ರಾಜ್ಯ

ತೆರಿಗೆ ವಂಚನೆ | ಬೆಂಗಳೂರಿನ ಖಾಸಗಿ ಕಂಪನಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಫೆಬ್ರುವರಿ 7ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ...

ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆ!

ಅನುದಾನ ನೀಡಿಕೆಯಲ್ಲಿ ತಾರತಮ್ಯ ನೀಡಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಅತ್ತ ದೆಹಲಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಇತ್ತ ಬೆಂಗಳೂರಿನಲ್ಲಿ ಪ್ರತಿಪಕ್ಷ ಬಿಜೆಪಿಯು...

ವರ್ಗಾವಣೆ ನಂತರ ಎನ್‌ಒಸಿ ಮತ್ತು ಎಲ್‌ಪಿಸಿ ಪಡೆಯದ ಪೊಲೀಸ್ ಅಧಿಕಾರಿ ಸಂಬಳ ಕಟ್

“ವರ್ಗಾವಣೆ ನಂತರ ಕೆಲಸಕ್ಕೆ ಸೇರುವ ಅಧಿಕಾರಿಗಳು ಕಡ್ಡಾಯವಾಗಿ ಎನ್‌ಒಸಿ (NOC) ಮತ್ತು ಎಲ್‌ಪಿಸಿ (LPC) ಪಡೆಯಬೇಕು. ಇಲ್ಲದಿದ್ದರೇ, ಅಂತಹವರ ಸಂಬಳ ಕಟ್ ಮಾಡಲಾಗುವುದು” ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರು ಆದೇಶ...

ದೆಹಲಿ ಚಲೋ | ಇದು ಎಲ್ಲ ರಾಜ್ಯಗಳ ಪ್ರಶ್ನೆ; ಅನ್ಯಾಯ ಮುಂದುವರಿಯಬಾರದು: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅನುದಾನದ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿದೆ. ಇದು ಕೇವಲ ಕರ್ನಾಟಕದ ಸಮಸ್ಯೆ ಮಾತ್ರ ಅಲ್ಲ. ಎಲ್ಲ ರಾಜ್ಯಗಳ ಸಮಸ್ಯೆ. ಹಾಗಾಗಿ, ಇಂತಹ ಅನ್ಯಾಯ ಮುಂದುವರಿಯಬಾರದು. ಹಾಗಾಗಿ, ಈ ದೆಹಲಿ...

‘ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ’ ಎಂದ ಚುನಾವಣಾ ಆಯೋಗ: ‘ಗಡಿಯಾರ’ ಕಳಕೊಂಡ ಶರದ್ ಪವಾರ್

ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಇಂಡಿಯಾ ಮೈತ್ರಿಯ ನಾಯಕರಾಗಿದ್ದ ಶರದ್‌ ಪವಾರ್‌ಗೆ ದೊಡ್ಡ ಹಿನ್ನಡೆಯಾಗಿದ್ದು, ತಾವೇ ಕಟ್ಟಿ ಬೆಳೆಸಿದ್ದ ಎನ್‌ಸಿಪಿ ಪಕ್ಷದ ಚಿಹ್ನೆಯಾದ ಗಡಿಯಾರ ಹಾಗೂ ಎನ್‌ಸಿಪಿ ಹೆಸರನ್ನು ಕಳೆದುಕೊಂಡಿದ್ದಾರೆ. 'ಅಜಿತ್ ಪವಾರ್ ಬಣವೇ...

ಬೆಂಗಳೂರು | ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ

ಜಮೀನು ಕಬಳಿಸಿದ ಆರೋಪದ ಮೇಲೆ ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಆರ್.ಆರ್.ನಗರದಲ್ಲಿ ಬಂಧಿಸಿದ್ದಾರೆ. ಬೇರೆಯವರ 16 ಎಕರೆ ಜಮೀನಿನ ನಕಲಿ ದಾಖಲೆ ಸೃಷ್ಟಿ ಮಾಡಿ, ಕಬಳಿಸಿದ ಆರೋಪದ ಮೇಲೆ ಜೇಡರಹಳ್ಳಿ...

