ರಾಜ್ಯ

ಜ. 22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ: ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸದ್ಯ ದೇಶಾದ್ಯಂತ ಪರ-ವಿರೋಧ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಎಲ್ಲ ಬೆಳವಣಿಗೆಯ ನಡುವೆ ಅಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ...

ಕೇಂದ್ರ ಸರ್ಕಾರ ಕರ್ನಾಟಕವನ್ನು ಪ್ರತಿಯೊಂದರಲ್ಲೂ ಸವತಿ ಮಗನಂತೆ‌ ನೋಡುತ್ತಿದೆ: ಸಚಿವ ಗುಂಡೂರಾವ್

ಜಿಎಸ್‌ಟಿ ಸಂಗ್ರಹದಲ್ಲಿ ನಮ್ಮ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ನಮಗೆ ಕೇಂದ್ರ ಕೊಡುತ್ತಿರುವ ತೆರಿಗೆ ಪಾಲು ಭಿಕ್ಷೆಯಂತಿದೆ. ತೆರಿಗೆ ಹಂಚಿಕೆ ಮಾತ್ರವಲ್ಲದೇ, ಪ್ರತಿಯೊಂದರಲ್ಲೂ ಕರ್ನಾಟಕವನ್ನು...

ಸಹಕಾರ ಕ್ಷೇತ್ರದಲ್ಲಿಯೂ ಕೇಂದ್ರ ಸರ್ಕಾರ ಹಿಡಿತ ಸಾಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ನಡೆ: ಸಿಎಂ ಸಿದ್ದರಾಮಯ್ಯ

ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರಗಳ ಮೇಲೆ ಕೇಂದ್ರ ಸರ್ಕಾರ ಸವಾರಿ ಮಾಡಲು ಹೊರಟಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವು ಸಾಹೇಬ್ ಥಾರೋಟ್...

ಬೆಂಗಳೂರು | ಕಲಾವಿದರಿಂದ ನೇರವಾಗಿ ಕಲಾಕೃತಿ ಖರೀದಿ; ಚಿತ್ರಸಂತೆಯಲ್ಲಿ ಜನವೋ ಜನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವರೇ ಮೇಳ, ಕಡಲೆಕಾಯಿ ಪರಿಷೆ, ಕೇಕ್ ಷೋ, ಸಿರಿಧಾನ್ಯ ಮೇಳ, ಸೇರಿದಂತೆ ಹಲವು ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ನಗರದ ಜನರು ವರ್ಷಪೂರ್ತಿ ಹೊಸತನ ನೋಡಲು, ಅರಿಯಲು ಈ ಸಂತೆ,...

ರಾಜ್ಯದ ಜನರಲ್ಲಿ ಭಯ ಹುಟ್ಟಿಸಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ: ಮಾಜಿ ಸಿಎಂ ಬೊಮ್ಮಾಯಿ

"ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ" ಎಂದು ಮಾಜಿ ಮುಖ್ಯಮಂತ್ರಿ...

ಮೆಣಸಿನಕಾಯಿ ಬೆಳೆ ಉಳಿಸಲು ಕೃಷ್ಣಾ ನದಿಯಿಂದ ನೀರು ಹರಿಸಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ಮೆಣಸಿನಕಾಯಿ ಬೆಳೆ ಉಳಿಸಲು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ 2.75 ಟಿಎಂಸಿ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಭಾನುವಾರ...

ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ತಮ್ಮನ್ನು ಭೇಟಿಯಾದ...

ಲೋಕಸಭೆ ಚುನಾವಣೆಗೆ ಅಲ್ಪಸಂಖ್ಯಾತ ಸಮುದಾಯ ಕಾಂಗ್ರೆಸ್ ಜೊತೆ ನಿಲ್ಲಬೇಕು: ಸಚಿವ ಜಮೀರ್

ಲೋಕಸಭೆ ಚುನಾವಣೆ ನಮಗೆಲ್ಲ ಅತಿ ದೊಡ್ಡ ಸವಾಲಾಗಿದ್ದು ದೇಶದ ಹಿತಾಸಕ್ತಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ...

ಮಹಿಳೆಯರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಈ ಸಮ್ಮೇಳನ ದಿಕ್ಸೂಚಿ: ಲೇಖಕಿ ರೂಪ ಹಾಸನ

“ಪ್ರಜಾತಂತ್ರವನ್ನು ಬಲಿಕೊಟ್ಟು ಇಂದು ಫ್ಯಾಸಿಸ್ಟ್‌ ಶಕ್ತಿಗಳು ಬೆಳೆಯುವಂತಾಗಿದೆ. ಪ್ರಜಾತಾಂತ್ರಿಕ ಮೌಲ್ಯಗಳೇ ಅಸ್ತಿತ್ವದಲ್ಲಿ ಇಲ್ಲದಂತಹ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಈ ಸಮ್ಮೇಳನ ದಿಕ್ಸೂಚಿಯಾಗಲಿ" ಎಂದು ಲೇಖಕಿ ರೂಪ ಹಾಸನ...

ಚಿತ್ರಸಂತೆ | ಜನವರಿ 7ರಂದು ಕುಮಾರ ಕೃಪಾ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ

ರಾಜ್ಯ ರಾಜಧಾನಿ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಜನವರಿ 7ರಂದು 21ನೇ ಚಿತ್ರಸಂತೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಬೆಂಗಳೂರು ಸಂಚಾರ ಪೊಲೀಸ್‌ ವಾಹನ ಸವಾರರಿಗೆ ಪರ್ಯಾಯ...

ಜಾತಿಗಣತಿ ವರದಿ ಸ್ವೀಕಾರ ಮಾಡಲು ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿ, ಶ್ರಮಿಕ...

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು

ಕನ್ನಡದಲ್ಲಿ ನಾಮಫಲಕ ಅಳವಡಿಸುವ ವಿಚಾರವಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದ ಪ್ರತಿಭಟನೆಯ ವೇಳೆ ದಾಂಧಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ನ್ಯಾಯಾಲಯವು ಇಂದು(ಜ.6) ಜಾಮೀನು ಮಂಜೂರು ಮಾಡಿದೆ. ಜಾಮೀನು...

ಈ ಹೊತ್ತಿನ ಪ್ರಮುಖ ಸುದ್ದಿ