ರಾಜ್ಯ

ಬ್ರಾಹ್ಮಣ-ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ₹5.53 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ

ಬ್ರಾಹ್ಮಣ ಸಮಾಜದ 2710 ವಿದ್ಯಾರ್ಥಿಗಳಿಗೆ ₹3.78 ಕೋಟಿ ರೂ. ಆರ್ಯ ವೈಶ್ಯ ಸಮಾಜದ 1,357 ವಿದ್ಯಾರ್ಥಿಗಳಿಗೆ ₹1.75 ಕೋಟಿ ರೂ ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಸಮಾಜದ 4,067 ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ...

ಯಾದಗಿರಿ | ಮೌಢ್ಯಕ್ಕೆ ಸೆಡ್ಡು : ಮದುವೆ ಮಂಟಪದಲ್ಲಿ ಮೃತ ಶಾಸಕ, ರೈತರಿಗೆ ಶ್ರದ್ದಾಂಜಲಿ

ಬಹಳಷ್ಟು ಜನರಲ್ಲಿ ತಪ್ಪು ತಿಳುವಳಿಕೆ ಇದೆ. ಮದುವೆಗಳು ಶುಭ ಶಕುನ, ಮರಣಗಳು ಅಪಶಕುನ ಎನ್ನುತ್ತಾರೆ. ಆದರೆ ಇಲ್ಲೊಂದು ಮದುವೆ ಮಂಟಪದಲ್ಲಿ ಅಗಲಿದ ರೈತರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದು ಜರುಗಿದ...

‘ನಾಸೀರ್ ಸಾಬ್ ಝಿಂದಾಬಾದ್’ ಘೋಷಣೆಯನ್ನು ‘ಪಾಕಿಸ್ತಾನ್ ಝಿಂದಾಬಾದ್’ ಎಂದು ತಿರುಚಿದ ಮಾಧ್ಯಮಗಳು

ರಾಜ್ಯಸಭೆಯ 4 ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ವಿಧಾನಸೌಧದ ಆವರಣದಲ್ಲಿ ನಡೆದ ಸಂಭ್ರಮಾಚರಣೆಯ ವೇಳೆ ನಾಸೀರ್ ಹುಸೇನ್...

ಬೆಂಗಳೂರು | ಚಿನ್ನಾಭರಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ಆರೋಪಿಯ ಬಂಧನ

ಚಿನ್ನಾಭರಣಕ್ಕಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. ಕೊಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಒಂದು ವಾರದ ಹಿಂದೆ ಮಹಿಳೆಯ ಕೊಲೆ ನಡೆದಿದೆ. ಯಾವುದೇ...

ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಪ್ರಕರಣ ಭೇಧಿಸಿದ ರೈಲ್ವೆ ಪೊಲೀಸರು

ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಇದೀಗ ಪ್ರಕರಣವನ್ನು ಭೇಧಿಸಿರುವ ಪೊಲೀಸರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ. ಸಾಗರ (32) ಮೃತ ವ್ಯಕ್ತಿ....

ಬೆಂಗಳೂರು | ವ್ಹೀಲಿಂಗ್ ಮಾಡುವವರ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಳವಾಗಿದ್ದು, ಪೊಲೀಸರು ಎಷ್ಟೇ ಕ್ರಮ ಕೈಗೊಂಡರು ಯುವಕರು ಮಾತ್ರ ಬುದ್ಧಿ ಕಲಿಯುತ್ತಿಲ್ಲ. ವ್ಹೀಲಿಂಗ್ ಮಾಡುತ್ತಿದ್ದ ಯುವಕನೊಬ್ಬ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಘಟನೆ...

ರಾಜ್ಯಸಭಾ ಚುನಾವಣೆ | ಫಲಿತಾಂಶ ಪ್ರಕಟ, ನಿರೀಕ್ಷೆಯಂತೆ ಕಾಂಗ್ರೆಸ್‌ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮತದಾನ ನಡೆದಿದ್ದು,...

ಬಿಜೆಪಿಯವರು 48 ಮತ ತೆಗೆದುಕೊಂಡು, ಜೆಡಿಎಸ್ ಅನ್ನು ಕೈಬಿಟ್ಟಿದ್ದಾರೆ: ಡಿ ಕೆ ಶಿವಕುಮಾರ್ ಟಾಂಗ್

"ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ...

ಎಸ್‌ ಟಿ ಸೋಮಶೇಖರ್‌ ವಿರುದ್ಧ ಕ್ರಮ; ಹಿರಿಯ ವಕೀಲರ ಜೊತೆ ಚರ್ಚಿಸಿ ನಿರ್ಧಾರ: ಆರ್‌ ಅಶೋಕ್‌

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಅವರು ಅಡ್ಡಮತದಾನ ಮಾಡಿರುವ ಬಗ್ಗೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಪ್ರತಿಕ್ರಿಯಿಸಿದ್ದು, "ಹೈಕೋರ್ಟ್‌ನ ಹಿರಿಯ ವಕೀಲರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತಗೆದುಕೊಳ್ಳಲಾಗುವುದು"...

₹2.3 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳ ವಶ: ಪೊಲೀಸ್ ಆಯುಕ್ತ ದಯಾನಂದ

ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಡ್ರಗ್ ಪೆಡ್ಲರ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಬರೋಬ್ಬರಿ ಒಟ್ಟು ₹2,35,36,000 ಕೋಟಿ ಮೌಲ್ಯದ ನಿಷೇಧಿತ...

ಬೆಂಗಳೂರು | ನಡೆದುಕೊಂಡು ಹೋಗುತ್ತಿದ್ದ ಹಿರಿಯ ವಕೀಲರೊಬ್ಬರಿಗೆ ಬೈಕ್‌ ಡಿಕ್ಕಿ: ಸಾವು

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಕೀಲರೊಬ್ಬರಿಗೆ ಬೈಕ್‌ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೆ.ಟಿ.ಡಾಕಪ್ಪ ಮೃತಪಟ್ಟವರು. ಶಿವಮೊಗ್ಗದ ತೀರ್ಥಹಳ್ಳಿಯ ಕೌರಿ ಮೂಲದವರಾದ ಇವರು ಹೈಕೋರ್ಟ್ ಹಾಗೂ ಇತರ...

ಬೆಂಗಳೂರು | ಇನ್ನುಮುಂದೆ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರ ಚಿತ್ರೀಕರಣ ನಿರ್ಬಂಧ

ಸದಾ ಜನರಿಂದ ತುಂಬಿರುವ ರಾಜಧಾನಿ ಬೆಂಗಳೂರಿನ ಪ್ರಮುಖ ಸ್ಥಳವಾದ ಚರ್ಚ್ ಸ್ಟ್ರೀಟ್‌ನಲ್ಲಿ ಇನ್ನುಮುಂದೆ ಚಲನಚಿತ್ರ ಚಿತ್ರೀಕರಣ ಮಾಡುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ವಿಶೇಷವಾಗಿ ವಾರಾಂತ್ಯದಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