ಚಳ್ಳಕೆರೆ | ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ; ಗಣಿತ ಶಿಕ್ಷಕನ ವಿರುದ್ಧ POCSO ಪ್ರಕರಣ

Date:

ಚಳ್ಳಕೆರೆಯಲ್ಲಿ ಶಿಕ್ಷಕನೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿ ಓ. ರಾಜಣ್ಣ ಚಳ್ಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿತ ಶಿಕ್ಷಕನಾಗಿದ್ದು, ಶಾಲೆಯ 16 ವರ್ಷದ ಬಾಲಕಿಯನ್ನು ಸತತವಾಗಿ ತನ್ನ ವಾಂಛೆಗೆ ಬಳಸಿಕೊಂಡಿದ್ದಾನೆ. ಬಾಲಕಿ ಗರ್ಭ ಧರಿಸಿದ ಮೇಲೆ ಆಕೆಗೆ ಗರ್ಭಪಾತ ಮಾಡಿಸಿದ್ದಾನೆಂಬ ಆರೋಪ ಕೇಳಿ ಬಂದಿದೆ. ಪೋಷಕರ ದೂರು ಆಧರಿಸಿ POCSO ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

ಚಳ್ಳಕೆರೆಯ ತಾಲೂಕು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹೀನ ಕೃತ್ಯ ಹೊರ ಸಮಾಜಕ್ಕೆ ತಿಳಿಯದಂತೆ ತಡೆಯಲು ಪ್ರಯತ್ನಿಸಿದ ರಾಜಣ್ಣ, ಗರ್ಭಪಾತ ಮಾಡಿಸಲು ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ ನರ್ಸಿಂಗ್ ಆಸ್ಪತ್ರೆಗೆ ಬಾಲಕಿಯನ್ನು ಕರೆದೊಯ್ದಿದ್ದ ಎನ್ನಲಾಗಿದೆ. ಆಸ್ಪತ್ರೆಯ ವೈದ್ಯೆ  ಶಂಕರ ಲಕ್ಷ್ಮಿ ಅಪ್ರಾಪ್ತ ಬಾಲಕಿಗೆ ಮಾತ್ರೆ ನೀಡಿ ಗರ್ಭಾಪಾತ ಮಾಡಿಸಿದ್ದು, ಇದರಿಂದ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾದದ್ದು ಪೋಷಕರ ಗಮನಕ್ಕೆ ಬಂದಿದೆ. ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಆರೋಪಿ ಎಸಗಿದ್ದ ದುಷ್ಕೃತ್ಯ ಅನಾವರಣಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ಇದನ್ನೂ ಓದಿ>ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; RSS ಮುಖಂಡನ ಬಂಧನ

ಸದ್ಯ ಗರ್ಭಪಾತ ಮಾಡಿಸಿದ ವೈದ್ಯೆ ಶಂಕರ ಲಕ್ಷ್ಮಿ ‌ವಿರುದ್ಧವೂ ದೂರು ದಾಖಲಾಗಿದೆ. ವಿದ್ಯೆ ಕಲಿಸುವ ಶಿಕ್ಷಕನೇ ಈ ಅಮಾನವೀಯ ಕೃತ್ಯಕ್ಕೆ ಕೈ ಹಾಕಿರುವುದರಿಂದ ಆಕ್ರೋಶಗೊಂಡಿರುವ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಆರೋಪಿ ಶಿಕ್ಷಕ ರಾಜಣ್ಣನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

ದೆಹಲಿ | ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಪೂರ್ವ ದೆಹಲಿಯ ಪ್ರೀತ್ ವಿಹಾರ್ ಪ್ರದೇಶದ ಕೆಫೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ...

ಭಾರತದ ಮೇಲೆ‌ ಹೊಸ ಸುಂಕ ಹೇರಲು ಟ್ರಂಪ್ ಆಡಳಿತ ಸಿದ್ಧತೆ; ಶೀಘ್ರವೇ ಅಧಿಕೃತ ಘೋಷಣೆ!

ನಾನಾ ರಾಷ್ಟ್ರಗಳು ದೇಶೀಯ ಕೈಗಾರಿಕಾ ಉತ್ಪಾದನೆಗೆ ಸರ್ಕಾರಿ ಸಬ್ಸಿಡಿ ಮತ್ತು ಬೆಂಬಲ...