ರಾಜ್ಯ

ಬೆಂಗಳೂರು | ಇಬ್ಬರು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ದೂರು ದಾಖಲು

ಒಂದೇ ದಿನ ಇಬ್ಬರು ನ್ಯಾಯಮೂರ್ತಿಗಳಿಗೆ ಸೈಬರ್‌ ವಂಚಕ ಗುಂಪೊಂದು ಬೆದರಿಕೆ ಕರೆ ಮಾಡಿ, ಹಣ ವಸೂಲಿ ಯತ್ನಿಸಿದೆ ಎಂದು ವರದಯಾಗಿದೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪೊಲೀಸರ...

ಬೆಂಗಳೂರು | ಕ್ಷಿಪ್ರ ಕಾರ್ಯಾಚರಣೆ; ಕಾವೇರಿ ನೀರು ಸರಬರಾಜಿನಲ್ಲಿ ಎದುರಾಗಿದ್ದ ಸಮಸ್ಯೆ ಸರಿಪಡಿಸಿದ ಜಲಮಂಡಳಿ

ಏಕಾಏಕಿ ಬೀಸಿದ ಗಾಳಿಗೆ ಕಾವೇರಿ ಪೈಪ್‌ಲೈನ್‌ನಲ್ಲಿ ಜೊಂಡು ಸಿಕ್ಕಿಕೊಂಡು ನೀರು ಹರಿವಿನಲ್ಲಿ ತೊಂದರೆ 10 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯ ವೇಳೆವರೆಗೆ ಕಾರ್ಯಾಚರಣೆ ನಡೆಸಿದ ಜಲಮಂಡಳಿ ನೀರಿನ ಕೊರತೆಯ ಬೆನ್ನಲ್ಲೇ, ನಾಲೆಗಳ...

ಬೆಂಗಳೂರು | ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರ ಪೈಕಿ ಹೆಚ್ಚು ಪುರುಷರೇ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಅಂದರೆ, 2023ರಲ್ಲಿ 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 913 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪುರುಷರೇ ಅಧಿಕವಾಗಿದ್ದಾರೆ ಎಂದು ವರದಿಯೊಂದು ಹೇಳಿದೆ. ಮೃತಪಟ್ಟವರಲ್ಲಿ ಬಹುತೇಕರು...

ನ್ಯಾಯಾಂಗದಲ್ಲಿ ಮಹಿಳಾ ನೇಮಕಾತಿ | ಕರ್ನಾಟಕದಿಂದ ಸಾಮಾಜಿಕ ಪರಿವರ್ತನೆ: ಸಿಜೆಐ ಚಂದ್ರಚೂಡ್‌

"ದೇಶದಲ್ಲಿಯೇ ಜಿಲ್ಲಾ ನ್ಯಾಯಾಂಗಕ್ಕೆ ಸಂಬಂಧಿಸಿದಂತೆ ಮಹಿಳಾ ನೇಮಕಾತಿ ವಿಚಾರದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದ್ದು, ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುತ್ತಿದೆ" ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್‌ ಶ್ಲಾಘಿಸಿದ್ದಾರೆ. ಬೆಂಗಳೂರಿನ ಜಿಕೆವಿಕೆಯಲ್ಲಿನ ಬಾಬು ರಾಜೇಂದ್ರ ಪ್ರಸಾದ್...

ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ; ಕರವೇ ಟಿ.ಎ.ನಾರಾಯಣಗೌಡ

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ...

ಚುನಾವಣಾ ಬಾಂಡ್ | ಕಂಪನಿಯಿಂದ ಕೋಟ್ಯಂತರ ದೇಣಿಗೆ ಸ್ವೀಕರಿಸಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಬಂಧನಕ್ಕೆ ಎಎಪಿ ಅಗ್ರಹ

ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿ ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು...

ಬ್ರಹ್ಮ ಬಂದರೂ ನಾಮಪತ್ರ ವಾಪಸ್ ಪಡೆಯಲ್ಲ, ಸ್ಪರ್ಧಿಸುವುದು ಖಚಿತ: ಕೆ ಎಸ್‌ ಈಶ್ವರಪ್ಪ

ಪಕ್ಷದ ವೇದಿಕೆಯಲ್ಲೇ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. ಬ್ರಹ್ಮ ಬಂದರೂ ನಾನು ನಾಮಪತ್ರ ವಾಪಸ್ ತೆಗೆದುಕೊಳ್ಳವುದಿಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪುನರುಚ್ಚರಿಸಿದರು. ಶಿವಮೊಗ್ಗದಲ್ಲಿ ಶನಿವಾರ...

ರಾಜ್ಯಕ್ಕೆ NDRF ನಿಧಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶಿಸಲು ಕೋರಿ ಸುಪ್ರೀಂ ಮೊರೆ: ಸಿದ್ದರಾಮಯ್ಯ

ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕೇಂದ್ರದಿಂದ ನಮ್ಮ...

ಬಿಜೆಪಿಯವರಂತೆ ಸುಳ್ಳು ಹೇಳಲ್ಲ, ಜನರ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.‌ ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ,...

ಮಾಜಿ ಸಂಸದ ಸಿ ಪಿ ಮೂಡಲಗಿರಿಯಪ್ಪ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ ಸಿ ಪಿ ಮೂಡಲಗಿರಿಯಪ್ಪ ಶನಿವಾರ (ಮಾ.23) ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ...

ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ: ಲೈಂಗಿಕ ಕಿರುಕುಳಕ್ಕೆ ಬೇಸತ್ತು ದಯಾಮರಣಕ್ಕೆ ಮನವಿ ಮಾಡಿದ ಸಿಬ್ಬಂದಿ

ಕೆಲಸ ಮಾಡುವ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆಯೋಪಿಸಿದ್ದ ;ರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿಯೊಬ್ಬರು, ಇದೀಗ ದಯಾಮರಣ ಕೋರಿ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಮಹಿಳಾ ವಿಶ್ವವಿದ್ಯಾಲಯದ ಉದ್ಯಾನವನ ವಿಭಾಗದಲ್ಲಿ...

ಹೋಳಿ ‘ರೈನ್‌ ಡ್ಯಾನ್ಸ್‌’ ಪ್ರಕಟಿಸಿದ್ದ ಹೊಟೇಲ್‌ಗಳಿಗೆ ನೊಟೀಸ್‌; ಡ್ರೈ ಹೋಳಿ ಆಚರಿಸಲು ಜಲಮಂಡಳಿ ಸೂಚನೆ

ಹೋಳಿ ಹಬ್ಬ ಆಚರಣೆಗೆ 'ರೈನ್ ಡ್ಯಾನ್ಸ್‌' ಆಯೋಜಿಸುವುದಾಗಿ ಹೇಳಿದ್ದ ಹೋಟೇಲ್‌ಗಳಿಗೆ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೆ, 'ಡ್ರೈ ಹೋಳಿ' ಆಚರಿಸುವಂತೆ ಸೂಚನೆ ನೀಡಿದ್ದಾರೆ. ಹೋಳಿ ಆಚರಣೆಗೆ ರೈನ್‌ ಡ್ಯಾನ್ಸ್‌ ಆಯೋಜಿಸುವುದಾಗಿ ಪ್ರಕಟಿಸಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