ರಾಜ್ಯ

ಬೆಂಗಳೂರು | ಆಸ್ತಿಯಲ್ಲಿ ಪಾಲು ಕೇಳಿದ ಮಗನ ಮೇಲೆ ಆ್ಯಸಿಡ್ ಎರಚಿದ ತಂದೆ

ಆಸ್ತಿಯಲ್ಲಿ ಪಾಲು ನೀಡುವಂತೆ ಕೇಳಿದ ಮಗನ ಮೇಲೆ ತಂದೆಯೊಬ್ಬ (ನಿವೃತ್ತ ಪೊಲೀಸ್ ಅಧಿಕಾರಿ) ಆ್ಯಸಿಡ್ ಎರಚಿದ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಲ್ಲಸಂದ್ರದಲ್ಲಿ ನಡೆದಿದೆ. ಆರೋಪಿ ತಂದೆ ನಿವೃತ್ತ ಪಿಎಸ್‌ಐ ರಾಮಕೃಷ್ಣಯ್ಯ, ಅವರ ಹಿರಿಯ...

ಮೆಟ್ರೋ ಕಾಮಗಾರಿ | ಏಪ್ರಿಲ್ 1ರಿಂದ ‘ಒಂದು ವರ್ಷ’ ಈ ರಸ್ತೆಯಲ್ಲಿ ಸಂಚಾರ ಬಂದ್

ಬೆಂಗಳೂರಿನ ಲಕ್ಕಸಂದ್ರ ಸುರಂಗ ಮಾರ್ಗ, ಮೆಟ್ರೋ ನಿಲ್ದಾಣದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ಬನ್ನೇರುಘಟ್ಟ ಮುಖ್ಯರಸ್ತೆಯ 'ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌' ನಡುವೆ ವಾಹನ ಸಂಚಾರವನ್ನು ಏಪ್ರಿಲ್ 1ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು...

ಸೈಬರ್ ವಂಚನೆ | ಭಾರತದವರನ್ನು ಬಳಸಿಕೊಂಡು ಭಾರತೀಯರಿಗೆ ಮೋಸ: ಕಾಂಬೋಡಿಯಾದಲ್ಲಿ ಸಿಕ್ಕಿಬಿದ್ದಿರುವ 5,000 ಭಾರತೀಯರು

ಭಾರತದ ಜನರನ್ನು ಬಳಸಿಕೊಂಡು ಭಾರತೀಯರಿಗೆ ಮೋಸ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಹೌದು, ಕಳೆದ ಆರು ತಿಂಗಳಿನಲ್ಲಿ 5000 ಭಾರತೀಯರನ್ನು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡು ಸೈಬರ್‌ ವಂಚನೆ ಜಾಲ ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಡೇಟಾ...

ಶೋಭಾ ಕರಂದ್ಲಾಜೆಗೆ ಯಾಕೆ ಇ.ಡಿ ನೋಟಿಸ್ ಕೊಟ್ಟಿಲ್ಲ: ರಮೇಶ್‌ ಬಾಬು ಪ್ರಶ್ನೆ

ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಯಾಕೆ ಇಡಿ ನೋಟಿಸ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಮೇಶ್‌ ಬಾಬು ಪ್ರಶ್ನಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ...

ಕಾನೂನು ಗೌರವಿಸದ ಪೊಲೀಸ್ ಅಧಿಕಾರಿಗೆ ಸಹಾನುಭೂತಿ ಇಲ್ಲ: ಹೈಕೋರ್ಟ್

ನ್ಯಾಯಾಲಯ ನೀಡಿದ ಆದೇಶವನ್ನು ಗೌರವಿಸದೆ, ಆರೋಪಿಗೆ ನೀಡಲಾದ ಜಾಮೀನಿನ ಪ್ರತಿ ಹರಿದು, ನ್ಯಾಯಧೀಶರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಪೊಲೀಸ್ ಅಧಿಕಾರಿಗೆ ನ್ಯಾಯಾಲಯದ ಸಹಾನುಭೂತಿ ಇಲ್ಲ. ಇನ್ಸ್‌ಪೆಕ್ಟರ್‌...

ನಿರ್ಮಲಾ ಸೀತಾರಾಮನ್‌ ವಿರುದ್ಧ ದೂರು ದಾಖಲು; ಚುನಾವಣಾ ಬಾಂಡ್‌, ಐಟಿ, ಇಡಿ ದುರುಪಯೋಗದ ಆರೋಪ

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಕ್ರಿಮಿನಲ್‌ ದೂರು ನೀಡಿದ್ದಾರೆ. ಐಟಿ, ಇಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಗಳನ್ನು ಬೆದರಿಸಿ ಎಲೆಕ್ಟೋರಲ್‌ ಬಾಂಡ್‌...

‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬುದು ಗೊತ್ತಾಗಿ ಬಿಜೆಪಿಯಿಂದ ಎಲ್ಲರಿಗೂ ಕಿರುಕುಳ: ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ...

ವಿಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ: ಗೃಹ ಸಚಿವ ಪರಮೇಶ್ವರ್‌

ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಸದಾಶಿವನಗರದ ತಮ್ಮ ನಿವಾಸದ ಬಳಿ...

‘ತೆರಿಗೆ ಭಯೋತ್ಪಾದನೆ’ಯಿಂದ ಕಾಂಗ್ರೆಸ್ ಮಣಿಸಬಹುದೆಂಬುದು ಬಿಜೆಪಿಯ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

'ತೆರಿಗೆ ಭಯೋತ್ಪಾದನೆ'ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು...

ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ: ಬೆಂಬಲ ಕೋರಿ ‘ಜಾಗೃತ ಕರ್ನಾಟಕ’ಕ್ಕೆ ಪತ್ರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಹಾಗೂ ಮೋದಿ ಸರ್ಕಾರದ ದುಷ್ಕೃತ್ಯಗಳನ್ನು ವಿರೋಧಿಸಿ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರಭಟನೆ ನಡೆಸಲಿದ್ದಾರೆ....

ಬೆಂಗಳೂರು | 20ಕ್ಕೂ ಹೆಚ್ಚು ಬಿಲ್ಡರ್‌ಗಳ ಮನೆ ಮೇಲೆ ಐಟಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್‌ಗಳ ಮನೆಗೆ ಆದಾಯ ತೆರಿಗೆ ಅಧಿಕಾರಿಗಳು ಮಾರ್ಚ್‌ 30ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಹಲವು ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ...

ಬಾಕಿ ಇರಿಸಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರದ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್: ಕಗ್ಗಂಟಾದ ಕೋಲಾರ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿಸಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೋಲಾರ...

ಈ ಹೊತ್ತಿನ ಪ್ರಮುಖ ಸುದ್ದಿ