ರಾಜ್ಯ

ಬಜೆಟ್ ಅಧಿವೇಶನ | ‘ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಲು ಅವಕಾಶವಿಲ್ಲ’ ಎಂದ ರಾಜ್ಯ ಸರ್ಕಾರ

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದೆ. ಅತಿಥಿ ಉಪನ್ಯಾಸಕರ...

ಬಜೆಟ್‌ ಅಧಿವೇಶನ | ಕೊಬ್ಬರಿ ಕುರಿತ ಚರ್ಚೆ: ಶಾಸಕರ ನಡುವೆ ವಾಕ್ಸಮರ

ವಿಧಾನಸಭೆಯ ಎರಡನೇ ದಿನದ ಕಲಾಪದಲ್ಲಿ ಕೊಬ್ಬರಿ ಬೆಲೆ ಕುಸಿತ ಮತ್ತು ಖರೀದಿ ಕೇಂದ್ರ ಸ್ಥಗಿತ ವಿಷಯವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ವಾಕ್ಸಮರ ನಡೆಯಿತು. ಕಲಾಪದಲ್ಲಿ ಕೊಬ್ಬರಿ ಬೆಲೆ ಕುಸಿತ ಹಾಗೂ ಖರೀದಿ...

ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಸಿಎಂ ಡಿ ಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಎಫ್‌ಐಆರ್‌

ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಪೊಲೀಸರು ನಾಲ್ಕು ದಿನಗಳ ಹಿಂದೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. 2013ರ ಏಪ್ರಿಲ್‌ 1ರಿಂದ 2018ರ ಏಪ್ರಿಲ್‌ 30ರ ಅವಧಿಯಲ್ಲಿ...

ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣರ ಭಾವಚಿತ್ರ ಬಿಡುಗಡೆ, ಫೆ.17ರಿಂದ ಸರ್ಕಾರಿ ಕಚೇರಿಗಳಲ್ಲಿ ಅಳವಡಿಕೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಸ್ಕೃತಿಕ ನಾಯಕ- ವಿಶ್ವಗುರು ಬಸವಣ್ಣನವರ ಭಾವಚಿತ್ರ ಮತ್ತು ವಚನ‌ ವಿವೇಕ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ಬಳಿಕ...

‌ಬಜೆಟ್‌ ಅಧಿವೇಶನ | ₹50 ಸಾವಿರ ಕೋಟಿ ಹೂಡಿಕೆ, 58 ಸಾವಿರ ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ್

2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ₹50,025 ಕೋಟಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ...

ಕೋಟಿ ಲೆಕ್ಕದಲ್ಲಿ ಉದ್ಯೋಗ ಭರವಸೆ ನೀಡಿ, ಲಕ್ಷದಲ್ಲಿ ಸಾಧನೆ ಹೇಳುವುದು ತಮಾಷೆ ಅಲ್ಲವೇ ಮೋದಿ?: ಸಿದ್ದರಾಮಯ್ಯ

2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ, ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು...

ಡಿ ಕೆ ಶಿವಕುಮಾರ್, ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ದೂರು

ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ...

‌ಸದ್ಯದಲ್ಲೇ ರಾಜ್ಯ ಸರ್ಕಾರದಿಂದ `ಶುದ್ಧ ಇಂಧನ ನೀತಿ’ ಜಾರಿ: ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌

ಯುನೈಟೆಡ್ ಕಿಂಗ್ಡಮ್ ಕಾರ್ಯದರ್ಶಿ (ವೇಲ್ಸ್) ಡೇವಿಡ್ ಡೇವಿಸ್ ಅವರು ಸೋಮವಾರ ಇಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜ್ಯದೊಂದಿಗೆ ಹೆಚ್ಚಿನ ಕೈಗಾರಿಕಾ ಸಹಭಾಗಿತ್ವ...

ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರ್ಕಾರ: ಕುಮಾರಸ್ವಾಮಿ ವಾಗ್ದಾಳಿ

ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಲಾದ ರಾಜ್ಯಪಾಲರ ಭಾಷಣದ...

ಜೆಡಿಎಸ್‌ ಮತ್ತು ಬಿಜೆಪಿಯವರು ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸಿದ್ದಾರೆ: ಡಿ ಕೆ ಶಿವಕುಮಾರ್‌ ಆರೋಪ

"ಜೆಡಿಎಸ್‌ ಮತ್ತು ಬಿಜೆಪಿಯವರು ಸೇರಿಕೊಂಡು ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸುತ್ತಿದ್ದಾರೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಲ್ಲಿ (ಇ.ಡಿ) ಏನು ಮಾಡಿಸುತ್ತಿದ್ದಾರೆ ಎಂಬುದು ಗೊತ್ತಿದೆ. ಸಮಯ ಬಂದಾಗ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ" ಎಂದು ಡಿಸಿಎಂ...

ಕೇಸರಿ ಬಿಜೆಪಿಯವರ ಮನೆ ಆಸ್ತಿಯೇ: ಡಿಸಿಎಂ ಡಿ ಕೆ ಶಿವಕುಮಾರ್‌ ಪ್ರಶ್ನೆ

"ನಮ್ಮ ಸರ್ಕಾರ ಇಡೀ ದೇಶಕ್ಕೆ ಕರ್ನಾಟಕ ಮಾದರಿಯನ್ನು ಪರಿಚಯಿಸಿದೆ. ಬಸವಣ್ಮನವರ ನುಡಿದಂತೆ ನಡೆಯಬೇಕು ಎನ್ನುವ ತತ್ವದಂತೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಂಟಿ ಅಧಿವೇಶನ ಉದ್ದೇಶಿಸಿ...

ಮಾತು ಮತ್ತು ಕೃತಿಗಳಲ್ಲಿ ಕಾಂಗ್ರೆಸ್ ಸದಾ ಒಂದು, ಬಿಜೆಪಿ ಇದಕ್ಕೆ ತದ್ವಿರುದ್ಧ: ಎಂ ಬಿ ಪಾಟೀಲ್‌ ಕಿಡಿ

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕೊಟ್ಟಿದ್ದ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ನಡೆ-ನುಡಿ ಎರಡೂ ಒಂದಾಗಿದೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಇದನ್ನೇ ಹೇಳಲಾಗಿದೆ. ನಮ್ಮ ವಿರುದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