ಬಿಬಿಎಂಪಿ | ಆಸ್ತಿಗೆ ತೆರಿಗೆ ಪಾವತಿದಾರರಿಗೆ ಶೇಕಡ 50ರಷ್ಟು ರಿಯಾಯಿತಿ

ಆರ್ಥಿಕ ವರ್ಷ ಮುಗಿಯುವುದರೊಳಗೆ ಆದಾಯ ಗುರಿ ತಲುಪಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೋಜನೆ ರೂಪಿಸಿದ್ದು, ಇದೀಗ ಆಸ್ತಿ ತೆರಿಗೆ ಪಾವತಿದಾರರಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಿದೆ. "ಆಸ್ತಿ ತೆರಿಗೆ ಬಾಕಿ...

ಕಾಂಗ್ರೆಸ್‌ ʼದಿಲ್ಲಿ ಯಾತ್ರೆʼ ಲೋಕಸಭೆ ಚುನಾವಣೆಯ ತಂತ್ರ ಅಷ್ಟೇ: ಎಚ್‌ ಡಿ ಕುಮಾರಸ್ವಾಮಿ

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ‌, ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು...

ನೈರುತ್ಯ ರೈಲ್ವೆ | ಜನವರಿ-2024 ರವರೆಗೆ 40.96 ಮಿಲಿಯನ್ ಟನ್ ಸರಕು ಸಾಗಣೆ: ₹4055.32 ಕೋಟಿ ಆದಾಯ

"ನೈರುತ್ಯ ರೈಲ್ವೆಯು ಸರಕು ಮತ್ತು ಪಾರ್ಸೆಲ್ ಸಾರಿಗೆ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಸರಕು ವಲಯದಲ್ಲಿ, ನೈರುತ್ಯ ರೈಲ್ವೆ ಏಪ್ರಿಲ್-2023 ರಿಂದ ಜನವರಿ-2024 ರವರೆಗೆ 40.96 ಮಿಲಿಯನ್ ಟನ್ ಸರಕು ಸಾಗಣೆ ಮಾಡಿದೆ....

ಒಂದೇ ವರ್ಷಕ್ಕೆ ಬೆಂಗಳೂರಿನಲ್ಲಿ ಕಡಿಮೆಯಾದ ಸಂಚಾರ ದಟ್ಟಣೆ: ಶ್ರೇಯಾಂಕದಲ್ಲಿ ಆರನೇ ಸ್ಥಾನ

ವಾಹನ ಸಂಚಾರ ದಟ್ಟಣೆಯಲ್ಲಿ ಕುಖ್ಯಾತಿ ಪಡೆದಿದ್ದ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ಸಂಚಾರ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆ ಹೊಂದಿದೆ. ಡಚ್ ಸಂಸ್ಥೆಯ ಟಾಮ್ ಬಿಡುಗಡೆ ಮಾಡುವ ಸರ್ವೆ ವರದಿ ಪ್ರಕಾರ ಜಾಗತಿಕ ಸಂಚಾರ...

ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ ಖಚಿತ:‌ ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಹೊಂದಾಣಿಕೆಯಿಂದ ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್​ಗೆ ಸಿಗುವುದು ಬಹುತೇಕ ಖಚಿತ ಎಂದು ಶ್ರೀನಿವಾಸಪುರ ಕ್ಷೇತ್ರದ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ ಬಹಿರಂಗಪಡಿಸಿದ್ದಾರೆ. ಹಾಲಿ ಸಂಸದ ಮುನಿಸ್ವಾಮಿ ಅವರಿಗೆ ಬಿಜೆಪಿಯಿಂದ ಈ...

ಮಂಗನಕಾಯಿಲೆ | ಆರೋಗ್ಯ ಇಲಾಖೆಯ ವೈಫಲ್ಯದಿಂದ ಇಬ್ಬರ ಸಾವು: ಆರ್ ಅಶೋಕ್ ಆರೋಪ

"ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್‌ಡಿ) ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ" ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್....

ಈ ಹೊತ್ತಿನ ಪ್ರಮುಖ ಸುದ್ದಿ