ರಾಜ್ಯ

ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ: ಪ್ರಲ್ಹಾದ ಜೋಶಿ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಂತೂ ಮಾನ, ಮರ್ಯಾದೆ ಇಲ್ಲ. ಹಾಗಂತ ಬೇರೆಯವರಿಗೂ ಇಲ್ಲ ಎಂದೇ ಸಿದ್ದರಾಮಯ್ಯ ಭಾವಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದರು. ನವಲಗುಂದ ಕಾಂಗ್ರೆಸ್ ಕಾರ್ಯಕ್ರಮದ ಭಾಷಣದಲ್ಲಿ ತಮ್ಮ...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ಗಾಲಿ ಜನಾರ್ದನ ರೆಡ್ಡಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP)ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. ಸಚಿವ...

ಕನ್ನಡಿಗರ ತೆರಿಗೆ ಹಣ ಬೇಕಾಬಿಟ್ಟಿ ಖರ್ಚು ಮಾಡುವುದೇ ಮಜಾವಾದಿ ಸರ್ಕಾರದ ಅಜೆಂಡಾ: ಬಿಜೆಪಿ ಟೀಕೆ

"ಇಡೀ ಸಮಸ್ತ ಕರ್ನಾಟಕದ ಜನತೆಯ ಕಿವಿ ಮೇಲೆ ಹೂವಿಟ್ಟು ಅಧಿಕಾರಕ್ಕೆ ಬಂದ‌ ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರ, ಇದೀಗ ಕನ್ನಡಿಗರ‌ ತೆರಿಗೆ ಹಣದಲ್ಲಿ ಮೋಜು, ಮಸ್ತಿ ಮಾಡುತ್ತಾ ರೆಸಾರ್ಟ್‌ವರೆಗೂ ತಲುಪಿದೆ" ಎಂದು ಬಿಜೆಪಿ...

ರಾಜಧಾನಿಯಲ್ಲಿ ಆಟೋ ಚಾಲಕರ ದರ್ಬಾರ್‌: ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ; ಸಾರ್ವಜನಿಕರ ಆಕ್ರೋಶ

ಭಾರತದ ಹೈಟೆಕ್ ಉದ್ಯಮದ ಕೇಂದ್ರವಾದ ಬೆಂಗಳೂರಿನಲ್ಲಿ ಆಟೋಗಳು ಬಡವರ ರಥ ಎಂದೆನಿಸಿಕೊಂಡಿದ್ದವು. ಆದರೆ, ಈಗ ನಗರದಲ್ಲಿ ಆಟೋ ಚಾಲಕರದ್ದೇ ದರ್ಬಾರ್ ನಡೆಯುತ್ತಿದೆ. ಮೊದಲೆಲ್ಲ ರಾತ್ರಿ ವೇಳೆ ಮಾತ್ರ, ಮೀಟರ್‌ಗಿಂತ ಹೆಚ್ಚು ಹಣ ಕೇಳುತ್ತಿದ್ದ...

₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ

“ಅಮೃತ್ ಭಾರತ ನಿಲ್ದಾಣ ಯೋಜನೆಯಡಿ ₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು ಬೆಂಗಳೂರು ವಿಭಾಗದಲ್ಲಿ ಇತರ ಮೂಲಸೌಕರ್ಯ ಕಾಮಗಾರಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಜತೆಗೆ, ರಾಜ್ಯದ ನಾನಾ ಜಿಲ್ಲೆಗಳ, ತಾಲೂಕುಗಳ...

ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

ಬೆಂಗಳೂರಿನ ಆನೇಕಲ್‌ ಬಳಿಯ ಕಾಳನಾಯಕನಹಳ್ಳಿ ಸಮೀಪದ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಹರ್ಷಿತ್ ಕೊಂಟಾಳ ಎಂದು ಗುರುತಿಸಲಾಗಿದೆ. ಈತ ಆನೇಕಲ್‌ನ ಅಲಯೆನ್ಸ್​ ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದು,​...

