ರಾಜ್ಯ

ಸಂಸತ್ ಭದ್ರತಾ ಲೋಪ | ರಾಜ್ಯಕ್ಕೆ ಕಾಲಿಟ್ಟರೂ ಮಾಧ್ಯಮಗಳಿಗೆ ಒಂದೇ ಒಂದು ಹೇಳಿಕೆ ನೀಡದ ಸಂಸದ ಪ್ರತಾಪ್ ಸಿಂಹ!

ಡಿಸೆಂಬರ್ 13ರಂದು ಸಂದರ್ಶಕರ ಸೋಗಿನಲ್ಲಿ ಸಂಸತ್ತಿಗೆ ಬಂದಿದ್ದ ಇಬ್ಬರು ಯುವಕರು ಏಕಾಏಕಿ ಲೋಕಸಭೆಯ ಹಾಲ್‌ಗೆ ಜಿಗಿದು ಸ್ಮೋಕ್‌ ಬಾಂಬ್‌ ಸಿಡಿಸಿ, ಭದ್ರತಾ ಲೋಪ ಎಸಗಿದ್ದ ಪ್ರಕರಣದಲ್ಲಿ ಪಾಸ್ ನೀಡಿದ್ದ ಮೈಸೂರು-ಕೊಡಗು ಬಿಜೆಪಿ ಸಂಸದ...

ಪ್ರಧಾನಿಯಲ್ಲ, ಮೂರು ಲೋಕಕ್ಕೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಿ: ಸಿ ಟಿ ರವಿ ಲೇವಡಿ

ಕಾಂಗ್ರೆಸ್‌ನ ಇಂದಿನ ಪರಿಸ್ಥಿತಿ ನೋಡಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನ ಗೆಲ್ಲುವುದು ಕಷ್ಟ. ಇಂತಹ ಸ್ಥಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಮಾಡ್ತೀವಿ ಅಂದ್ರೇನು? ಮಾಡಲ್ಲ ಅಂದ್ರೇನು? ಬೇಕಾದರೆ ಮೂರು...

ಹಿಜಾಬ್‌ ವಾಪಸ್‌ | ಬಿಜೆಪಿ ಹೋರಾಟ ಮಾಡುವ ಅಗತ್ಯವಿಲ್ಲ: ಬಿ ಎಸ್‌ ಯಡಿಯೂರಪ್ಪ

ಹಿಜಾಬ್‌ ವಾಪಸ್‌ ಪಡೆಯುವುದರ ವಿರುದ್ಧ ಬಿಜೆಪಿ ಹೋರಾಟ ಮಾಡುವ ಅಗತ್ಯವಿಲ್ಲ. ಇದೊಂದು ಭಂಡ ಸರ್ಕಾರ, ತಮ್ಮ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಆಗದೇ ಇಂತಹ ಕೆಲಸಕ್ಕೆ ಕೈಹಾಕಿ ಜನರ ದಾರಿ ತಪ್ಪಿಸುತ್ತಿದ್ದಾರೆ ಅಷ್ಟೇ. ಇದನ್ನು...

ಹಿಜಾಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯನವರಿಗೆ ಧನ್ಯವಾದ ಎಂದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ

ಮೈಸೂರು ಜಿಲ್ಲೆಯ ನಂಜನಗೂಡು ಸಮೀಪ ನಡೆದ ಕಾರ್ಯಕ್ರಮವೊಂದರ ವೇಳೆ ನಿನ್ನೆ ಸಿಎಂ ಸಿದ್ದರಾಮಯ್ಯನವರು 'ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧ ವಾಪಸ್ ತಗೋತೇವೆ' ಎಂದು ಮಹತ್ವದ ಹೇಳಿಕೆ ನೀಡಿದ್ದರು. ಹಿಜಾಬ್ ನಿಷೇಧ ಹಿಂಪಡೆಯಲು ಮುಖ್ಯಮಂತ್ರಿ...

ಹಿಜಾಬ್ ನಿಷೇಧ ವಾಪಸ್‌ ಹಿಂದೆ ಸಿದ್ದರಾಮಯ್ಯ ಕುತಂತ್ರ ಅಡಗಿದೆ: ಆರ್‌ ಅಶೋಕ್

ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, "ಗ್ಯಾರಂಟಿಗಳಿಂದ...

ರಾಜ್ಯದಲ್ಲಿ ಶುಕ್ರವಾರ 78 ಜನರಿಗೆ ಕೊರೋನಾ ಸೋಂಕು ದೃಢ: ಓರ್ವ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಶುಕ್ರವಾರ 78 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ...

ಬೆಂಗಳೂರು | ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್: ಮುಖ್ಯ ಶಿಕ್ಷಕಿ ಬಂಧನ

ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಬಂಧಿತೆ. ಬಿಇಒ ಆಂಜನಪ್ಪ ನೀಡಿದ ದೂರಿನನ್ವಯ...

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ: ಸಿಎಂ ಸಿದ್ದರಾಮಯ್ಯ

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ, ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು...

ಭ್ರಷಾಚಾರ ಕುರ್ಚಿಯ ಪಕ್ಕ ಕೂರಲು ಇಷ್ಟ ಪಡಲ್ಲ, ರಾಜಕಾರಣದಿಂದ ದೂರ ಉಳಿಯುವೆ: ಎ.ನಾರಾಯಣಸ್ವಾಮಿ

ಭ್ರಷ್ಟ ವ್ಯವಸ್ಥೆಯಲ್ಲಿ ಮುಂದುವರಿಯುವ ರಾಜಕಾರಣಿ ನಾನಲ್ಲ. ರಾಜಕಾರಣದಿಂದ ದೂರ ಉಳಿಯುವ ಬಗ್ಗೆ ಆಲೋಚಿಸಿದ್ದೇನೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, "ಭ್ರಷಾಚಾರದ ಕುರ್ಚಿಯ...

ಉಡುಪು ಅವರವರ ಇಷ್ಟ; ಹಿಜಾಬ್ ನಿಷೇಧ ವಾಪಸ್ ತಗೋತೇವೆ: ಸಿಎಂ ಸಿದ್ದರಾಮಯ್ಯ

ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭ ಇಡೀ ದೇಶಾದ್ಯಂತ ಸುದ್ದಿಯಾಗಿದ್ದ ಹಿಜಾಬ್ ನಿಷೇಧ ವಿಚಾರದ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, "ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ" ಎಂದು ಹೇಳಿಕೆ ನೀಡಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು...

ಬೆಂಗಳೂರು | ಮನೆ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ: ದೂರು ದಾಖಲು

ಮನೆಯ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಅಪ್ಪ-ಮಗ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಬೆಂಗಳೂರಿನ ಆರ್‌ ಆರ್‌ ನಗರದ ಜವರೇಗೌಡ ನಗರದಲ್ಲಿ ಡಿ.20ರಂದು ನಡೆದಿದೆ....

ಮೋದಿ ಪ್ರತಿ ವಿದೇಶಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ; ಇದು ಮೋಜಲ್ಲವೇ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಹಸಿವಿನ ಸೂಚ್ಯಂಕದಲ್ಲಿ ಭಾರತ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಸಿಎಂ ಸಿದ್ದರಾಮಯ್ಯ...

ಈ ಹೊತ್ತಿನ ಪ್ರಮುಖ ಸುದ್ದಿ