುರು-ಲಿಂಗ-ಜಂಗಮಕ್ಕೆ ಮಾಡುವುದೇ ಶಿವಪೂಜೆ. ಮಾಡುವ ಮಾಟವಿಲ್ಲದೆ ಮಾತಿಂಗೆ ಮಾತಾಡುವುದು ಅದೇತರ ಪೂಜೆ? ಅದು ಚಂದೇಶ್ವರಲಿಂಗಕ್ಕೆ ಒಪ್ಪವಲ್ಲ, ಮಡಿವಾಳಯ್ಯಾ. 12ನೇ ಶತಮಾನದ ಶರಣ ಚಳವಳಿಯ ಬಹುದೊಡ್ಡ ಕೊಡುಗೆ ಎಂದರೆ ಕಾಯಕಕ್ಕೆ...

ವಚನ ಕಲ್ಯಾಣ | ದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ

ಕಾಲುಗಳೆಂಬುವು ಗಾಲಿ ಕಂಡಯ್ಯಾದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ.ಬಂಡಿಯ ಹೊಡೆವರೈವರು ಮಾನಿಸರು,ಒಬ್ಬರಿಗೊಬ್ಬರು ಸಮವಿಲ್ಲಯ್ಯ.ಆದರಿಚ್ಛೆಯನರಿದು ಹೊಡೆಯದರ‍್ದಡೆ,ಅದರಚ್ಚು ಮುರಿಯಿತ್ತು, ಗುಹೇಶ್ವರಾ ಕಲ್ಯಾಣ ನೆಲದಲ್ಲಿ ಬಸವಣ್ಣನವರ ನೇತ್ರತ್ವದಲ್ಲಿ ರಚನೆಯಾದ ಅನುಭವ ಮಂಟಪ ಎಂಬುದು ಸಾಮಾಜಿಕ ಬದಲಾವಣೆಯ ಕೇಂದ್ರ. ಅನುಭವ ಮಂಟಪ...

ವಚನ ಕಲ್ಯಾಣ | ಹದತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ!

ಹದತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ.ವ್ರತಹೀನನ ನೆರೆಯೆ ನರಕವಲ್ಲದೆ ಮುಕ್ತಿಯಿಲ್ಲ.ಅರಿಯದುದು ಹೋಗಲಿ, ಅರಿದು ಬೆರೆದೆನಾದಡೆ,ಕಾದ ಕತ್ತಿಯಲ್ಲಿ ಕಿವಿಯ ಕೊಯ್ವರಯ್ಯಾ.ಒಲ್ಲೆ ಬಲ್ಲೆನಾಗಿ, ನಿಮ್ಮಾಣೆ ನಿರ್ಲಜ್ಜೇಶ್ವರಾ ಕೊಟ್ಟಣದ ಸೋಮವ್ವ 12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣೆ ಎಂದು ಚರಿತ್ರೆಕಾರರು...

ಈ ಹೊತ್ತಿನ ಪ್ರಮುಖ ಸುದ್ದಿ