ಬೆಂಗಳೂರು | ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಅಪಹರಣ: ಆರೋಪಿಗಳ ಬಂಧನ

ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿ ಆತನನ್ನು ಅಪಹರಿಸಿ ಹಲ್ಲೆ ಮಾಡಿ ಹಣ ಎಗರಿಸಿದ್ದ ಖದೀಮರನ್ನು ಇದೀಗ ಬೊಮ್ಮನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಲೋಕ್ ರಾಣಾ ಅಪಹರಣಕ್ಕೊಳಗಾದವರು. ಇವರು...

ಬೆಂಗಳೂರು | ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಯುವನಿಧಿ ಯೋಜನೆ ಪ್ರಯೋಜನವನ್ನು ಪ್ರತಿ ತಿಂಗಳೂ ಪಡೆಯಬೇಕಿದ್ದರೆ, ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯವಾಗಿದೆ. ಫೆ.29ರೊಳಗೆ ಸ್ವಯಂ ಘೋಷಣೆ ಅಪ್‌ಲೋಡ್ ಮಾಡಬೇಕೆಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ. ಈ...

ಬೆಂಗಳೂರು | ಹಳೆ ವೈಷಮ್ಯ; ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನ ಕೊಚ್ಚಿ ಕೊಲೆ

ಹಳೆ ವೈಷಮ್ಯದ ಹಿನ್ನೆಲೆ, ಯುವಕನೊಬ್ಬನನ್ನು ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ. ವಿಜಯ್ ಕುಮಾರ್ (27) ಕೊಲೆಯಾದವನು. ಫೆ.25ರಂದು ನಸುಕಿನ ಜಾವ 4 ಗಂಟೆ...

‘ದೇವಾಲಯದ ತೀರ್ಥ ಪ್ರಸಾದ ಬೇಡ, ಉನ್ನತ ಶಿಕ್ಷಣಕ್ಕಾಗಿ ಬಸ್‌ ಬೇಕು’; ಸಿಎಂಗೆ ಪತ್ರ ಬರೆದ ವಿದ್ಯಾರ್ಥಿನಿ

“ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ. ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳು ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು ಗ್ರಾಮಾಂತರದ ತಾವರಕೆರೆ...

ಕಲಬುರಗಿ | ಕೆಇಎ ಪರೀಕ್ಷೆ ಅಕ್ರಮ ಪ್ರಕರಣ : ಹಾಸ್ಟೆಲ್‌ ವಾರ್ಡನ್‌ ಬಂಧನ

ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ನೇಮಕಾತಿ ಪರೀಕ್ಷೆ ಬರೆಯಲು ಸಹಕರಿಸಿದ ಪ್ರಕರಣ ಸಂಬಂಧ ಪರೀಕ್ಷಾ ಮೇಲ್ವಿಚಾರಕರಿಗೆ ಹಣ ನೀಡಿದ ಆರೋಪದಡಿ ಚಿಕ್ಕಬಳ್ಳಾಪುರದ ಸಮಾಜ ಕಲ್ಯಾಣ ಇಲಾಖೆಯ ಚಿಕ್ಕಬಳ್ಳಾಪುರದ ವೃತ್ತಿಪರ ಹಾಸ್ಟೆಲ್ ವಾರ್ಡನ್ ಬಸವರಾಜ್...

ಕಾಂಗ್ರೆಸ್‌ ಸೇರುವ ವದಂತಿ ನಡುವೆಯೇ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಜೆಡಿಎಸ್‌ ಶಾಸಕ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಮಾಡಿಕೊಂಡ ಮೈತ್ರಿಯನ್ನು ಬಹಿರಂಗವಾಗಿಯೇ ವಿರೋಧಿಸಿದ್ದ ಯಾದಗಿರಿಯ ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ವದಂತಿ ಹರಡಿದೆ. ಈ ವದಂತಿಯ ಬೆನ್ನಲ್ಲೇ...

ಈ ಹೊತ್ತಿನ ಪ್ರಮುಖ ಸುದ್ದಿ