ರಾಜ್ಯ

ಬೆಂಗಳೂರು | ಮೂರು ವರ್ಷಗಳ ಬಳಿಕ ಏಪ್ರಿಲ್‌ನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು

ಬೆಂಗಳೂರಿನಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಮೂರು ವರ್ಷಗಳ ಬಳಿಕ ನಗರದಲ್ಲಿ ಗರಿಷ್ಠ ಮಟ್ಟವನ್ನು ತಲುಪಿದ್ದು, ಮಂಗಳವಾರ ಬರೋಬ್ಬರಿ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. 2021ರ ಏಪ್ರಿಲ್ 1ರಲ್ಲಿ...

ಪಕ್ಷೇತರವಾಗಿ ಸ್ಪರ್ಧಿಸಲ್ಲ, ಮೋದಿ ಮಾತಿಗೆ ಗೌರವ ಕೊಟ್ಟು ಬಿಜೆಪಿ ಸೇರುವೆ: ಸುಮಲತಾ ಅಂಬರೀಶ್‌ ಸ್ಪಷ್ಟನೆ

ಲೋಕಸಭೆ ಚುನಾವಣೆಯ ಕುರಿತಂತೆ ತಮ್ಮ ನಿರ್ಧಾರವನ್ನು ಬುಧವಾರ ಪ್ರಕಟಿಸುವುದಾಗಿ ಘೋಷಿಸಿದ್ದ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್‌ ಅವರು ಚುನಾವಣಾ ಕಣದಿಂದ ದೂರ ಉಳಿದು, ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಮಂಡ್ಯದ...

ನಾನು ರಾಜೀನಾಮೆ ಕೊಡಲು ಸಿದ್ಧ, ಅಮಿತ್‌ ಶಾ ಕೊಡುತ್ತಾರಾ: ಸಿದ್ದರಾಮಯ್ಯ ಸವಾಲು

"ದೇಶದ ಗೃಹ ಸಚಿವ ಅಮಿತ್‌ ಶಾ ಸುಳ್ಳು ಹೇಳುವುದಕ್ಕೂ ಒಂದು ಮಿತಿ ಬೇಡವೇ? ಸತ್ಯದ ತಲೆ ಮೇಲೆ ಒಡೆದಂತೆ ಸುಳ್ಳು ಹೇಳುತ್ತಾರೆ. ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿರುವುದು ಸುಳ್ಳಾದರೆ...

ನನಗೂ ಯಾರ ಅವಶ್ಯಕತೆಯೂ ಇಲ್ಲ; ಡಿಕೆಶಿಗೆ ಸಂಸದೆ ಸುಮಲತಾ ತಿರುಗೇಟು

ನನ್ನ ಅವಶ್ಯಕತೆ ಕಾಂಗ್ರೆಸ್‌ ಅವರಿಗೆ ಇಲ್ಲ ಎಂದು ಹೇಳಿದ್ದಾರೆ. ನನಗೂ ಯಾರ ಅವಶ್ಯಕತೆಯೂ ಇಲ್ಲ ಎಂದು ಮಂಡ್ಯದ ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು. ಮಂಡ್ಯಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಯಾರು ಕುಂಬಳಕಾಯಿ...

ಅಮಿತ್ ಶಾ ಓರ್ವ ಮಹಾನ್ ಸುಳ್ಳುಗಾರ: ಬರ ಪರಿಹಾರದ ಕುರಿತು ಗೃಹ ಸಚಿವರ ಹೇಳಿಕೆ ಖಂಡಿಸಿದ ಸಿಎಂ

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರ ಪರಿಹಾರದ ವಿಚಾರವನ್ನು ಪ್ರಸ್ತಾಪಿಸಿ, "ಕರ್ನಾಟಕ ಸರ್ಕಾರ ಬರ ಪರಿಹಾರಕ್ಕೆ ಮನವಿ ಸಲ್ಲಿಸಲು ಮೂರು ತಿಂಗಳು ತಡ ಮಾಡಿದ...

ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

"ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ನೇರ ಎಚ್ಚರಿಸಿದರು. ಮೈಸೂರಿನ ಜಿಲ್ಲಾ...

