ರಾಜ್ಯ

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ಕೂಡ ವಿವಾದದ ಹೇಳಿಕೆ ನೀಡಿದ್ದಾರೆ. “ಫ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು ನಷ್ಟ ಆಗಿದ್ದು ರಾಜ್ಯಕ್ಕೆ. ಈ ಬಾರಿ ಮತ್ತೆ ಅಂತಹ ತಪ್ಪಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು ಈವರೆಗೂ ನಮ್ಮ ಪರವಾಗಿ ಪ್ರಚಾರಕ್ಕೆ ಬಂದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್ ಬೆಂಗಳೂರು ಹೋಟೆಲ್‌ ಸಂಘಕ್ಕೆ ಕರ್ನಾಟಕ ಹೈಕೋರ್ಟ್‌ ಅವಕಾಶ ನೀಡಿ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಶುಕ್ರವಾರ ಜನರು ಮತದಾನ ಮಾಡಿದ ಗುರುತು...

ನೇಹಾ ಕೊಲೆ ಪ್ರಕರಣ | ಸಿಐಡಿ ತನಿಖೆ ಆರಂಭ; ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ. ಮಂಗಳವಾರದಿಂದ ತನಿಖೆ...

ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26ರಂದು ಮತದಾನ ಮಾಡಲು ಜನರು ತಮ್ಮ ತಮ್ಮ ಊರಿನತ್ತ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ ಮಾಲೀಕರು ಪ್ರಯಾಣ ದರ ಏರಿಕೆ...

ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ ಪಿ ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ

ವಿಧಾನ ಪರಿಷತ್ ಸ್ಥಾನಕ್ಕೆ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕೆ ಪಿ ನಂಜುಂಡಿ ಬುಧವಾರ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್...

ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ಕಾರ್ಯ ನಡೆಸಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆಯಾಗಿದೆ. ಶಂಕರಪುರದಲ್ಲಿ...

ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಏ.23ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಮೊದಲಿಗೆ ಮರದ ಪೀಸ್‌ಗಳನ್ನು ಇಟ್ಟಿದ್ದ ಟಿಂಬರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ, ಲೋವಬಲ್​...

ಸುಳ್ಳು ಹೇಳುವವರನ್ನು ತಿರಸ್ಕರಿಸಿ, ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನ ಮಾಡಿ: ಸಿಎಂ ಸಿದ್ದರಾಮಯ್ಯ

ಸುಳ್ಳು ಹೇಳುವವರನ್ನು ತಿರಸ್ಕರಿಸಿ, ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನವನ್ನು ಜನತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ...

ಬೆಂಗಳೂರು ಉತ್ತರ | ಕಾಂಗ್ರೆಸ್‌ ಪರ ಒಲವೂ ಇದೆ; “ಗೃಹಲಕ್ಷ್ಮಿ ಹಣ ಬರ್ತಿದೆ, ಆದರೆ ವೋಟ್‌ ಮಾತ್ರ ಮೋದಿಗೆ” ಅನ್ನೋರೂ ಇದ್ದಾರೆ

ಕೆಲವರು ನಾವು ಮೋದಿ ಪರ, ಆದರೂ  ಈ ಬಾರಿ ರಾಜೀವ್ ಗೌಡರ ಪರವಾಗಿ ಇರ್ತೇವೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಏನೇ ಆದರೂ ಮೋದಿಯೇ ಬರುವುದು, ಅವರೇ ಬರಬೇಕು ಎನ್ನುತ್ತಾರೆ. ಅದಕ್ಕೆ ಕಾರಣ...

ಶ್ರೀಮಂತರ ರೂ. 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಯಾರ ಪರ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ ರೂ.16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು....

ಈ ಹೊತ್ತಿನ ಪ್ರಮುಖ ಸುದ್ದಿ