ಕೆಪಿಸಿಸಿ ಕಚೇರಿಯಲ್ಲಿ ‘ಇಂಡಿಯಾ’ ಮಿತ್ರಪಕ್ಷಗಳ ಮೊದಲ ಸಭೆ: ’28 ಕ್ಷೇತ್ರದಲ್ಲೂ ಅನುಕೂಲವಾಗಲಿದೆ’ ಎಂದ ಡಿಕೆಶಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ 'ಇಂಡಿಯಾ' ಮಹಾ ಮೈತ್ರಿಕೂಟದ ಮೊದಲ ಸಮನ್ವಯ ಸಭೆಯು ನಡೆಯಿತು. ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂಡಿಯಾ (INDIA) ಮೈತ್ರಿಕೂಟದ ಅಂಗಪಕ್ಷಗಳ ಕರ್ನಾಟಕ ಘಟಕದ ಮುಖಂಡರ...

ನಿಮ್ಮ ನಡೆಯೇ ನನ್ನದೂ ಆಗಿರಲಿದೆ: ಕುತೂಹಲ ಸೃಷ್ಟಿಸಿದ ಸಂಸದೆ ಸುಮಲತಾ ಫೇಸ್‌ಬುಕ್ ಪೋಸ್ಟ್‌

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದೆ ಅತಂತ್ರವಾಗಿರುವ ಸಂಸದೆ ಸುಮಲತಾ ಅಂಬರೀಶ್, ತಮ್ಮ ಮುಂದಿನ ನಿರ್ಧಾರವನ್ನು ಏಪ್ರಿಲ್ 3ರಂದು ಬೆಂಬಲಿಗರ ಸಭೆ ನಡೆಸಿದ ಬಳಿಕ ಘೋಷಿಸುವುದಾಗಿ ಹೇಳಿದ್ದರು. ಈ ನಡುವೆಯೇ ಇಂದು(ಏಪ್ರಿಲ್...

ಪ್ರಲ್ಹಾದ್‌ ಜೋಶಿ ವಿರುದ್ಧ ಹೋರಾಟ ಆರಂಭ; ಜಯ ಸಿಗೋವರೆಗೂ ಮಾಲೆ ಹಾಕಲ್ಲ: ದಿಂಗಾಲೇಶ್ವರ ಶ್ರೀ ಶಪಥ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ವಿರುದ್ಧ ಹೋರಾಟ ಆರಂಭಿಸಿದ್ದೇನೆ. ನ್ಯಾಯ ಸಿಗುವವರೆಗೂ ನಾನು ಕೊರಳಲ್ಲಿ ಭಕ್ತರಿಂದ ಮಾಲೆ‌ ಹಾಕಿಸಿಕೊಳ್ಳುವುದಿಲ್ಲ ಎಂದು ದಿಂಗಾಲೇಶ್ವರ ಶ್ರೀಗಳು ಶಪಥ ಮಾಡಿದ್ದಾರೆ. ಧಾರವಾಡದ ಸೇವಾಲಯದಲ್ಲಿ ಮಂಗಳವಾರ ನಡೆದ ಭಕ್ತರ...

ಗೆಲ್ಲಲ್ಲ ಎಂದು ಗೊತ್ತಿದ್ದೇ ಬಿಜೆಪಿ 12 ಹಾಲಿ ಸಂಸದರನ್ನು ಬದಲಾಯಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಇಡೀ ದೇಶದಲ್ಲೇ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರಿಗೆ ತಾವು ಗೆಲ್ಲುವುದಿಲ್ಲ ಎನ್ನುವುದು ಅರ್ಥವಾಗಿದೆ. ಇದಕ್ಕಾಗಿಯೇ 12 ಹಾಲಿ ಸಂಸದರನ್ನು ಬದಲಾಯಿಸಿದ್ದಾರೆ. ಆಪರೇಷನ್ ಕಮಲ ಮಾಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದವರ ಜತೆಗೆ...

ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ: ಸಿದ್ದರಾಮಯ್ಯ ಪ್ರಶ್ನೆ

ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ...

ನನ್ನ ಸರ್ಕಾರದ ಅವಧಿ ನಾಲ್ಕು ವರ್ಷವಿದೆ, ಮುಂದೆ ನಾನು ಚುನಾವಣೆ ನಿಲ್ಲಲ್ಲ: ಸಿದ್ದರಾಮಯ್ಯ

ನನ್ನ ಸರ್ಕಾರದ ಅವಧಿಯೇ ನಾಲ್ಕು ವರ್ಷವಿದೆ. ನನ್ನ 82 ನೇ ವಯಸ್ಸಿಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷವಾಗುತ್ತದೆ. ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಈ ಬಗ್ಗೆ ಯಾವುದೇ ರೀತಿಯ ಆತಂಕವಿಲ್ಲ...

ಈ ಹೊತ್ತಿನ ಪ್ರಮುಖ ಸುದ್ದಿ